newskadaba

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ […]

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕರಾವಳಿ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸೆ. 24. ಸ್ಕೂಟರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ಮೂಲದ ಜುನೈದ್ ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಎಮ್ಮೆಮಾಡಿಗೆ ತೆರಳಿ ವಾಪಾಸು ಬರುತ್ತಿದ್ದ ಸ್ಕೂಟರ್ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನ ಸುಳ್ಯದ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪರಿವಾರಕಾನ ಎಂಬಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಇದೀಗ ಅದರ ಗುರುತು ಪತ್ತೆಯಾಗಿದೆ. ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದು ಗುರುತಿಸಲಾಗಿದ್ದು ಈತ ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದೆ. ಸದ್ಯ ವ್ಯಕ್ತಿಯ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆಯಿಂದಷ್ಟೇ ಹೊರಬರಬೇಕಿದೆ.

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಇಬ್ಬರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ ಹಾಗೂ ಮಿಥುನ್ ಎಂದು ತಿಳಿದುಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದನೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸರ್ಕಾರಿ ಬಸ್ಸಿನ ನಿರ್ವಾಹಕ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ‌ರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಿಂದ ಹಿಂತಿರುಗುವ ಸಾರ್ವಜನಿಕ ಸಾರಿಗೆ ಬಸ್‌ನಲ್ಲಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮರ ವ್ಯಾಪಾರಸ್ಥರ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಮರ ವ್ಯಾಪಾರಾಸ್ಥರಿಗೆ ಆಗುವ ತೊಂದರೆ ಹಾಗೂ ಬೇರೆ ರಾಜ್ಯಗಳ ವ್ಯಾಪಾರಿಗಳ ದಬ್ಬಾಳಿಕೆಯನ್ನು ಎದುರಿಸುವ ಸಲುವಾಗಿ ಕಡಬದಲ್ಲಿ ತಾಲೂಕು ಮಟ್ಟದ ಮರ ವ್ಯಾಪಾರಸ್ಥರ ಸಂಘ ರಚನೆಗೊಂಡಿದ್ದು, ಇದರ ಮೊದಲ ಸಭೆಯು ಸೆಪ್ಟೆಂಬರ್ 20ರಂದು ಕಡಬ ಒಕ್ಕಲಿಗರ ಸಭಾಭವನದಲ್ಲಿ ನಡೆಯಿತು. ಜಿಎಸ್ಟಿ ಮುಖಾಂತರ ತೆರಿಗೆ ಪಾವತಿ ಮಾಡುತ್ತಿದ್ದರೂ ಮರ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ಸಾಂಘಿಕ ಹೋರಾಟದ ಮೂಲಕ ಪರಿಹರಿಸುವ ನಿಟ್ಟಿನಲ್ಲಿ ಈ ಸಂಘ ಕೆಲಸ ನಿರ್ವಹಿಸಲಿದೆ. ಕೆ.ಕೆ.ಅಬೂಬಕ್ಕರ್ ಅವರ ಅಧ್ಯಕ್ಷತೆಯಲ್ಲಿ

ಕಡಬ: ಮರ ವ್ಯಾಪಾರಸ್ಥರ ಸಂಘ ರಚನೆ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆ – ಮಲೆನಾಡು ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಕಸ್ತೂರಿ ರಂಗನ್ ವರದಿ ಜಾರಿಗೆ ಬರುವ ಮತ್ತು ಪರಿಸರ ಪರ ಯೋಜನೆ ಹಾಗೂ ಜಂಟಿ ಸರ್ವೇ ಮಾಡುವ ಬಗ್ಗೆ ಶಾಶ್ವತ ಪರಿಹಾರಕ್ಕಾಗಿ ಹೋರಾಟದ ರೂಪುರೇಷೆಗಳನ್ನು ತಯಾರಿಸಲು ಗುಂಡ್ಯ, ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆಯು ಗುಂಡ್ಯದ ಮಾಡ ಮೈದಾನದಲ್ಲಿ ಭಾನುವಾರದಂದು ನಡಯಿತು. ಸಭೆಯ ವೇದಿಕೆಯಲ್ಲಿ ಮಲೆನಾಡು ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಧರ್ಮಗುರು ಆದರ್ಶ ಜೋಸೆಫ್, ಪ್ರಸನ್ನ ಕುಮಾರ ಕುಮಾರಪುರ, ದಾಮೋದರ ಗುಂಡ್ಯ,

ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆ – ಮಲೆನಾಡು ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಸಭೆ Read More »

ಕರಾವಳಿ, ಕರ್ನಾಟಕ

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಪರಿಶೀಲನೆಗೆ ನೇಮಿಸಲಾಗಿದ್ದ ಸಂಸದೀಯ ಸಮಿತಿಯು 1.2 ಕೋಟಿ ಈಮೇಲ್ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.   ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯ ಜಂಟಿ ಸಮಿತಿಯು ಮಸೂದೆ ಪರ 75,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ. ಅಲ್ಲದೇ ಈಮೇಲ್ ಪ್ರತಿಕ್ರಿಯೆಗಳನ್ನು ವರ್ಗೀಕರಿಸಲು ಮತ್ತು ಪರಿಶೀಲಿಸಲು 15 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ಸಮಿತಿಯು ಕಳೆದ ತಿಂಗಳು ಸಾರ್ವಜನಿಕರಿಂದ,

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ತಿರುಪತಿಯಲ್ಲಿ ಪ್ರಸಾದ ರೂಪದಲ್ಲಿ ಕೊಡಲಾಗುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳು ಕೇಳಿಬರುವ ಹಿನ್ನೆಲೆ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಕುರಿತು ವರದಿಯಾಗಿದೆ. ಆಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಸರಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುತ್ತಿದ್ದ ಲಡ್ಡಿಗೆ ಪ್ರಾಣಿಗಳ ಕೊಬ್ಬುಗಳನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು.

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top