newskadaba

ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಖಾಸಗಿ ಬಸ್ ಗಳು ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌ ‍ಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.   ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌‍ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ. ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ ಹಾಗೂ ಆಯುಧಪೂಜೆಯಂತಹ ಸಂದರ್ಭಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು […]

ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ Read More »

ಕರ್ನಾಟಕ

ಪ್ಯಾರಾಲಿಂಪಿಕ್ಸ್- 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 30. ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖರಾ ಭಾಗವಹಿಸಿ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಸತತವಾಗಿ ಪ್ಯಾರಾಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಎರಡನೇ ಭಾರತೀಯ ಪ್ಯಾರಾ-ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಅವನಿ ಲೇಖರಾ ಅವರು ಶುಕ್ರವಾರದಂದು 249.7 ನೊಂದಿಗೆ ಮೂರು ವರ್ಷಗಳ ಹಿಂದೆ ಸ್ಥಾಪಿಸಿದ್ದ 249.6 ರ ಪ್ಯಾರಾಲಿಂಪಿಕ್ಸ್ ದಾಖಲೆಯನ್ನು ಮುರಿದಿದ್ದಾರೆ.

ಪ್ಯಾರಾಲಿಂಪಿಕ್ಸ್- 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರದಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿ ಕೆಳನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌. ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..! Read More »

ಕರಾವಳಿ, ಕರ್ನಾಟಕ
crime, arrest, suspected

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಸಂತೆ ಹಾಗೂ ಬಸ್‌‍ಗಳಲ್ಲಿ ಸಂಚರಿಸುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಶುಂಠಿ ವ್ಯಾಪಾರಿ ಮಹಿಳೆಯೋರರ್ವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ರೂ. ಮೌಲ್ಯದ 536 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಮಹಿಳೆಯನ್ನು ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಶಾರದಾ ಎಂದು ಗುರುತಿಸಲಾಗಿದೆ.  ಇದರಿಂದಾಗಿ ಈ ಹಿಂದೆ ಚಿಕ್ಕಪೇಟೆ ಹಾಗೂ ತುಮಕೂರಿನ ಗುಬ್ಬಿ ಪೊಲೀಸ್‌‍ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..! Read More »

ಕರ್ನಾಟಕ

ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ನಕಲಿ ದಾಕಲೆ ಸೃಷ್ಟಿಸಿ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ ಲ್ಯಾಗ್‌ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ 11 ಮಧ್ಯವರ್ತಿಗಳು ಹಾಗೂ 37 ಅನರ್ಹ ಅಭ್ಯರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು ಹಾಗೂ ಹಾರ್ಡ್‌ ಡಿಸ್ಕ್‌ನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. 2022ನೇ ಸಾಲಿನ ಅಕ್ಟೋಬರ್‌ ತಿಂಗಳಿನಲ್ಲಿ ಶೇಷಾದ್ರಿಪುರಂನ ಜಲಸಂಪನೂಲ ಇಲಾಖೆಯಿಂದ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ ಲಾಗ್‌

ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 30. ಇಲ್ಲಿನ ಶ್ರೀ ದುರ್ಗಾಂಬಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಕ್ರಿಯವಾಗಿರುವ ಮೊಗೇರ ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶಶಿಧರ್ ಬೊಟ್ಟಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಕಜೆ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಸಂತ ಕುಬಲಾಡಿ, ಮಹಾಬಲ ಪಡುಬೆಟ್ಟು, ಕೋಶಾಧಿಕಾರಿ ಗೋಪಾಲ್ ಬೀಡು, ಜೊತೆ ಕಾರ್ಯದರ್ಶಿ ದಿನೇಶ್ ಗಾಣಂತಿ, ಸಾಂಸ್ಕೃತಿಕ ಕಾರ್ಯದರ್ಶಿ ಹರ್ಷ ಕೋಡಿ, ಕ್ರೀಡಾ ಕಾರ್ಯದರ್ಶಿ ಮಹೇಶ್ ಪಟ್ಲಡ್ಕ, ಮಾಧ್ಯಮ ಕಾರ್ಯದರ್ಶಿ

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಿಕ್ಷಾ, ಕಾರು ಹಾಗೂ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಬಳಿ ನಡೆದಿದೆ. ಗಾಯಗೊಂಡವರನ್ನು ಜಪ್ಪು ಬಪ್ಪಾಲ್‌ ನಿವಾಸಿಗಳಾದ ಉಸ್ಮಾನ್ ಮತ್ತವರ ಪತ್ನಿ ರಮ್ಲಾ ಹಾಗೂ ಪುತ್ರ ಮುಹಮ್ಮದ್ ನಝಲ್ ಎಂದು ಗುರುತಿಸಲಾಗಿದೆ. ನಗರದ ಬಲ್ಮಠ ರಸ್ತೆಯಾಗಿ ಸ್ಟೇಟ್‌ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಲೆಸುತ್ತು ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ

ವಾಹನ ಸವಾರರಿಗೆ ಖಡಕ್ ಎಚ್ಚರಿಕೆ- ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಕಂಡುಬಂದಲ್ಲಿ ಕಾನೂನು ಕ್ರಮ ಫಿಕ್ಸ್…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಇತ್ತೀಚೆಗೆ ರಾಜ್ಯದ ಹಲವೆಡೆ ರಸ್ತೆ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಾಂಧಲೆ ನಡೆಸುವುದು ಕಂಡು ಬರುತ್ತಿದೆ. ಹೀಗಾಗಿ ಅಂತವರ ವಿರುದ್ದ ಖಡಕ್ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಇಂತಹ ಪ್ರಕರಣದಲ್ಲಿ ಭಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿ ಅತಿರೇಕದ ಜಗಳಗಳಿಗೆ ಅವಕಾಶವಿಲ್ಲ. ನಿಮ್ಮ ಆಕ್ರೋಶವನ್ನು ಬದಿಗೊತ್ತಿ, ತಾಳ್ಮೆಯನ್ನು ತಂದುಕೊಳ್ಳಿ. ರಸ್ತೆ ಜಗಳ ಅಪಾಯಕಾರಿಯಷ್ಟೇ ಅಲ್ಲ, ಕ್ರಿಮಿನಲ್ ಅಪರಾಧ ಕೂಡ. ಅದರಲ್ಲಿ

ವಾಹನ ಸವಾರರಿಗೆ ಖಡಕ್ ಎಚ್ಚರಿಕೆ- ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಕಂಡುಬಂದಲ್ಲಿ ಕಾನೂನು ಕ್ರಮ ಫಿಕ್ಸ್… Read More »

ಕರ್ನಾಟಕ

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಾ ಇಲ್ಲ.‌ ಹೀಗಾಗಿ ಕರ್ನಾಟಕಕ್ಕೆ ಪುಣೆ ಹಾಗೂ ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60ರಿಂದ 70 ರೂಪಾಯಿ ಆಗಿದೆ.‌ ರಾಜ್ಯಕ್ಕೆ ಈ ಮೊದಲು ಉತ್ತರ ಕರ್ನಾಟಕದಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಪರಿಣಾಮ ಹೆಚ್ಚಾಗಿದ್ದು ಈರುಳ್ಳಿ ಬೆಳೆ ಕೊಳೆತು

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…! Read More »

ಕರ್ನಾಟಕ

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಸಾಧನೆಗೈಯಲು ಅತ್ಯುತ್ತಮ ಕೊಡುಗೆ ನೀಡಿದ ರಾಜ್ಯದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯು

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top