News Kadaba

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ […]

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಜ. 30ರಿಂದ ಬೆಂಗಳೂರಿನ ಪ್ರದೇಶವೊಂದರಲ್ಲಿ ಮಾಂಸ ಮಾರಾಟವನ್ನು ನಿಷೇಧಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ ಕಾನೂನುಕ್ರಮ ಜರುಗಿಸಲಾಗುವುದು ಎಂಬುದಾಗಿಯೂ ಅದು ಎಚ್ಚರಿಕೆ ನೀಡಿದೆ. ಯಲಹಂಕ ವೈಮಾನಿಕ ನೆಲೆಯಲ್ಲಿ ಫೆ.13ರಿಂದ 17ರ ವರೆಗೆ ನಡೆಯಲಿರುವ ಏರೋ ಇಂಡಿಯಾ-2023 ಶೋ ಹಿನ್ನೆಲೆಯಲ್ಲಿ ಬಿಬಿಎಂಪಿ ಆದೇಶವನ್ನು ಹೊರಡಿಸಿದೆ. ಜ. 30ರಿಂದ ಫೆ. 20ರ ವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ಬಿಬಿಎಂಪಿ ಹೇಳಿದೆ. ಯಲಹಂಕ ವಲಯದ ವ್ಯಾಪ್ತಿಯಲ್ಲಿ ಅಂದರೆ

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್ Read More »

ಕರ್ನಾಟಕ

ಭಾರತದಲ್ಲಿ 2,967 ಹುಲಿಗಳಿವೆ ! ➤ ‘ಸುಪ್ರೀಂ’ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28. ‘2018ರ ವರದಿಯೊಂದರ ಪ್ರಕಾರ ಭಾರತದಾದ್ಯಂತ ಇರುವ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳು ಇವೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ದೇಶದಲ್ಲಿ ಅಪಾಯದಲ್ಲಿರುವ ಹುಲಿಗಳನ್ನು ರಕ್ಷಿಸಲು ಕೋರಿ 2017ರಲ್ಲಿ ವಕೀಲ ಅನುಪಮ್‌ ತ್ರಿಪಾಠಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ. ನಾಗರತ್ನ ಅವರಿದ್ದ ಪಿಠವು ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯ ಭಾಟಿ

ಭಾರತದಲ್ಲಿ 2,967 ಹುಲಿಗಳಿವೆ ! ➤ ‘ಸುಪ್ರೀಂ’ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜ.28. ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿ. ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ Read More »

ಕರ್ನಾಟಕ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್.ಐ.ಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರಿವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..! Read More »

ಕರಾವಳಿ

ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದ ವಸತಿ ಶಾಲೆಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ಮೇಳ-2023 ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ಶೈಕ್ಷಣಿಕ ವರ್ಷದಿಂದ ವಸತಿ ಶಾಲೆಗಳಲ್ಲಿ ಪಿಯು ಶಿಕ್ಷಣ ಪ್ರಾರಂಭಿಸಲಾಗುವುದು. ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ವಸತಿ

ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ.

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..! Read More »

ಕರ್ನಾಟಕ

15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28. 15 ವರ್ಷ ತುಂಬಿದ ಕೇಂದ್ರ, ರಾಜ್ಯ ಸರ್ಕಾರಿ ವಾಹನಗಳು ಏಪ್ರಿಲ್ 1 ರಿಂದ ಗುಜರಿ ಸೇರಲಿವೆ. ಪರಿಸರಕ್ಕೆ ಮಾರಕವಾಗಿರುವ ವಾಹನ ಬಳಕೆ ನಿಲ್ಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, 15 ವರ್ಷ ಪೂರ್ಣಗೊಂಡ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಾಹನಗಳ ನೋಂದಣಿಯನ್ನು ಏಪ್ರಿಲ್ 1 ರಿಂದ ರದ್ದುಪಡಿಸಲಾಗುವುದು. ಮಾಲಿನ್ಯಕ್ಕೆ ಕಾರಣವಾಗುವ ವಾಹನಗಳು ಗುಜರಿ ಸೇರಲಿವೆ. ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರ್

15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ Read More »

ರಾಷ್ಟ್ರೀಯ ನ್ಯೂಸ್
Scroll to Top