News Kadaba

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. […]

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಶೌಚಾಲಯಗಳಲ್ಲಿ ಮೂಲಸೌಕರ್ಯ ಇಲ್ಲದಿರುವುದು, ಅಸಮರ್ಪಕ ನೀರಿನ ಪೂರೈಕೆಯಿಂದಾಗಿ ವಿದ್ಯಾರ್ಥಿನಿಯರು ಪ್ರತೀ ತಿಂಗಲೂ 3-4 ದಿನಗಳ ಕಾಲ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿನಿಯರು ಋತು ಚಕ್ರ ಸಮಯದಲ್ಲಿ ಗೈರು ಹಾಜರಾಗುತ್ತಿದ್ದರು ಎಂಬುದನ್ನು ಅಧ್ಯಯನವೊಂದು ತಿಳಿಸಿತ್ತು. ಈ ಸಮಸ್ಯೆಯನ್ನ ಮನಗಂಡ ಎನ್ವಿರಾನ್ಮೆಂಟ್ ಅಸೋಸಿಯೇಷನ್ ​​ಆಫ್ ಬೆಂಗಳೂರು (ಇಎಬಿ), ಸರ್ಕಾರೇತರ ಸಂಸ್ಥೆಯು ಸೌಲಭ್ಯಗಳನ್ನು ಸ್ಥಾಪಿಸುವುದರ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು Read More »

ಕರ್ನಾಟಕ

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                              

(ನ್ಯೂಸ್ ಕಡಬ)newskadaba.com ಕೋಲಾರ, ಜ.28. ಏನಾದರೂ ಸಾಧಿಸಲೇಬೇಕು ಎಂಬ ಹಠವಿದ್ದರೆ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತೆ. ಆದ್ರೆ ಕಠಿಣ ಸವಾಲುಗಳಷ್ಟೇ ಅಲ್ಲ ಮನೆಯ ಆರ್ಥಿಕ ಪರಿಸ್ಥಿತಿ ಕಷ್ಟದಲ್ಲಿದ್ದರೂ ಸಹ ಆ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಈ ಯುವ ಕೃಷಿ ವಿಜ್ಞಾನಿ. ಕೋಲಾರ ತಾಲೂಕಿನ ಸುಗಟೂರು ಹೋಬಳಿಯ ಬೈಪನಹಳ್ಳಿ ಗ್ರಾಮದ ಪ್ರತಾಪ್ ವಿ. ಅವರು ನವದೆಹಲಿಯ ಭಾರತೀಯ ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯು ನಡೆಸಿದ ಕೃಷಿ ಸಂಶೋಧನಾ ಸೇವೆ (ಎಆರ್ ಎಸ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                               Read More »

ಕರ್ನಾಟಕ

ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಜ.28. ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. ಈ ಭೀಕರ ದುರಂತದಲ್ಲಿ ವಿಮಾನಗಳು ಪುಡಿಪುಡಿಯಾಗಿವೆ. ಆದರೆ ಸುಖೋಯ್ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಇಬ್ಬರನ್ನೂ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದು ಫೈಟರ್ ಜೆಟ್‌ನ ಪೈಲಟ್‌ಗೆ ಮೃತಪಟ್ಟಿದ್ದಾರೆ. “ಸುಖೋಯ್- 30 ಮತ್ತು ಮಿರಾಜ್ 2000 ಯುದ್ಧ ವಿಮಾನಗಳು ಮಧ್ಯಪ್ರದೇಶದ ಮೊರೆನಾ ಸಮೀಪ ಪತನಗೊಂಡಿವೆ. ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ” ಎಂದು

ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಗೋಧಿ ಮಾರಾಟಕ್ಕೆ ಟೆಂಡರ್‌ ಆಹ್ವಾನಿಸಿದ ಎಫ್‌ಸಿಐ ➤ ಒಂದೇ ದಿನ ಗೋಧಿ ದರ 9% ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) 25 ಲಕ್ಷ ಟನ್‌ ಗೋಧಿಯನ್ನು ಮಾರಾಟ ಮಾಡಲು ಟೆಂಡರ್‌ ಆಹ್ವಾನಿಸಿದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಒಂದೇ ದಿನದಲ್ಲಿ ಗೋಧಿ ಬೆಲೆ ಶೇ. 6-9ರಷ್ಟು ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಗೋಧಿ ಹಿಟ್ಟಿನ (ಆಟ್ಟಾ) ಬೆಲೆ 10 ದಿನಗಳಲ್ಲಿ ಇಳಿಕೆಯಾಗುವ ಎಲ್ಲಾ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದ ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಗೋಧಿ ದಾಸ್ತಾನು ನಾಲ್ಕು ಮಿಲ್‌ಗಳಿಗೆ

ಗೋಧಿ ಮಾರಾಟಕ್ಕೆ ಟೆಂಡರ್‌ ಆಹ್ವಾನಿಸಿದ ಎಫ್‌ಸಿಐ ➤ ಒಂದೇ ದಿನ ಗೋಧಿ ದರ 9% ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬ್ರೇಕಪ್‌ ಆಗಿದ್ದಕ್ಕೆ 40 ಲಕ್ಷ ರೂ. ಮೌಲ್ಯದ ಕಾರಿಗೆ ಬೆಂಕಿ ಹಚ್ಚಿದ ಭೂಪ

(ನ್ಯೂಸ್ ಕಡಬ)newskadaba.com ಚೆನ್ನೈ, ಜ.28. ಪ್ರೇಯಸಿಯೊಂದಿಗೆ ಜಗಳ ಆಗಿದ್ದಕ್ಕೆ ಹುಡುಗರು ಫೋನ್‌ ಹೊಡೆದಾಕಬಹುದು, ಅಳಬಹುದು, ಒಂದಿಷ್ಟು ದಿನ ಮಾತು ಬಿಡಬಹುದು. ಆದರೆ, ಇಲ್ಲೊಬ್ಬ ತನ್ನ 40 ಲಕ್ಷ ರೂ. ಮೌಲ್ಯದ ಮರ್ಸಿಡಿಸ್‌ ಬೆಂಜ್‌ ಕಾರಿಗೆ ಬೆಂಕಿ ಹಚ್ಚಿದ್ದಾನೆ. ತಮಿಳುನಾಡಿನ ಕಂಚಿಯಲ್ಲಿ 28 ವರ್ಷದ ವೈದ್ಯನೊಬ್ಬ ಬ್ರೇಕಪ್‌ ಆಗಿದ್ದಕ್ಕೆ ತನ್ನ ಐಷಾರಾಮಿ ಕಾರಿಗೆ ಅಗ್ನಿ ಸ್ಪರ್ಶ ಮಾಡಿದ್ದಾನೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬ್ರೇಕಪ್‌ ಆಗಿದ್ದಕ್ಕೆ 40 ಲಕ್ಷ ರೂ. ಮೌಲ್ಯದ ಕಾರಿಗೆ ಬೆಂಕಿ ಹಚ್ಚಿದ ಭೂಪ Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ)newskadaba.com ಲಕ್ಷ್ಮೇಶ್ವರ, ಜ.28. ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.28. ಕಳೆದ ವರ್ಷದಂತೆ 2023-24ನೇ ಸಾಲಿನ ರಾಜ್ಯ ಬಜೆಟ್ ಜನಪರವಾಗಿದ್ದು, ಇಡೀ ಕರ್ನಾಟಕವು ಬಜೆಟ್ ನಿಂದ ಏನನ್ನಾದರೂ ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಕಾರ್ಯಪಡೆ ಇದೆ ಮತ್ತು ಅದು ಎಲ್ಲಾ ಸಮಯದಲ್ಲೂ ಕಾರ್ಯನಿರ್ವಹಿಸುತ್ತದೆ. ಜಂಬೂ ಹಾವಳಿ ಹೆಚ್ಚಾದಂತೆ ಅವರು ಸಭೆಯ ಅಧ್ಯಕ್ಷತೆ ವಹಿಸಿ ಟಾಸ್ಕ್ ಫೋರ್ಸ್ ರಚಿಸಲು ಸೂಚನೆ ನೀಡಿದರು ಮತ್ತು ಎಲ್ಲಾ ಸೌಲಭ್ಯಗಳನ್ನು ಒದಗಿಸಿದರು. ಚಿರತೆ ಹಾವಳಿಗೆ ಮಾನವ ಸಂಪನ್ಮೂಲ,

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಜಾರ್ಖಂಡ್‌, ಜ.28. ಖಾಸಗಿ ನರ್ಸಿಂಗ್ ಹೋಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೈದ್ಯ ದಂಪತಿ ಸೇರಿದಂತೆ ಕನಿಷ್ಠ ಐವರು ಮೃತಪಟ್ಟ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಸಂಸ್ಥೆಯ ಮಾಲಕ ಡಾ. ವಿಕಾಸ್ ಹಜ್ರಾ, ಅವರ ಪತ್ನಿ ಡಾ. ಪ್ರೇಮಾ ಹಜ್ರಾ, ಮಾಲಕರ ಸೋದರಳಿಯ ಸೋಹನ್ ಖಮಾರಿ ಮತ್ತು ಮನೆಯ ಸಹಾಯಕಿ ತಾರಾದೇವಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಜಾರ್ಖಂಡ್‌ನ ಧನ್‌ಬಾದ್‌ನ ಬ್ಯಾಂಕ್ ಮೋರ್ ಪ್ರದೇಶದಲ್ಲಿರುವ ಖಾಸಗಿ ನರ್ಸಿಂಗ್ ಹೋಂನ ಸ್ಟೋರ್ ರೂಮ್‌ನಲ್ಲಿ

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು Read More »

ಕರಾವಳಿ
Scroll to Top