News Kadaba

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಎರಡು ಬ್ಯಾಗುಗಳಲ್ಲಿ ಬರೋಬ್ಬರಿ 1.14 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದ. ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿದ್ಯಾರ್ಥಿ ರಿತಿಕ್, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿ ಎನ್ನಲಾಗಿದ್ದು, ವಿಚಾರಣೆ ವೇಳೆ […]

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!  

(ನ್ಯೂಸ್ ಕಡಬ)newskadaba.com ಸುರತ್ಕಲ್, ಜ.23. ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ. ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು. ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!   Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!!

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಹೊಸವರ್ಷದಂದು ಕೊಲೆ ಮಾಡಿ ಮೃತದೇಹವನ್ನು ಬೆಂಗಳೂರಿನ ದೇವನಹಳ್ಳಿಯಲ್ಲಿ ಎಸೆದು ಹೋಗಿದ್ದರು. ಎಷ್ಟರ ಮಟ್ಟಿಗೆ ಇವರು ಕ್ರೂರತನ ತೋರಿಸಿದ್ದರು ಎಂದರೆ ಮುಖದ ಗುರುತೇ ಸಿಗಬಾರದು ಎಂದು ಮುಖವನ್ನು ಕೊಚ್ಚಿ ಹಾಕಿ ವಿರೂಪಗೊಳಿಸಿದ್ದರು. ಮೃತ ವ್ಯಕ್ತಿಯ ಬಗ್ಗೆ ಯಾರಿಗೂ ಮಾಹಿತಿ ಸಿಗಬಾರದು ಎಂದು ಆತನನ್ನು ಬೆತ್ತಲೆ ಮಾಡಿ ಶವವನ್ನು ದೇವನ ಹಳ್ಳಿಯಲ್ಲಿ ಎಸೆದು ಹೋಗಿದ್ದರು. ಆದರೆ ಈ ಪ್ರಕರಣವನ್ನು ಪೊಲೀಸರು 20 ದಿನಗಳ ಒಳಗಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ಆಂಧ್ರದ ಅನಂತಪುರ ಮೂಲದ ಮುತ್ಯಾಲಪ್ಪ(40) ಎನ್ನುವಾತ

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!! Read More »

ಕ್ರೈಮ್ ನ್ಯೂಸ್

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1, 2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,650/- ರಿಂದ 90,205/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಸಾಮಾನ್ಯ

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!   Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »

ಕರ್ನಾಟಕ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಜ.23. ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಕೆಳಗೆ ಬಿದ್ದು ನಾಲ್ವರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ನಡೆದಿದೆ. ಕೆ.ಮುತ್ತುಕುಮಾರ್(39),ಎಸ್.ಭೂಪಾಲನ್ (40), ಮತ್ತು ಬಿ.ಜೋತಿಬಾಬು (17) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಪ್ರಯುಕ್ತ ದೇವತೆಯ ವಿಗ್ರಹವನ್ನು ಕ್ರೇನ್‌ ಮೂಲಕ ಗ್ರಾಮದಲ್ಲಿ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ದೇವರನ್ನು ಅಲಂಕರಿಸಲು ಎಂಟು ಜನ ಕ್ರೇನ್‌ ಮೇಲೆಯೇ ವಿಗ್ರಹದ ಪಕ್ಕದಲ್ಲಿದ್ದರು. ಈ ವೇಳೆ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ದಿನನಿತ್ಯದ ಓಡಾಟಕ್ಕೆ ಸಮೂಹ ಸಾರಿಗೆಯನ್ನೇ ನಂಬಿಕೊಂಡಿರುವ ಸಾರ್ವಜನಿಕರು, ನಾಡಿದ್ದು ಬಸ್​ಗಳನ್ನು ನಂಬಿಕೊಂಡು ಹೊರಗೆ ಹೊರಡದಿರುವುದು ಒಳಿತು. ಏಕೆಂದರೆ, ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ಜ.24ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯ ಸರ್ಕಾರವು 6 ವರ್ಷಗಳೇ ಕಳೆದರೂ

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ. ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ ಎಂದು ತಿಳಿದುಬಂದಿದೆ. ಲಕ್ಷ್ಮಣ್ ಅವರು

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ Read More »

ಕರ್ನಾಟಕ
Scroll to Top