newskadaba

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

(ನ್ಯೂಸ್ ಕಡಬ) newskadaba.com ಅ. 11. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಜಂಬೂಸವಾರಿ ಮೆರವಣಿಗೆಗೆ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅಕ್ಟೋಬರ್ 12ರ ಶನಿವಾರ ಸಂಜೆ 4 ರಿಂದ 4:30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಧ್ಯಾಹ್ನ 1.41ರಿಂದ 2.10ರೊಳಗೆ ಸಲ್ಲುವ ಶುಭ ಮಕರ […]

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಅ. 11. ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ

(ನ್ಯೂಸ್ ಕಡಬ) newskadaba.com ಅ. 11. ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪೆನಿ  ಹಾಗೂ ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದ್ದಾರೆ. ಈ ಕುರಿತು ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ

ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ Read More »

ಕರ್ನಾಟಕ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು Read More »

ಕರ್ನಾಟಕ

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಅ. 11. ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರದಂದು ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಅ. 11. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ Read More »

ಕರ್ನಾಟಕ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು Read More »

ಕರಾವಳಿ
crime, arrest, suspected

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ‌ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ

(ನ್ಯೂಸ್ ಕಡಬ) newskadaba.com ಅ. 11. ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೇ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿರುವುದಾಗಿ ವರದಿಯಾಗಿದೆ. ಗುರುವಾರದಂದು ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗವು, ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ Read More »

ಕರ್ನಾಟಕ

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ
Scroll to Top