newskadaba

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕದ ಉತ್ತರ ತುದಿಯಾದ ಬೀದರ್ ಜಿಲ್ಲೆಯಿಂದ ದಕ್ಷಿಣ ತುದಿಯಾದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿಯನ್ನು ರಚಿಸಿ ಸಂವಿಧಾನದ ಬಗ್ಗೆ ದೇಶದ ನಾಗರಿಕರಲ್ಲಿ ಅರಿವು ಮೂಡಿಸಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿಯನ್ನು ಮುಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದವರೆಗೆ ರಚಿಸುವ ಮೂಲಕ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ […]

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ Read More »

ಕರ್ನಾಟಕ

ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. (ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಫೋಟೋಗ್ರಾಫರ್, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/

ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ Read More »

ಕರಾವಳಿ

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ನಗರದ ಪಡೀಲ್‍ನಲ್ಲಿರುವ ಮಂಗಳೂರು ವೃತ್ತ ಕಚೇರಿಯ ಪ್ರಾಂಗಣದಲ್ಲಿ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ Read More »

ಕರಾವಳಿ

ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ – ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭವಾಗುತ್ತಿರುವ ಹಿನ್ನೆಲೆ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿನ ಡಯಾಲಿಸಿಸ್ ರೋಗಿಗಳು (ಸ್ಥಳೀಯ), ಹಿರಿಯ ನಾಗರಿಕರು, ಮಹಿಳೆಯರು, ಕಡುಬಡವರು, ವಿಕಲಚೇತನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ಮೇರೆಗೆ ಡಯಾಲಿಸಿಸ್ ರೋಗಿಗಳನ್ನು ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಆಡಳಿತ ವೈದ್ಯಾಧಿಕಾರಿ

ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ – ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ Read More »

ಕರಾವಳಿ

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ನಗರದ ಬೊಂದೆಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಖುದ್ದಾಗಿ ಸರ್ಕಾರಿ ಬಾಲಕರ ಬಾಲ ಮಂದಿರ ಬೋಂದೆಲ್ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824- 2485401 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 10. ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2024ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲಾ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ  ಕೆಳ ಮಹಡಿಯಲ್ಲಿ ಪ್ರಾರಂಭಿಸಲಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೊಡಿಕಾನ, ಅರಂತೋಡು, ಕೊಡಿಯಾಳ,

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ Read More »

ಕರಾವಳಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ. ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿರುವುದು ಇವರ ವಿಶೇಷತೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ Read More »

ಕರಾವಳಿ

ಅಲ್-ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ – ಅಧ್ಯಕ್ಷರಾಗಿ ಆಸಿಫ್ ಪಾಪೆತ್ತಡ್ಕ, ಕಾರ್ಯದರ್ಶಿಯಾಗಿ ರಿಯಾಝ್ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 10. ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ 2023-24 ರ ಸಾಲಿನ ಸಮಿತಿಯ ವಾರ್ಷಿಕ ಮಹಾಸಭೆಯು ಪುತ್ತೂರಿನ ಪ್ರೆಸ್ಟೀಜ್ ಪೆವಿಲಿಯನ್ ಇಲ್ಲಿ ನಡೆಯಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಉಸ್ಮಾನ್ ಎ.ಕೆ., ಕಾಲೇಜು ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಾಮಾಜಿಕ ಕಳಕಳಿಯ ಉದ್ದೇಶದಿಂದ ಸ್ಥಾಪಿಸಲ್ಪಟ್ಟ ಅಲ್ ರಬೀಹ್ ಸಂಸ್ಥೆ ನಮ್ಮ ಸ್ನೇಹದ ಜೊತೆ ಹೆಮ್ಮೆ ತರುವಂತಾಗಿದೆ ಎಂದರು. ಸಂಸ್ಥೆಯ ನಿಕಟಪೂರ್ವ ಕಾರ್ಯದರ್ಶಿ ನಾಸಿರ್ ಪರ್ಪುಂಜ ವರದಿ

ಅಲ್-ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ – ಅಧ್ಯಕ್ಷರಾಗಿ ಆಸಿಫ್ ಪಾಪೆತ್ತಡ್ಕ, ಕಾರ್ಯದರ್ಶಿಯಾಗಿ ರಿಯಾಝ್ ಶಾಂತಿಗೋಡು Read More »

ಕರಾವಳಿ, ಕರ್ನಾಟಕ

ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್.ಡಿಎಂಸಿ ಅಧ್ಯಕ್ಷ ಸುರೇಶ್ ಯು.ಕೆ. ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೊಡಿಕಾನ ಕೃಷಿ ಪತ್ತಿನ

ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.    ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top