News Kadaba

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ […]

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.09. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಳೆದ 18 ತಿಂಗಳುಗಳಲ್ಲಿ ವಕೀಲರ ಶುಲ್ಕಕ್ಕಾಗಿ ದೆಹಲಿ ಸರ್ಕಾರದ ಒಟ್ಟು ಖರ್ಚು 28.10 ಕೋಟಿ ರೂ.ಗಳಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಭವನದ ಮೂಲಗಳ ಪ್ರಕಾರ, ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಅವರು 25.25 ಕೋಟಿ ರೂ.ಗಳಲ್ಲಿ 18.97 ಕೋಟಿ ರೂ.ಗಳನ್ನು

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09.   ಪೂಜಾ ಸಾಮಗ್ರಿ ಗೋದಾಮಿ​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌ ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 09.  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿಯ ಚಕ್ರ ಹರಿದ ಪರಿಣಾಮ ಓರ್ವ ರೈತ ಮೃತಪಟ್ಟು, ಮತ್ತೋರ್ವ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ರೈತನನ್ನು ಕೀಲಾರ ಗ್ರಾಮದ ನಾಗರಾಜು (42) ಮತ್ತು ಗಾಯಗೊಂಡ ಬಾಲಕನನ್ನು ಹುಲಿವಾನ ಗ್ರಾಮದ ಋತ್ವಿಕ್ (10) ಎಂದು ಗುರುತಿಸಲಾಗಿದೆ. ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದ ಬಳಿ

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಕಿಡಿಗೇಡಿಗಳು .50 ಸಾವಿರ ಮೌಲ್ಯದ ದಿನಸಿ ಸಾಮಗ್ರಿಗಳಿಗೆ ಬೆಂಕಿ ಹಾಕಿರುವ ಘಟನೆ ಬಾರಸೆ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಾರಸೆ ಕೊಪ್ಪಲು ಗ್ರಾಮದ ರಾಜೆಅರಸ್‌ ಅವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳತ್ತೂರು ಗ್ರಾಮದ ರೈತ ಪುರುಷೋತ್ತಮ ಕಳೆದ ಒಂದು ವರ್ಷಗಳ ಹಿಂದೆ ಬಾರಿಸೆ ಕೊಪ್ಪಲು ಗ್ರಾಮದಲ್ಲಿ ರಾಜೆ ಅರಸ್‌ ಎಂಬವರಿಗೆ ಸೇರಿದ ಜಮೀನನ್ನು ಕೃಷಿ ಮಾಡಲು ಗುತ್ತಿಗೆ ಪಡೆದು ಗುಡಿಸಿಲು ಹಾಕಿಕೊಂಡು

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08.  ಬಾಲಕ‌ನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ವರದಿಯಾಗಿದೆ. ಮೃತಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ರವಿವಾರದಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.08.  ವಿಕ್ಟೋರಿಯಾ ರಾಣಿ  ಕಾಲದ, ಹಿತ್ತಾಳೆ ಟೆಲಿಸ್ಕೋಪ್​ನ್ನು ಮಾರಾಟಕ್ಕೆ ಯತ್ನಿಸಿದಾಗ ಮೈಸೂರು ಮೂಲದ ವ್ಯಕ್ತಿಯನ್ನು ಕಡೂರು ಠಾಣೆ ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ ಬಂಧಿತ ಆರೋಪಿ. ಕೆಂಪರಾಜ್ ಎಂದು ಗುರುತಿಸಲಾಗಿದೆ. ಟೆಲಿಸ್ಕೋಪ್​ನ್ನು ಕಡೂರಿನ ಜೈನ್ ಟೆಂಪಲ್ ರಸ್ತೆಯ ವ್ಯಾಪಾರಿಗೆ 15 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ

(ನ್ಯೂಸ್ ಕಡಬ) newskadaba.com ಮುಂಬೈ, ಜ.08. ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೌದು… ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಅಮೆರಿಕದ ಐಟಿ ಕಂಪನಿಗಳು ಸೇರಿದಂತೆ ಬೃಹತ್‌ ಉದ್ದಿಮೆಗಳು ಉದ್ಯೋಗ ಕಡಿತ ಮಾಡಿವೆ. ಅಷ್ಟೇ ಅಲ್ಲ, ಬಹುತೇಕ ಕಂಪನಿಗಳು ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸಿದ ಪರಿಣಾಮವಾಗಿ ಭಾರತದ ಸಾವಿರಾರು ಟೆಕ್ಕಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅಮೆಜಾನ್‌, ಸೇಲ್ಸ್‌ಫೋರ್ಸ್‌, ಮೆಟಾ, ಟ್ವಿಟರ್‌, ಊಬರ್‌ ಸೇರಿದಂತೆ ಹಲವಾರು ಟೆಕ್‌ ಕಂಪನಿಗಳು ಇತ್ತೀಚೆಗೆ ಉದ್ಯೋಗ ಕಡಿತ ಆರಂಭಿಸಿದ್ದು, ಹೊಸ ನೇಮಕಾತಿ ಸ್ಥಗಿತಗೊಳಿಸಿವೆ. ಒಂದೆಡೆ ಮಿತಿಮೀರಿದ ಹಣದುಬ್ಬರ, ಮತ್ತೊಂದೆಡೆ ಆರ್ಥಿಕ ಹಿಂಜರಿತದ

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!! Read More »

ರಾಷ್ಟ್ರೀಯ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ

ನ್ಯೂಸ್ ಕಡಬ) newskadaba.com ಕಾಸಗೋಡು, ಜ.08. ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ,ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಚೆಂಗಳ ನಿವಾಸಿ ಸಂಶುದ್ದೀನ್ ಎಂಬುವರ ಪುತ್ರ ಮೊಹಮ್ಮದ್ ಸಾಹಿಲ್ (21) ಎಂದು ಗುರುತಿಸಲಾಗಿದೆ. ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿರೆ ಗಂಭೀರವಾಗಿ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top