News Kadaba

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ. ಜ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು […]

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com  ಮಂಗಳೂರು,ಜ.17. ಜಿಲ್ಲೆಯ ಅತೀ ಸಣ್ಣ ಕುಶಲಕರ್ಮಿಗಳಿಗೆ ವೃತ್ತಿ ಚಟುವಟಿಕೆಗಳನ್ನು ಮುಂದುವರಿಸಲು ಸಾಲ ಸಹಾಯಧನ ಯೋಜನೆಯಡಿ ವಾಣಿಜ್ಯ, ಸಹಕಾರಿ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿಂದ 50 ಸಾವಿರ ರೂ.ಗಳ ವರೆಗೆ ಸಾಲ ಹಾಗೂ ಶೇ.30ರಷ್ಟು ಸಹಾಯಧನ ನೀಡಲು ಅರ್ಹ ಹಾಗೂ ಆಸಕ್ತ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ದೂರವಾಣಿ 0824-2214021 ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ 9886332233 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ..! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಡೇ- ನಲ್ಮ್, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟೀಯ ನಗರ ಜೀವನೋಪಾಯ ಅಭಿಯಾನದಡಿ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ನಗರದ ಉರ್ವಾ ಮಾರ್ಕೆಟ್‍ನ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಹಾನಗರ ಪಾಲಿಕೆಯ ಸಾಮಾಜಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್ ಕಾರ್ಯಕ್ರಮ  ಉದ್ಘಾಟಿಸಿ, ಸ್ವಸಹಾಯ ಗುಂಪಿನ ಸದಸ್ಯರು ತರಬೇತಿಯ ಪ್ರಯೋಜ ಪಡೆದು ಜೀವನದಲ್ಲಿ ಯಶಸ್ವಿಯಾಗುವಂತೆ ಚಾಲನೆ ನೀಡಿದರು.

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ಭಾರತದಲ್ಲಿ ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹಾಗೂ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ (ಐವಿಆರ್’ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ. ಈ ಕುರಿತು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಅಂಡ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನ ನಿರ್ದೇಶಕ ಡಾ.ಬಿ.ಆರ್.ಗುಲಾಟಿ ಮಾತನಾಡಿ, ಎಲ್‌ಎಸ್‌ಡಿಗೆ ಕಾರಣವಾಗುವ ವೈರಸ್ ಅನ್ನು ಬಳಸುವ ಹೋಮೋಲೋಗಸ್ ಲಸಿಕೆ ವೈರಸ್ ವಿರುದ್ಧ 100 ಪ್ರತಿಶತದಷ್ಟು ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ Read More »

ಕರ್ನಾಟಕ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನೇಪಾಳ, ಜ.17. ನೇಪಾಳದ ಪೋಖರಾ ಪ್ರದೇಶದಲ್ಲಿ ಸಂಭವಿಸಿದ ಯೇತಿ ಏರ್‌ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಮತ್ತೊಬ್ಬ ಪ್ರಯಾಣಿಕನ ಶವ ತಡವಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಸ್ಥಳದಿಂದ ಇದುವರೆಗೆ ಒಟ್ಟು 70 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಐವರು ಭಾರತೀಯರು ಸೇರಿದಂತೆ 72 ಜನರಿದ್ದ ಯೇತಿ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ)newskadaba.com  ಉಡುಪಿ, ಜ.16. ಹಾಲಿನ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ರೈತರು ಸೊಸೈಟಿಗಳಿಗೆ ನೀಡುವ ಹಾಲಿನ ದರವನ್ನು ಹೆಚ್ಚಿಸಬೇಕು ಮತ್ತು ನಂದಿನಿ ಪಶು ಆಹಾರ ಖರೀದಿಗೆ ಸಬ್ಡಿಡಿ ರೂಪದಲ್ಲಿ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಹಕಾರ ಭಾರತಿ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಕುರಿತು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು‌ “ಕಳೆದ ಅಕ್ಟೋಬರ್ 27ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ರೈತ ಸಮಾವೇಶ

ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top