News Kadaba

ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ

(ನ್ಯೂಸ್‌ ಕಡಬ) newskadaba.com,ಫೆ.03 ಬೆಂಗಳೂರು: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ  ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ. ಕೆಲ […]

ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

(ನ್ಯೂಸ್‌ ಕಡಬ) newskadaba.com,ಫೆ.03:  ಬೆಳಗಾವಿ: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ತನ್ನ ತಾಯಿಯ ಜೊತೆಗೇ ಅನೈತಿಕ ಸಂಬಂಧ ಹೊಂದಿದ್ದವನನ್ನು ಮಗ ಕೊಚ್ಚಿ ಕೊಂದಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,ಫೆ.03:  ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರ, ಸಮಗ್ರ ಶಿಕ್ಷಣ ಕರ್ನಾಟಕದಡಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್(Smart Class) ಸ್ಥಾಪನೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ . ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಡಿಜಿಟಲ್‌ ಶಿಕ್ಷಣದ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಯೋಜನಾ ಅನುಮೋದನ ಮಂಡಳಿ,  ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್‌ ಸ್ಥಾಪನೆಗೆ ಅನುಮೋದನೆ ನೀಡಿದ್ದು, ರಾಜ್ಯದ 3862 ಶಾಲೆಗಳಲ್ಲಿ 9154.80 ಲಕ್ಷ

ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ

(ನ್ಯೂಸ್‌ ಕಡಬ) newskadaba.com,ಫೆ.03: ವಾಟ್ಸಾಪ್‌ನ 2021ರ ಗೌಪ್ಯತಾ ನೀತಿ ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ.ಮಂಗಳವಾರ (ಫೆ.3) ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, “ನೀವು ನಮ್ಮ ಸಂವಿಧಾನವನ್ನು ಪಾಲಿಸಲು ಸಾಧ್ಯವಿಲ್ಲ ಎಂದರೆ ಭಾರತದಿಂದ ನಿರ್ಗಮಿಸಿ. ಭಾರತೀಯ ಪ್ರಜೆಯ ಒಂದು ಡಿಜಿಟ್ ದತ್ತಾಂಶವನ್ನೂ

‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,ಫೆ,03 – ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು-ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅರಸು ಪದವು ಗುಡ್ಡದಲ್ಲಿ ಮತ್ತೆ ಬೆಂಕಿ – ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,ಫೆ,03 ಮಂಗಳೂರು: ಬಜಪೆಯ ಎಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅರಸುಪದವಿನಲ್ಲಿನ ಗುಡ್ಡಕ್ಕೆ ಸೋಮವಾರ ಮುಂಜಾನೆ ಪುನಃ ಬೆಂಕಿ ಕಾಣಿಸಿಕೊಂಡಿದೆ. ಫೆ. 1ರಂದು ಗುಡ್ಡದಲ್ಲಿ ಹರಡಿದ ಬೆಂಕಿಯನ್ನು ಆಗ್ನಿಶಾಮಕದಳದ ಸತತ ಕಾರ್ಯಾಚರಣೆ ಮೂಲಕ ಹತೋಟಿಗೆ ತಂದು ನಂದಿಸಲಾಗಿತ್ತು. ಸೋಮವಾರ ಮುಂಜಾನೆಯೇ ಬೆಂಕಿ ಕಂಡು ಬಂದ ಕಾರಣ ಇದು ಗುಡ್ಡದ ಸಮೀಪದಲ್ಲಿಯೇ ಹಾಗೂ ಕೆಳಗಡೆಗೆ ವ್ಯಾಪಿಸುವ ಭೀತಿ ಇದ್ದು ,ಅಲ್ಲಿನ ಮನೆ ಗಳಿಗೆ ನಿವಾಸಿಗಳಿಗೆ ಅಪಾಯ ತಂದಿದೆ. ಈ ಬಗ್ಗೆ ಅಗ್ನಿಶಾಮಕ ದಳ ಆಗಮಿಸಿದ್ದು ಬೆಂಕಿಯನ್ನು ನಂದಿಸಲಾಗಿತ್ತು.

ಮಂಗಳೂರು : ಅರಸು ಪದವು ಗುಡ್ಡದಲ್ಲಿ ಮತ್ತೆ ಬೆಂಕಿ – ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು

(ನ್ಯೂಸ್‌ ಕಡಬ) newskadaba.com,ಫೆ,03 ಕಾಸರಗೋಡು: ಮಂಜೇಶ್ವರದ ಕುಂಜತ್ತೂರಿನ ತೂಮಿನಾಡಿನಲ್ಲಿ ತಂದೆಯಿಂದಲೇ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶೇಕುಂಞ(50) ಮೃತಪಟ್ಟಿದ್ದಾರೆ. ಕುಟುಂಬ ಕಲಹದ ನಡುವೆ ಕತ್ತಿ ಕಾಳಗ ನಡೆಯುವ ಸಂದರ್ಭದಲ್ಲಿ ಅಡ್ಡ ಬಂದ ಪುತ್ರಿ ಜುಮೈರಾಳನ್ನೆ ತಂದೆ ಕಡಿದಿದ್ದು, ಜುಮೈರಾ ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡಿದ್ದ ಜುಮೇರಾಳ ದೊಡ್ಡಪ್ಪ ಶೇಕುಂಞ(50) ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದ ಕೊಲೆ ಆರೋಪಿ ಉಮರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ 18

ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ,03: ರಾಜ್ಯದಲ್ಲಿ ಚಳಿಯ ವಾತಾವರಣವಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಮುಂಜಾನೆ, ಸಂಜೆಯ ವೇಳೆ ಚಳಿ ಹಾಗೂ ಮಂಜಿನ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲವೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಕ್ರೇನ್‌ನಲ್ಲಿ ಬಸ್‌ ಮೇಲೆ ರಷ್ಯಾ ಡ್ರೋನ್ ದಾಳಿ -15 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,ಫೆ,02 ಕೈವ್ :  ರಷ್ಯಾ ಉಕ್ರೇನ್ ಮೇಲೆ ನಡೆಸಿದ ಮತ್ತೊಂದು ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಮಂದಿ ಪ್ರಾಣ ಕಳೆದುಕೊಂಡಿರುವ ದುರ್ಘಟನೆ ನಡೆದಿದೆ. ಗಣಿಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್‌ನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಡ್ರೋನ್ ಡಿಕ್ಕಿಯಾದ ತಕ್ಷಣ ಬಸ್ ಬೆಂಕಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ 12 ಎಂದು

ಉಕ್ರೇನ್‌ನಲ್ಲಿ ಬಸ್‌ ಮೇಲೆ ರಷ್ಯಾ ಡ್ರೋನ್ ದಾಳಿ -15 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top