newskadaba

ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೋವ್ ಜೈಲಿನಿಂದ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 29. ಹಲವು ಆರೋಪಗಳಡಿಯಲ್ಲಿ ಬಂಧಿತನಾಗಿದ್ದ ಟೆಲಿಗ್ರಾಂ ಸಂಸ್ಥಾಪಕ ಪಾವೆಲ್‌ ಡುರೋವ್‌ ರನ್ನು 5.5 ದಶಲಕ್ಷ ಡಾಲರ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಫ್ರಾನ್ಸ್‌ ದೇಶದ ಅಧಿಕಾರಿಗಳು ಈತನಿಗೆ ದೇಶ ತೊರೆದು ಹೋಗುವಂತೆಯೂ ಆದೇಶಿಸಿದ್ದು, ಇದೀಗ ಫ್ರಾನ್ಸ್‌ ನಿಂದ ಬಹಿಷ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ. ಜೊತೆಗೆ ವಾರಕ್ಕೆ ಎರಡು ಬಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡುವಂತೆಯೂ ಸೂಚಿಸಲಾಗಿದೆ. ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಉಗ್ರವಾದ, ಮಕ್ಕಳ ಲೈಂಗಿಕ ವಿಡಿಯೋ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರಡುತ್ತಿರುವ […]

ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೋವ್ ಜೈಲಿನಿಂದ ಬಿಡುಗಡೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್
crime, arrest, suspected

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ Read More »

ಕರಾವಳಿ

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿ ಪರಿಶೀಲಿಸಬೇಕು. ಈ ಸಂಬಂಧ

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ Read More »

ಕರಾವಳಿ, ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ  ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ “ಜೀವಮಾನ ಸಾಧನೆ ಪ್ರಶಸ್ತಿ” ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು “ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಆನ್ ಲೈನ್ ವೆಬ್‍ ಸೈಟ್: https://sevasindhuservices.karnataka.gov.in ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು

ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಪ್ರಧಾನ ಮಂತ್ರಿ ಜನ್‍ ಮನ್ ಆದಿವಾಸಿ ಮಹಾ ಅಭಿಯಾನ (PM- JANMAN) ಯೋಜನೆಯಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಕೊರಗ ಸಮುದಾಯದವರನ್ನು ಸಾಮಾಜಿಕ- ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ (PVTG) ಅಭಿವೃದ್ಧಿ ಮಿಷನ್ ಅನ್ನು ಪ್ರಾರಂಭಿಸಿ ಸಮುದಾಯದವರಿಗೆ  ಮೂಲಭೂತ ಸೌಲಭ್ಯಗಳನ್ನು ನೀಡಲು  ಸರಕಾರಿ ದಾಖಲೆಗಳಾದ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್, ಗೃಹಜ್ಯೋತಿ, ಕಿಸಾನ್ ಕಾರ್ಡ್

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಯೋಜನೆ, ಮತ್ಸ್ಯ ವಾಹಿನಿ ಯೋಜನೆ ಹಾಗೂ ರಾಜ್ಯ ವಲಯ ಯೋಜನೆ ಕಾರ್ಯಕ್ರಮದಲ್ಲಿ ಮೀನು ಹಿಡಿಯುವ ಸಲಕರಣೆ, ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಮೀನುಗಾರರಿಂದ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ಸಲ್ಲಿಸಲು ಮೀನುಗಾರಿಕೆ ಸಹಾಯಕ ನಿರ್ದೇಶಕರು

ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮತ್ತು ಸಂಗಡಿಗರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಬೆನ್ನಲ್ಲೇ ಗುರುವಾರದಂದು ಬೆಳಗ್ಗೆ ದರ್ಶನ್‌ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸುತ್ತಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ ಮೂಲಕ ಬಳ್ಳಾರಿ ಜೈಲಿಗೆ ಕರೆತರಲಾಗಿದ್ದು ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನೆಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ. ಶೋಭಾರಾಣಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..! Read More »

ಕರಾವಳಿ
Death, deadbody, Waterfall

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಮಾಹಿತಿ ಲಭ್ಯವಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತೇಲಿ ಹೋಗಿರುವುದು ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..! Read More »

ಕರಾವಳಿ, ಕರ್ನಾಟಕ
Scroll to Top