newskadaba

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಅಮಾನುಷ ಹಲ್ಲೆ ಹಾಗೂ ಹತ್ಯೆ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಸಮಾಜದ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. […]

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರ ವರೆಗೆ  17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-66685, ಮೂಡಬಿದ್ರೆ-59167, ಮಂಗಳೂರು ನಗರ ಉತ್ತರ-58682, ಮಂಗಳೂರು ನಗರ ದಕ್ಷಿಣ-67721, ಮಂಗಳೂರು-86607, ಬಂಟ್ವಾಳ-63770, ಪುತ್ತೂರು-59684, ಸುಳ್ಯ-79213.

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಜುಲೈ 17 ಮತ್ತು 18ರ ವರೆಗೆ ಮಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಸಿ.ಎಸ್.ಐ.ಆರ್ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ, ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ಬಿ.ಎಡ್ ಪದವಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ನಗರದ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪರೀಕ್ಷಾ ಕೇಂದ್ರದಲ್ಲಿ ಬಿ.ಎಡಿ ಪದವಿ ಪರೀಕ್ಷೆಯು ಜುಲೈ 16 ರಿಂದ 25ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್

ಬಿ.ಎಡ್ ಪದವಿ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು  2025 ರ ಆಗಸ್ಟ್ 1ರಿಂದ  2026ರ  ಜುಲೈ 31 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆ ‘’ಸಾಕ್ಷರತಾ ಜಿಲ್ಲೆ‘’ ಎಂದು ಘೋಷಣೆಯಾಗಿದ್ದರೂ, 2011ರ ಜನಗಣತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.15 ಲಕ್ಷ ಅನಕ್ಷರಸ್ಥರು ಇದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅನಕ್ಷರಸ್ಥರನ್ನು ಸಮೀಕ್ಷೆ ಮಾಡಿ ಸಾಕ್ಷರರನ್ನಾಗಿ ಮಾಡುವ ನಿಟ್ಟಿನಲ್ಲಿ ಕಲಿಯಲು ಪ್ರೋತ್ಸಾಹಿಸಿದ, ಶಾಲೆಗೆ ಹೋಗದ, ಕನ್ನಡ ಓದಲು, ಬರೆಯಲು ಹಾಗೂ ಸರಳ ಲೆಕ್ಕಾಚಾರ ಮಾಡಲು ಬಾರದ, ಅಜ್ಜಿ ಅಥವಾ ಅಜ್ಜ, ತಂದೆ, ತಾಯಿ ಅಥವಾ ಮನೆಯಲ್ಲಿ ಇರುವ ಯಾವುದೇ ಅನಕ್ಷರಸ್ಥ ಸದಸ್ಯರನ್ನು

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂತಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ Read More »

ಕರಾವಳಿ

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL)

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ

(ನ್ಯೂಸ್ ಕಡಬ) newskadaba.com ಜು. 15. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಯಲ್ಲಿ, ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸದ್ಯಕ್ಕೆ ಕೆಆರ್‌ಎಸ್ ಅಣೆಕಟ್ಟಿನಿಂದ ನೀರು ಹರಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಪ್ರಾಧಿಕಾರವು ಉಭಯ ರಾಜ್ಯಗಳಿಗೆ ಸೂಚನೆ ನೀಡಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದ ಪರವಾಗಿ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು,

ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top