News Kadaba

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ 21. ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ನಾಗನ ಗೌಡರೊಂದಿಗೆ ಗಸ್ತು ನಿರತರಾಗಿದ್ದಾಗ ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ. ಗಸ್ತು ಕರ್ತವ್ಯದಲ್ಲಿದ್ದ […]

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ !

(ನ್ಯೂಸ್ ಕಡಬ)newskadaba.com  ಉಡುಪಿ, ಜ. 21. ಮುಂದಿನ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯ್ಯಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಮಲ್ಪೆ ಬೀಚ್ ನಲ್ಲಿ , ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ! Read More »

ಕರಾವಳಿ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ

(ನ್ಯೂಸ್ ಕಡಬ)newskadaba.com ಮೈಸೂರು, ಜ.21.  ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿಂದೆ ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದು ಇದೀಗ ವೃದ್ಧ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿದೆ. ಕನ್ನನಾಯಕನಹಳ್ಳಿ ನಿವಾಸಿ 60 ವರ್ಷದ ಸಿದ್ದಮ್ಮ ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ Read More »

ಕರ್ನಾಟಕ

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕೃಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಹತ್ತಿರದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ! Read More »

ಕರಾವಳಿ

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ !

(ನ್ಯೂಸ್ ಕಡಬ)newskadaba.com ಪುತ್ತೂರು, ಜ.21. ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಆತನ ಸಹೋದರನಿಗೆ ಕೊಲೆ‌ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. ಕೊಯಿಲ ನಿವಾಸಿ ನಿಝಾಮ್ ಅವರು ಹಲ್ಲೆ ಸಂತ್ರಸ್ತ. ಅವರನ್ನು ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.  ಹಣ ಕೊಡದಿದ್ದರೆ ಶಾರೂಕ್ ನನ್ನು

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

(ನ್ಯೂಸ್ ಕಡಬ)newskadaba.com ವಿಜಯಪುರ, ಜ.21. ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.    

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ,

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.21. ವಿಪ್ರೋ ಇದೀಗ ಸುಮಾರು 800 ಮಂದಿ ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ. ಆಂತರಿಕ ಪರೀಕ್ಷೆ ನಡೆಸಿ ಕಳಪೆ ಕಾರ್ಯಕ್ಷಮತೆಯ ಕಾರಣ ನೀಡಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ತಿಳಿದುಬಂದಿದೆ. ಈ ಕುರಿತು ವಿಪ್ರೋ ಪ್ರತಿಕ್ರಿಯೆ ನೀಡಿದ್ದು, ನಾವು ಅತ್ಯುನ್ನತ ಗುಣಮಟ್ಟವನ್ನು ಬಯಸುತ್ತೇವೆ. ನಾವು ನಿಗದಿಪಡಿಸಿರುವ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿ ಕೂಡ ಅವರಿಗೆ ನೀಡಲಾದ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯತೆಯನ್ನು ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ ! Read More »

ರಾಷ್ಟ್ರೀಯ ನ್ಯೂಸ್

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.21. ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ಇ-ಪಾಸ್‌ಬುಕ್‌ ಸೇವೆಯು ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಸಂಘಟನೆಯು ಟ್ವಿಟರ್‌ ಮೂಲಕ ಪ್ರತಿಕ್ರಿಯೆ ನೀಡಿದೆ. ಕಳೆದ 10 ದಿನಗಳಿಂದ ಇ-ಪಾಸ್‌ಬುಕ್‌ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ಟ್ವಿಟರ್‌ನಲ್ಲಿ ಇಪಿಎಫ್‌ಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸಂಘಟನೆಯು ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ‘ಪಾಸ್‌ಬುಕ್‌ ತಾಂತ್ರಿಕ ಕಾರಣಗಳಿಂದಾಗಿ ಬಳಕೆಗೆ ಅಲಭ್ಯವಾಗಿತ್ತು. ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದೆ.

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್ Read More »

ಕರ್ನಾಟಕ
Scroll to Top