newskadaba

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ಅಂಗನವಾಡಿಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಮೈಬೂಬ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಕೇವಲ 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಬಾಯಿ ನಮ್ಮ ದೇಹದ ಆರೋಗ್ಯದ ಹೆಬ್ಬಾಗಿಲು. ನಾವು ತಿನ್ನುವ  ಆಹಾರ ಬಾಯಿಯ ಮುಖಾಂತರವೇ ಹೊಟ್ಟೆಗೆ ಹೋಗುತ್ತದೆ.  ನಾವು ತಿನ್ನುವ  ಆಹಾರ  ಸರಿಯಾಗಿ  ಜಗಿಯಲು, ಪಚನವಾಗಲು  ಮತ್ತು ಜೀರ್ಣವಾಗಲು ಆರೋಗ್ಯವಂತ ಬಾಯಿ ಮತ್ತು ಸದೃಢವಾದ  ಹಲ್ಲುಗಳು  ಅತೀ ಅಗತ್ಯ. ಹಾಲು ಹಲ್ಲುಗಳು ಕೂಡಾ ಶಾಶ್ವತ ಹಲ್ಲಿನಷ್ಟೇ  ಪ್ರಾಮುಖ್ಯವಾಗಿರುತ್ತದೆ. ಈ ಕಾರಣದಿಂದ  ಬಾಯಿ ಆರೋಗ್ಯ ಯಾವತ್ತೂ ನಿರ್ಲಕ್ಷಿಸಲೇಬಾರದು. ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಂಡು ನಿರಂತರ ದಂತ ವೈದ್ಯರ ಸಂದರ್ಶನ ಮಾಡಿಕೊಂಡು ಹಲ್ಲಿನ ಆರೋಗ್ಯ

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು Read More »

ಕರಾವಳಿ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ದಿನ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) https://shp.karnataka.gov.in/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ  ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಸಮುದಾಯದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10ಕೊನೆಯ ದಿನ. ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentSer Vices ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್

ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸೆ.25ರಂದು ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ  ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು. ಅರ್ಜಿದಾರರು ನಮೂನೆ I & II ರಲ್ಲಿ

ಸೆ.25ರಂದು ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ

ಕನ್ನಡ ಸಾಹಿತ್ಯ ಅಕಾಡೆಮಿ ಕಮ್ಮಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕರ್ನಾಟಕ ಸಾಹಿತ್ಯ ಅಕಾಡೆಮಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪ ಯೋಜನೆಯಡಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಎಂಬ ಮೂರು ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ಏರ್ಪಡಿಸಲಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಅಕಾಡೆಮಿ ಕಮ್ಮಟ- ಅರ್ಜಿ ಆಹ್ವಾನ Read More »

ಕರಾವಳಿ

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರದಂದು ಅಂತರಾಷ್ಟ್ರೀಯ ಕರಾವಳಿ  ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು. ಮೀನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರದ ಪ್ರಾಮುಖ್ಯತೆಯನ್ನು ತಿಳಿಸಲು ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024 Read More »

ಕರಾವಳಿ

ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಮೃತಪಟ್ಟ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 4 ಲಕ್ಷ ರೂ.ಗಳ ವಿಮಾ ಪರಿಹಾರ ವಿತರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಂದಿಗುಡ್ಡ ಫಸ್ಟ್ ಕ್ರಾಸ್ ಬಳಿ ವಾಸವಾಗಿದ್ದ ಮೃತ ಅರ್ಜುನ್ ಪೂಜಾರ್ (21) ಸ್ವಿಗ್ಗಿ ಡೆಲಿವರಿ ವೃತ್ತಿ ಮಾಡಿಕೊಂಡಿದ್ದು, 2024 ಫೆಬ್ರವರಿ 24 ರಂದು ಬಿಜೈ ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಕುಂಟಿಕಾನ ಕಡೆಗೆ ಫುಡ್ ಡೆಲಿವರಿ ಮಾಡಲು

ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2)ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ, 6)ಹೈನುಗಾರಿಕೆ, 7)ಕೋಳಿ ಸಾಕಾಣಿಕೆ, 8)ಮೀನುಗಾರಿಕೆ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್- PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top