News Kadaba

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು ? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್ […]

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ. 1781 ಪ್ರಕರಣಗಳನ್ನು ಜಾಗೃತ ದಳ ದಾಖಲಿಸಿಕೊಂಡು ಅದರಲ್ಲಿ 1,721 ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ Read More »

ಕರ್ನಾಟಕ

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ ‘ಗೃಹಲಕ್ಷ್ಮಿ’ ಯೋಜನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ

ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ ‘ಗೃಹಲಕ್ಷ್ಮಿ’ ಯೋಜನೆ Read More »

ಕರ್ನಾಟಕ

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭದ ಉದ್ಘಾಟನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ವರುಣಾ,

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ Read More »

ಕರ್ನಾಟಕ

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಂಸ ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್  ನಟನನ್ನು ಪೊಲೀಸರು ಬಂಧಿಸಿದ್ದಾರೆ. ಲೊಕ್ಯಾಂಟೋ ಆ್ಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು  ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ. ಸೈಕೋಲಾಜಿ ಸಂಬಂಧಪಟ್ಟಂತಹ  ನ್ಯೂರಾನ್ ಚಿತ್ರದಲ್ಲಿ ನಟಿಸಿದ್ದ ನಾಯಕ ನಟ ಮಂಜುನಾಥ್ ಬಂಧನವಾಗಿದೆ. ಈ

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

(ನ್ಯೂಸ್ ಕಡಬ)newskadaba.com  ಜಮ್ಮು, ಜ.17. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆರಾಗಿದ್ದಾರೆ.  ಹತ್ಯೆಗೀಡಾದ ಉಗ್ರರನ್ನು ಅರ್ಬಾಸ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದ್ದು ಇವರು ಪುಲ್ವಾಮದವರಾಗಿದ್ದು ಭಯೋತ್ಪಾದಕ ಸಂಘಟನೆ ಎಲ್ ಇಟಿ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಎನ್ ಕೌಂಟರ್ ನಲ್ಲಿ ಇಬ್ಬರೂ ತಪ್ಪಿಸಿಕೊಂಡಿದ್ದರು. ಬುದ್ಗಾಮದಲ್ಲಿ ಸೇನೆಯ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವಾಹನವನ್ನು ನಿಲ್ಲಿಸಿದರು. ಬಳಿಕ ಗುಂಡಿನ ಚಕಮಕಿ ನಡೆಯಿತು. ಈ ಬಾರಿ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ Read More »

ರಾಷ್ಟ್ರೀಯ ನ್ಯೂಸ್

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.    

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ನಗರದ ಕೊಂಚಾಡಿ ಹಾಗೂ ಕಂಕನಾಡಿಯಲ್ಲಿನ ಮಹಿಳಾ ವಸತಿ ಗೃಹಗಳಲ್ಲಿ ಉದ್ಯೋಗನಿರತ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತವಾಗಿ ವಸತಿ ಗೃಹಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಇಲ್ಲಿನ ಕಂದಾಯ ಅಧಿಕಾರಿ ವಿಜಯ ಕುಮಾರ್ ಅವರನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತು ಅವರ ಕುಟುಂಬದವರಿಗೆ ಪಿಎಂ ಸ್ವನಿಧಿ ಮಹೋತ್ಸವ ಆಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜನಪ್ರತಿನಿಧಿಗಳು, ಮಂಗಳೂರು ಮಹಾನಗರಪಾಲಿಕೆ ನಗರ ಬಡತನ ನಿರ್ಮೂಲನಾ ಕೋಶ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯ ಸದಸ್ಯ ಅಧಿಕಾರಿಗಳನ್ನು ಸಮನ್ವಯಗೊಳಿಸಿಕೊಂಡು ಸ್ವನಿಧಿ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಸೂಚಿಸಿದ್ದಾರೆ.  

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ Read More »

ಕರಾವಳಿ, ಕರ್ನಾಟಕ
Scroll to Top