News Kadaba

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಜ.25. ವಧೆಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೋವು ಕಳ್ಳ ಸಾಗಣೆ ಮಾಡಿದ್ದ ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಸಾಬೀತಾಗಿದ್ದರಿಂದ ಅಪರಾಧಿಗಳಾದ ಶಿವಮೊಗ್ಗದ ಮಹಮ್ಮದ್‌ ನೂರುಲ್ಲಾ, ಸೈಯ್ಯದ್‌ ರಿಯಾಜ್‌, ಮುಕ್ರಮ್‌ಗೆ […]

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ.25. ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್‌ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್‌ ಶೋ ಮತ್ತು ಏರ್‌ ಸ್ಪೇಷ್‌ ಎಕ್ಸಿಬಿಷನ್‌ ಆಯೋಜಿಸಲಾಗುತ್ತಿದೆ. ಸ್ಪೇಸ್‌ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಉತ್ತಮ ಘೋಷಣೆಗಳಿರಲಿವೆ.

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ,ಜ.25. ವಿಜ್ಞಾನ ಕ್ಷೇತ್ರದಲ್ಲಿನ ವಿವಿಧ ಸಂಶೋಧನೆ ಹಾಗೂ ಸಾಧನೆಗಳನ್ನು ಪರಿಗಣಿಸಿ, ನವದೆಹಲಿಯ ಇಂಡಿಯನ್‌ ನ್ಯಾಷನಲ್‌ ಸೈನ್ಸ್‌ ಅಕಾಡೆಮಿ ಕೊಡಮಾಡುವ ಯಂಗ್‌ ಸೈಂಟಿಸ್ಟ್‌ ವಾರ್ಷಿಕ ಪ್ರಶಸ್ತಿ ಪುರಸ್ಕಾರಕ್ಕೆ ಕರ್ನಾಟಕದ 10 ಯುವ ವಿಜ್ಞಾನಿಗಳು ಭಾಜನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಅಕಾಡೆಮಿ ನೀಡುವ ಅತ್ಯಂತ ಉತ್ಕೃಷ್ಟ ಪ್ರಶಸ್ತಿ ಇದಾಗಿದ್ದು, ಪ್ರತಿ ವರ್ಷ 40 ಯುವ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ವರ್ಷ 42 ಯುವ ವಿಜ್ಞಾನಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದ ಬೆಂಗಳೂರಿನಲ್ಲಿ ವ್ಯಾಸಂಗ

ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಪ್ರಶಸ್ತಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಜಿರೆ: ದೆಹಲಿಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ SDM NCCಯ 7 ಕೆಡೆಟ್‌ಗಳ ಆಯ್ಕೆ

(ನ್ಯೂಸ್ ಕಡಬ)newskadaba.com ಉಜಿರೆ, ಜ.25. 74ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಏಳು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ ಪಥಸಂಚಲನ, ಶಿಪ್ ಮಾಡೆಲಿಂಗ್, ಗಾರ್ಡ್ ಆಫ್ ಹಾನರ್, ಪ್ರಧಾನಿ ನಿವಾಸದಲ್ಲಿ ಆಯೋಜಿತವಾಗುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರಧಾನಮಂತ್ರಿ ರ್ಯಾಮಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಪ್ರಾಶಸ್ತ್ಯ ಪಡೆದಿದ್ದಾರೆ. ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಾಲೇಜಿನ ಏಳು ಕೆಡೆಟ್‌ಗಳು ರಾಷ್ಟ್ರಮಟ್ಟದ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕಾಗಿ

ಉಜಿರೆ: ದೆಹಲಿಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ SDM NCCಯ 7 ಕೆಡೆಟ್‌ಗಳ ಆಯ್ಕೆ Read More »

ಕರಾವಳಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಡಗು, ಜ.25. ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ವರದಿಯಾಗಿದೆ. ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್‌ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ          

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ವಾಪಾಸ್ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ ವಿಚಾರಣಾಧೀನ ಕೈದಿಗಳೊಂದಿಗೆ ಬಂಟ್ವಾಳದ ನ್ಯಾಯಾಲಯಕ್ಕೆ ಡಿಎಆರ್ ಬೆಂಗಾವಲಿನ ಮೂಲಕ ಕಳುಹಿಸಿಕೊಡಲಾಗಿತ್ತು ಎನ್ನಲಾಗಿದೆ. ಮರಳಿ ಕಾರಾಗೃಹಕ್ಕೆ ಬರುವಾಗ ಮುಖ್ಯದ್ವಾರದಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಬಳಿ ಪ್ಯಾಕ್ ಮಾಡಿಟ್ಟ ಗಾಂಜಾ ಪತ್ತೆಯಾಗಿದೆ ಎಂದು ಬರ್ಕೆ ಠಾಣೆಗೆ ನೀಡಿದ ದೂರಿನಂತೆ

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ           Read More »

ಕರಾವಳಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ. 25. ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ. ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ ಇಂದಿರಾಗಾಂಧಿ) ಮಹಿಳಾ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ವ್ಯಥೆ. ಮುಖ್ಯ ರಸ್ತೆಯಲ್ಲಿ ಬಸ್ಸಿನಿಂದ ಇಳಿಯುವ ವಿದ್ಯಾರ್ಥಿನಿಯರು 500

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ Read More »

ಕರಾವಳಿ

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ Read More »

ಕರ್ನಾಟಕ

ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.25. 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ನವದೆಹಲಿಗೆ ಆಗಮಿಸಿದ್ದು, ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಅವರ ಅಧಿಕೃತ ಭೇಟಿಗಾಗಿ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರ ಜೊತೆಗೆ ಬಂದಿದೆ ಎನ್ನಲಾಗಿದೆ. ಅಬ್ದೆಲ್ ಫತ್ತಾಹ್ ಎಲ್ ಸಿಸಿ ಅವರು ನವದೆಹಲಿಗೆ ಆಗಮಿಸುತ್ತಿದ್ದಂತೆ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಜಾನಪದ ನೃತ್ಯವನ್ನು ಪ್ರದರ್ಶಿಸಿಲಾಯಿತು ಎಂದು ತಿಳಿದುಬಂದಿದೆ.

ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ ! Read More »

ರಾಷ್ಟ್ರೀಯ ನ್ಯೂಸ್
Scroll to Top