News Kadaba

ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..!  

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ‘ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ (ಪಿಟಿಸಿಎಲ್‌) ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಪ್ಪ ಆಗ್ರಹಿಸಿದರು. ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ’ ಸಂಘಟನೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಧರಣಿಯ 13 ನೇ ದಿನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಂದೆ ದೇವರಾಜ ಅರಸು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ […]

ಎಸ್ಸಿ-ಎಸ್ಟಿ ಜಾಗ ಮಾರಾಟ ನಿಷೇಧ ಕಾಯ್ದೆ ಜಾರಿಗಾಗಿ ಮುಂದುವರಿದ ಪ್ರತಿಭಟನೆ..!   Read More »

ಕರ್ನಾಟಕ

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಇತ್ತೀಚೆಗಷ್ಟೇ ನಡೆದ ಗುಜರಾತ್ ಚುನಾವಣೆಯ ಫಲಿತಾಂಶವು 2024ರಲ್ಲಿಯೂ ನರೇಂದ್ರ ಮೋದಿ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ದೇಶಾದ್ಯಂತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಗುಜರಾತ್ ಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಪ್ರಾಮುಖ್ಯತೆ ಪಡೆದಿತ್ತು. 2024ರ

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..??

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ವಿದ್ಯಾರ್ಥಿನಿಯೋರ್ವಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುತ್ತಿದ್ದ ವೇಳೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಉಡುಪಿಯ ಬ್ರಹ್ಮಗಿರಿಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ(11) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಯೂಟ್ಯೂಬ್ ನಲ್ಲಿ ಬರುವ ವಿಡಿಯೋಗಳನ್ನು ನೋಡಿ ಅದನ್ನು ಪ್ರಯೋಗ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಳು. ಅದರಂತೆ ಬಾತ್ರೂಮ್ ನಲ್ಲಿ ಬಟ್ಟೆ ಕಟ್ಟಿ ಯಾವುದೋ ಪ್ರಯೋಗ ಮಾಡುವ ವೇಳೆ ಕುತ್ತಿಗೆಗೆ ಬಟ್ಟೆ ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..?? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ. ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ತೀವ್ರಗೊಂಡಿದೆ. ಭಾರೀ ಚಳಿ ಹಾಗೂ ಮಂಜುನಿಂದ ಕೂಡಿದ ವಾತಾವರಣವಿತ್ತು ಎಂದು ವರದಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಚಳಿ ಹೆಚ್ಚಿದ್ದು, ಬಿಸಿಲು ಆವರಿಸುವವರೆಗೂ ಮೈ ಕೊರೆಯುವ ಚಳಿ ಇತ್ತೀಚೆಗೆ ಜಾಸ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ,  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮುಂತಾದ ಕಡೆಗಳಲ್ಲಿ ಬೆಳಗ್ಗೆ ಬಿಸಿಲು ಆವರಿಸಿದರೂ ಚಳಿ ಕಡಿಮೆಯಾಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಗರಗಳಲ್ಲಿಯೂ ಬೆಳಗ್ಗಿನ ಹೊತ್ತು ಭಾರೀ

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ

ವಿದ್ಯುತ್ ದರ ಏರಿಕೆಗೆ ಎಸ್ಕಾಂ ಚಿಂತನೆ..!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.15. ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಕೆಸಿಸಿಐ) ವಿರೋಧ ವ್ಯಕ್ತಪಡಿಸಿದೆ. ವಿದ್ಯುತ್ ದರಗಳ ಪರಿಷ್ಕರಿಸುವಂತೆ ರಾಜ್ಯದ ವಿದ್ಯುತ್ ಸರಬರಾಜು ನಿಗಮಗಳು (ಎಸ್ಕಾಂ) ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈ ಹಿಂದೆ ಪತ್ರ ಬರೆದಿತ್ತು. ಗೃಹ ಗ್ರಾಹಕರಿಗೆ ನೀಡಿರುವ ಸೌರ ನೀರಿನ ರಿಯಾಯಿತಿ, ಮುಕ್ತ ಪ್ರವೇಶ ಗ್ರಾಹಕರಿಗೆ ಗ್ರಿಡ್ ಬೆಂಬಲ ಶುಲ್ಕ ವಿಧಿಸುವುದು ಮತ್ತು ನಿಗದಿತ ಶುಲ್ಕವನ್ನು ಹೆಚ್ಚಿಸುವುದು ಸೇರಿದಂತೆ ವಿಶೇಷ ಪ್ರೋತ್ಸಾಹಕ ಯೋಜನೆಗಳನ್ನು

ವಿದ್ಯುತ್ ದರ ಏರಿಕೆಗೆ ಎಸ್ಕಾಂ ಚಿಂತನೆ..!! Read More »

ಕರ್ನಾಟಕ
Scroll to Top