newskadaba

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 25ರ ವರೆಗೆ ಪ್ರಥಮ ಡಿ.ಎಲ್.ಡಿ ಪರೀಕ್ಷೆಗಳು ನಡೆಯುತ್ತಿರುವ ನಗರದ ಸೈಂಟ್ ಆ್ಯನ್ಸ್ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಉಪ ಪೊಲೀಸು ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ದಾರ್ಥ್ […]

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ Read More »

ಕರಾವಳಿ
crime, arrest, suspected

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಅಕ್ರಮ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತನನ್ನು ಅನಂತ ದೇವದಾಸ ಎಂದು ಗುರುತಿಸಲಾಗಿದೆ. ಈತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ದುಬಾರಿ ದರದ ವಿವಿಧ ಬ್ರಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ Read More »

ಕರಾವಳಿ

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕಲಾವಿದರ ಮಾಸಾಶನ ಹಣವನ್ನು 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ Read More »

ಕರ್ನಾಟಕ
Death, deadbody, Waterfall

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ತನ್ನ ಮೇಲೆ ಶಾಸಕ ಮುನಿರತ್ನ 2020 ರಿಂದ 2022ರವರೆಗೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್..! Read More »

ಕರ್ನಾಟಕ

ವಿಧಾನಪರಿಷತ್ ಉಪಚುನಾವಣೆ- ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ. 21ರಂದು ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 21ರಂದು ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ

ವಿಧಾನಪರಿಷತ್ ಉಪಚುನಾವಣೆ- ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ. 21ರಂದು ಮತದಾನ Read More »

ಕರಾವಳಿ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರಸ್ತಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್‌ ನ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಲಿಂಕ್ https://shp.karnataka.gov.in ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 19. ಚಂದ್ರನ ಮೇಲೆ ಲ್ಯಾಡರ್‌ ಇಳಿಸಿ ಚಂದ್ರಯಾನ-3 ಯಶಸ್ವಿಯಾಗಿಸಿ ಇತಿಹಾಸ ನಿರ್ಮಿಸಿದ್ದ ಭಾರತ ಇದೀಗ ಚಂದ್ರನಿಂದ ಮಾದರಿ ಸಂಗ್ರಹಿಸುವ 4ನೇ ಚಂದ್ರಯಾನ ಯೋಜನೆಗೆ ಮುಂದಾಗಿದ್ದು, ಇದಕ್ಕಾಗಿ 2104 ಕೋಟಿ ರೂ. ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌, 2040ಕ್ಕೆ ಭಾರತ ಕೈಗೊಳ್ಳಲು ನಿರ್ಧರಿಸಿರುವ ಮಾನವ ಸಹಿತ ಚಂದ್ರಯಾನ ಯೋಜನೆಗೆ ಪೂರಕವಾಗಿ ಚಂದ್ರಯಾನ-4 ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ. ಚಂದ್ರನ

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಗಂಡು ಮಗುವಿಗೆ ಜನ್ಮ ನೀಡಿದ ‘ಚಿನ್ನು’ ಖ್ಯಾತಿಯ ಕವಿತಾ ಗೌಡ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೆಲವು ವರ್ಷಗಳ ಹಿಂದೆ ಕನ್ನಡದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರವಾಹಿಯ ಚಿನ್ನು ಪಾತ್ರದ ಮೂಲಕ ಖ್ಯಾತಿ ಪಡೆದಿದ್ದ ಕವಿತಾ ಗೌಡ ಮತ್ತು ಪತಿ ಚಂದನ್ ಗೌಡ ದಂಪತಿಗೆ ಗಮಡು ಮಗುವಿನ ಆಗಮನವಾಗಿದೆ. ಈ ವಿಚಾರವನ್ನು ಸ್ವತಃ ಕವಿತಾ ಗೌಡ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಯುವರಾಜನ ಆಗಮನ’ ಎಂದು ಪೋಸ್ಟ್ ಮಾಡಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ‘ಚಿನ್ನು’ ಖ್ಯಾತಿಯ ಕವಿತಾ ಗೌಡ..! Read More »

ಕರ್ನಾಟಕ, ಸಿನಿಮಾ
Scroll to Top