News Kadaba

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯಾ, ಜ.30. 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಅವರ ಪತ್ನಿಯ ಕಣ್ಣೆದುರಲ್ಲೇ ಹಾವು ಕಚ್ಚಿದ್ದು, ವೈದ್ಯಕೀಯ ಸಿಬ್ಬಂದಿ ಆಗಮಿಸುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ನ್ಯೂ ಝೀಲ್ಯಾಂಡ್ ಹೆರಾಲ್ಡ್‌ನಲ್ಲಿ ಕುರಿತು ವರದಿ ಪ್ರಕಟವಾಗಿದೆ. ಇಲ್ಲಿನ ಕ್ವೀನ್ಸ್‌ಲ್ಯಾಂಡ್‌ನ ತಮ್ಮ ಖಾಸಗಿ ನಿವೇಶನದಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯ ಕೈಗೆ ಹಾವು ಕಚ್ಚಿತು. ಕೂಡಲೇ ಇವರ ಪತ್ನಿ ಆರೋಗ್ಯ ನೆರವಿಗಾಗಿ ತುರ್ತು ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಹೊತ್ತಿಗೆ ವೃದ್ಧ ವ್ಯಕ್ತಿ ಸಾವನ್ನಪ್ಪಿದ್ದರು. […]

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ.10 ರಂದು ಪೌರಕಾರ್ಮಿಕರ ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ’, ಟ್ಯಾಬ್ ವಿತರಣೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಜ.30. ಜಿಲ್ಲಾಡಳಿತ ವತಿಯಿಂದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಷೇಧ ಕುರಿತಂತೆ ಅರಿವು ಮತ್ತು ತರಬೇತಿ ಕಾರ್ಯಕ್ರಮವನ್ನು ಇದೇ ಫೆ.10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭೆಯಲ್ಲಿ ಜರುಗಿದ ಪೌರ ಕಾರ್ಮಿಕರ ಪ್ರತಿಭಾ ಪುರಸ್ಕಾರ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕಾರ್ಯಕ್ರಮ ದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಆಯೋಗದ

ಫೆ.10 ರಂದು ಪೌರಕಾರ್ಮಿಕರ ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ’, ಟ್ಯಾಬ್ ವಿತರಣೆ Read More »

ಕರ್ನಾಟಕ

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.30. ರೈಲು ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ-ಬೆಂಗಳೂರು ಡೆಮೋ ರೈಲು ಮಧ್ಯಾಹ್ನ 1-30 ಕ್ಕೆ ಭದ್ರಾವತಿಯ ಹುತ್ತಾ ಕಾಲೋನಿಯ ಬಳಿ ಚಲಿಸುವಾಗ ಹಳಿ ದಾಟುತ್ತಿದ್ದ 34 ವರ್ಷದ ಯುವಕನ ಮೇಲೆ ಹರಿದು ಹೋಗಿದೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ ಯುವಕನನ್ನ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಕಿವಿ ಸಹ ಮಂದವಾಗಿತ್ತು ಎಂದು ಹೇಳಲಾಗುತ್ತಿದೆ. ಈತ ಉಜ್ಜೈನಿಪುರದ 8 ನೇ ತಿರುವಿನ ನಿವಾಸಿಯಾಗಿದ್ದಾನೆ.

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ !

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಜ.30. ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು. ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವೀಕ್ಷಿಸಿದರು. ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ ! Read More »

ಕರಾವಳಿ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣದ ಅಬ್ದುಲ್ ರುಮೈಸ್ (27) ಮತ್ತು ಉಪ್ಪಳ ಪೆರಿಂಗಡಿಯ ಎಂ.ಕೆ ಮುಸ್ತಾಫಾ (39) ಬಂಧಿತರು ಎಂದು ತಿಳಿದುಬಂದಿದೆ. ಇವರಿಂದ 69 ಗ್ರಾಂ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಉಪ್ಪಳ ಪೇಟೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆ. ಇನ್ನು ಬಂಧಿತ ರುಮೈಸ್ ಐದು ವರ್ಷಗಳ ಹಿಂದೆ ನಡೆದ ಕೊಲೆ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಫೆಬ್ರವರಿ 1ರಿಂದ ಕೇಬಲ್ ಮತ್ತು ಡಿಟಿಎಚ್ ದರಗಳಲ್ಲಿ ಏರಿಕೆಯಾಗಲಿವೆ ಎಂದು ವರದಿಯಾಗಿದೆ. ಟೆಲಿಕಾಂ ನಿಯಂತ್ರಣ ಸಂಸ್ಥೆ ಪರಿಷ್ಕೃತ ದರ ಪಟ್ಟಿ ಅಂತಿಮಗೊಳಿಸಿದ್ದು, ಶೇ.30ರಷ್ಟು ದರ ಏರಿಸಲು ನಿರ್ಧರಿಸಲಾಗಿದೆ.ಪ್ರತಿ ಚಾನೆಲ್ ಗೆ 12 ರೂ.ನಿಂದ 19 ರೂ.ಗೆ ಏರಿಕೆಯಾಗಲಿವೆ. ಅಲ್ಲದೆ ಡಿಟಿಎಚ್ ದರದಲ್ಲಿ ಶೇ.19 ರಷ್ಡು ಏರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಕೇಬಲ್ ಆಪರೇಟರ್ಸ್ ಮತ್ತು ಟಿವಿ ಚಾನೆಲ್ ಕಂಪನಿಗಳು ದರ ಏರಿಕೆಗೆ ಹಿಂದೇಟು ಹಾಕುತ್ತಿವೆ. ಒಂದು ವೇಳೆ ದರ ಏರಿಸಿದರೆ

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ ! Read More »

ಕರ್ನಾಟಕ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ !

(ನ್ಯೂಸ್ ಕಡಬ)newskadaba.com ವಿಟ್ಲ, ಜ.30. ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ. ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top