News Kadaba

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜ.31. ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದ ಯುವಕ ಚೆನ್ನೈನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26)ಮೃತಪಟ್ಟ ಯುವಕ. ಕಾರ್ತಿಕ್ ಕಳೆದ 4 ವರ್ಷದಿಂದ ಹೊಳೆನರಸೀಪುರ ತಾಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಕರೆಮಾಡಿ ತಾನು ಚೆನ್ನೈನಲ್ಲಿದ್ದು, ಅಲ್ಲಿಗೆ ಬರುವಂತೆ ಹೇಳಿದ್ದಾಳೆ. ಆಕೆಯ ಮಾತು ನಂಬಿ ಅಲ್ಲಿಗೆ ಕಾರ್ತಿಕ್ ಹೋಗಿದ್ದಾನೆ. ಬಳಿಕ ಯುವತಿ ತಾನು ಹಾಸನದಲ್ಲಿಯೇ ಇದ್ದೇನೆ ಎಂದು ಯುವತಿ ಹೇಳಿದ್ದಾಳೆ. ಇದರಿಂದ ಮನನೊಂದ […]

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ನಗರದಲ್ಲಿ ಕಳ್ಳತನ, ದೌರ್ಜನ್ಯ, ಸುಲಿಗೆ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸ್‌ ಠಾಣೆಯಲ್ಲಿ ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬ್ರಾರ್‌ ಅಲಿಯಾಸ್‌ ಬಾಷ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಆಗಿದ್ದಾನೆ.ಪೊಲೀಸ್ ಕಾನ್‌ ಸ್ಟೇಬಲ್‌ ಪ್ರಕಾಶ್‌ ಅವರು ಆರೋಪಿ ಅಬ್ರಾರ್‌ ನ ಹ್ಯಾಂಡ್‌ ಕಪ್‌ ಹಾಗೂ ಲೀಡಿಂಗ್‌ ಚೈನ್‌ ಹಾಕಿ ಶೌಚಾಲಯಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಶೌಚಕ್ಕೆ ಹೋಗುವಂತೆ ಒಳ ಹೋದ ಆರೋಪಿ ಅಲ್ಲಿಂದ ಫಿನಾಯಿಲ್‌

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ. ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವಂತಿಲ್ಲ. ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ Read More »

ಕರ್ನಾಟಕ

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು,

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’ Read More »

ಕರಾವಳಿ

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಜ.31. ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ 5.56 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿವೆ. ಅದಾನಿ ಸಮೂಹ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಒಟ್ಟು 5.56 ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ Read More »

ರಾಷ್ಟ್ರೀಯ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ ➤ 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ

ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ ➤ 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ Read More »

ಕರ್ನಾಟಕ
Scroll to Top