News Kadaba

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadab.com  ಕುಂದಾಪುರ, ಜ.18. ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ […]

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ! ➤ ಕರ್ನಾಟಕದ ನಗರಗಳಲ್ಲೂ ಇಂದಿನಿಂದ 5G ಸೇವೆ ಲಭ್ಯ

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ರಿಲಯನ್ಸ್ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಇಂದಿನಿಂದ ಶುರುವಾಗಿದೆ. ಕಾಕಿನಾಡ, ಕರ್ನೂಲ್ (ಆಂಧ್ರ ಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ, ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ ( ತೆಲಂಗಾಣ), ಬರೇಲಿ (ಉತ್ತರ ಪ್ರದೇಶ)ಯಲ್ಲೂ ಇಂದಿನಿಂದ ಜಿಯೋ ಟ್ರೂ 5ಜಿ ಲಭ್ಯವಾಗಲಿದೆ. ಈ ನಗರಗಳಲ್ಲಿ 5ಜಿ ಸೇವೆಗಳನ್ನು ಒದಗಿಸುವ ಮೊದಲ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ! ➤ ಕರ್ನಾಟಕದ ನಗರಗಳಲ್ಲೂ ಇಂದಿನಿಂದ 5G ಸೇವೆ ಲಭ್ಯ Read More »

ಕರ್ನಾಟಕ

 ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ !                

(ನ್ಯೂಸ್ ಕಡಬ)newskadab.com ಬೆಳ್ತಂಗಡಿ, ಜ.18. ಸರಕಾರದ ನೇರ ನಿರ್ಲಕ್ಷ್ಯ ಹಾಗೂ ಖಾಸಗೀಕರಣದ ಮೇಲಾಟದಿಂದ ಕೆಲವೇ ವರ್ಷಗಳಲ್ಲಿ ಸರಕಾರಿ ಶಾಲೆಗಳು ಸಂಪೂರ್ಣ ನಶಿಸುವ ಭೀತಿ ಎದುರಾಗಿದೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಶಾಲೆಗಳ ನಿರ್ವಹಣೆಗೆ ಅನುದಾನ ಸಾಲುತ್ತಿಲ್ಲ. ಕಟ್ಟಡದ ಅವ್ಯವಸ್ಥೆ, ಕಲಿಕೋಪಕರಣಗಳ ಕೊರತೆ ಮೇಲ್ನೋಟಕ್ಕೆ ಕಂಡರೆ ಇದೀಗ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳೆರಡರ ಸೀಮೆಸುಣ್ಣ (ಚಾಕ್‌ಪೀಸ್‌) ಕ್ಕೂ ಅನುದಾನ ಸಿಗದೆ ಶಿಕ್ಷಕರೇ ಬೇಡುವ ಪರಿಸ್ಥಿತಿ ಬಂದಿದೆ. ಆ ಮಟ್ಟಿಗೆ ಸರಕಾರವು ತನ್ನ ಶಾಲೆಗಳನ್ನು ಬಡವಾಗಿಸಿದೆ. ಸರಕಾರಿ ಶಾಲೆಗಳಿಗೆ ವಿದ್ಯುತ್‌

 ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ !                 Read More »

ಕರ್ನಾಟಕ

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ     

(ನ್ಯೂಸ್ ಕಡಬ)newskadab.com  ನವದೆಹಲಿ, ಜ.18. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, ಇಲ್ಲಿಯವರೆಗೆ ಪ್ರಧಾನ ಮಂತ್ರಿ

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !!

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಪಟ್ಟ ಧರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಹೆವೆನ್ ರೋಜ್ ಆಂಡ್ ಸಿಜ್ಲಿಂಗ್ ಗೈಸ್ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಮಿಸ್ ಸ್ಪರ್ದೆಯಲ್ಲಿ ನೂರು ಸ್ಪರ್ಧಾಳುಗಳು ಭಾಗವಹಿಸಿದ್ದರು. ಅದರಲ್ಲಿ ಅಂತಿಮ ಆಯ್ಕೆ ಸುತ್ತಿಗೆ 36 ಸ್ಪರ್ಧಿಗಳು ಆಯ್ಕೆಯಾದರು. ಅದರಲ್ಲಿ ಕೊನೆಯ ಸುತ್ತಿನ 10 ಮಂದಿಯಲ್ಲಿ ಸುಷ್ಮಾ ಎಸ್. ಶೆಟ್ಟಿ ಅವರು ಆಯ್ಕೆಯಾಗಿ ‘ಮಿಸ್ ಮಂಗಳೂರು’ ಪಟ್ಟವನ್ನು ತೊಟ್ಟರು. ಸುಶ್ಮಾ

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !! Read More »

ಕರಾವಳಿ

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadab.com  ಪುತ್ತೂರು, ಜ.18. ಮುಂಡೂರು ಕಂಪದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯಶ್ರಿ(23)ನ್ನು ಕನಕಮಜಲು ನಿವಾಸಿ ಉಮೇಶ್ ನಿನ್ನೆ ಮನೆಗೆ ನುಗ್ಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಉಮೇಶ್, ಜಯಶ್ರಿಯ ಸಂಬಂಧಿಕನಾಗಿದ್ದು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಆತನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಇತ್ತೀಚೆಗೆ ಆತನಿಂದ ದೂರ ಸರಿದಿದ್ದಳು, ಇದೇ ಸಿಟ್ಟಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರನ ಮೇಲೆ ಆಮ್ಲಜನಕ ಪೈಪ್‌ಲೈನ್ ಸ್ಥಾಪಿಸಲು ಸಿದ್ಧತೆ !!

(ನ್ಯೂಸ್ ಕಡಬ)newskadab.com  ಜ.18. ಭವಿಷ್ಯದ ಆರ್ಟೆಮಿಸ್ ಕಾರ್ಯಾಚರಣೆಗಳಿಗಾಗಿ ಚಂದ್ರನ ದಕ್ಷಿಣ ಧ್ರುವಕ್ಕೆ ಆಮ್ಲಜನಕವನ್ನು ಪೂರೈಸಲು ಪೈಲ್ ಲೈನ್ ಅನ್ನು ನಾಸಾ ಪರಿಗಣಿಸುತ್ತಿದೆ. ರೋವರ್‌ಗಳ ಮೂಲಕ ಆಮ್ಲಜನಕವನ್ನು ತಲುಪಿಸುವ ನಾಸಾದ ಪ್ರಸ್ತುತ ಯೋಜನೆಯು ಸಮಸ್ಯಾತ್ಮಕವಾಗಬಹುದು ಎಂದು ಚಂದ್ರ ಸಂಪನ್ಮೂಲಗಳ ಮುಖ್ಯ ವಿಜ್ಞಾನ ಅಧಿಕಾರಿ ಪೀಟರ್ ಕುರ್ರೆರಿ ಹೇಳಿದ್ದಾರೆ. ಹಾಗಾಗಿ ಚಂದ್ರನ ಮೇಲೆ ಪೈಪ್ ಲೈನ್ ಹಾಕುವುದು ಉತ್ತಮ ಎಂದು ಲೂನಾರ್ ರಿಸೋರ್ಸಸ್ ಚೀಫ್ ಸೈನ್ಸ್ ಆಫೀಸರ್ ಪೀಟರ್ ಕುರ್ರೆರಿ ನಾಸಾಗೆ ಸಲಹೆ ನೀಡಿದ್ದಾರೆ. ನಾಸಾ ಈ ಪೈಪ್‌ಲೈನ್ ಅನ್ನು

ಚಂದ್ರನ ಮೇಲೆ ಆಮ್ಲಜನಕ ಪೈಪ್‌ಲೈನ್ ಸ್ಥಾಪಿಸಲು ಸಿದ್ಧತೆ !! Read More »

ರಾಷ್ಟ್ರೀಯ ನ್ಯೂಸ್

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ !

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಭುವನೇಶ್ವರದಲ್ಲಿ ರೈಲ್ವೆಯ ನಿವೃತ್ತ ಪ್ರಧಾನ ಮುಖ್ಯ ವ್ಯವಸ್ಥಾಪಕರೊಬ್ಬರಿಗೆ (ವಾಣಿಜ್ಯ) ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದ್ದು, 17 ಕೆ.ಜಿ ಚಿನ್ನ ಮತ್ತು ₹1.57 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದ 1987ರ ಬ್ಯಾಚಿನ ಭಾರತೀಯ ರೈಲ್ವೆ ಸಂಚಾರ ಸೇವಾ ಅಧಿಕಾರಿ ಪ್ರಮೋದ್ ಕುಮಾರ್ ಜೇನಾ ಅವರ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜ.3ರಂದು ಪ್ರಕರಣ ದಾಖಲಿಸಿತ್ತು.

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top