ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..! ➤ ಅದೃಷ್ಟವಶಾತ್ ಅಪಾಯದಿಂದ ಪಾರು
(ನ್ಯೂಸ್ ಕಡಬ)newskadaba.com ಹೆಬ್ರಿ, ಜ.11. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..! ➤ ಅದೃಷ್ಟವಶಾತ್ ಅಪಾಯದಿಂದ ಪಾರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








