newskadaba

ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 24. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರೆಸೂರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್, ಮೊಹ್ಮದ್ ಮುಸ್ತಫಾ, ಶೋಹೆಬ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮ್ನಿ ಕಾರಿನಲ್ಲಿ ಕುಟುಂಬದವರ ಜೊತೆ ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ […]

ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕರಾವಳಿ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 24. ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋಗಿದ್ದ ಕೃಷಿಕರೊಬ್ಬರು ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ (60) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದ ವಿಶ್ವನಾಥರವರು ಮಧ್ಯಾಹ್ನದವರೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ ಕೈಗಾಡಿ ಕೆರೆಯ ಬಳಿ ಪತ್ತೆಯಾಗಿದೆ. ಪಕ್ಕದ ಕೆರೆಯಲ್ಲಿ ನೋಡಿದಾಗ ವಿಶ್ವನಾಥರ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಸ್ಥಳೀಯರು

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸೊತ್ತುಗಳಿಗೆ ಹಾನಿ ಮಾಡಿದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ಗುರುವಾರದಂದು ತಡರಾತ್ರಿ ನಡೆದಿದೆ.   ದೊಡ್ಡಡ್ಕ ನಿವಾಸಿ ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಅಂಗಡಿಗೆ ಬೆಂಕಿ ಹಚ್ಚಿ ಹಾನಿಗೊಳಿಸಲಾಗಿದೆ. ಸಂಕಪ್ಪ ಪೂಜಾರಿ ಅವರು ಸಣ್ಣ ಗೂಡಂಗಡಿ ಮತ್ತು ಟೀ ಸ್ಟಾಲ್ ಜೊತೆಯಾಗಿ ನಡೆಸುತ್ತಿದ್ದರು. ಪ್ರತಿದಿನ ಸಂಜೆಯ ತನಕ ವ್ಯಾಪಾರ ನಡೆಸುತ್ತಿದ್ದ ಅವರು ಬಳಿಕ ಅಂಗಡಿ ಬಂದ್ ಮಾಡಿ ಮನೆಗೆ

ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 24. ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ರವರು ಶನಿವಾರ ಬೆಳಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ.   ಟೀಮ್ ಇಂಡಿಯಾದಲ್ಲಿ ಆಡಿದ ನಂತರ ನನಗೆ ನಿಮ್ಮ ಅಭಿಮಾನಿಗಳ ಪ್ರೀತಿ ಸಿಕ್ಕಿತು. ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಮುಚ್ಚುತ್ತಿದ್ದಂತೆ, ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳನ್ನು ಮತ್ತು ಕೃತಜ್ಞತೆಯನ್ನು ತೆಗೆದುಕೊಳ್ಳುತ್ತೇನೆ.

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಿರುತ್ತದೆ. ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ Read More »

ಕರಾವಳಿ, ಕರ್ನಾಟಕ

ಶಿವಮೊಗ್ಗದಲ್ಲಿ ಸೇನಾ ನೇಮಕಾತಿ ರ್ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಶಾರ್ಟ್‍ಲಿಸ್ಟ್ ಮಾಡಿದ ಪುರುಷ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ಹೆಚ್‍ಕ್ಯು ನೇಮಕಾತಿ ವಲಯದ ಆಶ್ರಯದಲ್ಲಿ ಸೇನಾ ನೇಮಕಾತಿ ಕಚೇರಿ, ಮಂಗಳೂರಿನಿಂದ ಆಗಸ್ಟ್ 22ರಿಂದ 31 ಆಗಸ್ಟ್ 2024ರ ವರೆಗೆ ಶಿವಮೊಗ್ಗದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ ಜಿಲ್ಲೆಗಳು:- ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ್, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ. ಏಪ್ರಿಲ್ 22 ರಿಂದ ನಡೆಸಲಾದ ಸಾಮಾನ್ಯ

ಶಿವಮೊಗ್ಗದಲ್ಲಿ ಸೇನಾ ನೇಮಕಾತಿ ರ್ಯಾಲಿ Read More »

ಕರ್ನಾಟಕ

ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ

ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ `ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್ -2024` ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆಧ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಮೈ ಗವರ್ನಮೆಂಟ್ ವೇದಿಕೆಯಡಿ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ Read More »

ಕರಾವಳಿ, ಕರ್ನಾಟಕ

ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಆಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ. ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824- 2220318 ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್ Read More »

ಕರಾವಳಿ
Scroll to Top