newskadaba

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಶುಕ್ರವಾರ ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ ಹೇಳಿದ್ದಾರೆ. ಕಳೆದ ವರ್ಷ ಇದೇ ದಿನದಂದು ಉಡಾವಣೆಗೊಂಡ ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸ್ಮರಣಾರ್ಥವಾಗಿ ಆ. 23ನ್ನು ರಾಷ್ಟ್ರೀಯ ಬಾಹ್ಯಾ ಕಾಶ ದಿನವಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿತ್ತು.   1969ರಲ್ಲಿ ಸ್ಥಾಪನೆಗೊಂಡ ಇಸ್ರೋ ಸಂಸ್ಥೆಯು 55 ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ […]

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 23. ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ ಆರೋಪಿ ಎಂದು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ.

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ Read More »

ಕರಾವಳಿ

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.   ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಪ್ರಕರಣ ತನಿಖಾ ಹಂತದಲ್ಲಿರುವಾಗ ಸಾಕ್ಷಿ ಹೇಳಿದ ವ್ಯಕ್ತಿಯು ಜೈಲಿನಲ್ಲಿರುವ ಆರೋಪಿಯನ್ನು ಭೇಟಿಯಾಗುವಂತಿಲ್ಲ. ಆದರೆ ಇದೀಗ ಚಿಕ್ಕಣ್ಣ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾ ಹಂತದಲ್ಲಿರುವಾಗಲೇ ಆರೋಪಿ

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು Read More »

ಕರ್ನಾಟಕ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ವಿಶ್ವವಿದ್ಯಾನಿಲಯ, ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಭಾಗಿತ್ವದೊಂದಿಗೆ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಪಾರ್ಮಸಿ, ಕೃಷಿ ವಿಜ್ಞಾನ, MBA, MCA, LLB ಕೋರ್ಸ್‍ಗಳಿಗೆ ರೂ.50,000/-ರಿಂದ ರೂ.5,00,000/-ದವರೆಗೆ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in  ಮುಖಾಂತರ ಅರ್ಜಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಆದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಆದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳು :- ಮೋಟಾರು ವಾಹನ

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ Read More »

ಕರಾವಳಿ, ಕರ್ನಾಟಕ

ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಅವರು ಮಂಗಳೂರು ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.   ಈ ಸಂದರ್ಭದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಪ್ರತ್ಯೇಕವಾದ ಕಟ್ಟಡ ಇಲ್ಲದೇ ಖಾಸಗಿ ಕಟ್ಟಡ, ಕ್ಲಬ್ ಹಾಗೂ ಸಮುದಾಯ ಭವನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಕೆಲವು ಅಂಗನವಾಡಿ ಕೇಂದ್ರಗಳಲ್ಲಿ

ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ Read More »

ಕರಾವಳಿ, ಕರ್ನಾಟಕ

ರಾಷ್ಟ್ರೀಯ ಸೆಮಿನಾರ್- ಲೇಖನಗಳನ್ನು ಕಳುಹಿಸಲು ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹುಸೂಚಕ ಸಮೀಕ್ಷೆ ಮತ್ತು 79ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ Research Scholars/Academic Fraternity ಗಳು ಆಗಸ್ಟ್ 31ರೊಳಗೆ ತಮ್ಮ ಲೇಖನಗಳನ್ನು ತಯಾರಿಸಿ nssocpd.coord@mospi.gov.in ಇ-ಮೇಲ್ ವಿಳಾಸಕ್ಕೆ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸೆಮಿನಾರ್- ಲೇಖನಗಳನ್ನು ಕಳುಹಿಸಲು ಸೂಚನೆ Read More »

ಕರಾವಳಿ, ಕರ್ನಾಟಕ

ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸರಕಾರಿ ನೌಕರರಿಗೆ ಗುರುತು ಚೀಟಿಯ ಕೊರಳುದಾರ ಕೆಂಪು – ಹಳದಿ ಬಣ್ಣಕ್ಕೆ ಬದಲಾಯಿಸಲಾಗಿದೆ.   ಈಗಾಗಲೇ ಸರಕಾರ ಅಗಸ್ಟ್ 16ರಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಸರಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿ ಗುರುತಿನ ಚೀಟಿಯನ್ನು ಧರಿಸುವ ಸಂದರ್ಭ ಕೆಂಪು ಹಳದಿ ಬಣ್ಣದ ಕೊರಳುದಾರ (ಟ್ಯಾಗ್) ಧರಿಸುವಂತೆ

ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಚೇರಿಯ ಮೊಬೈಲ್ ಐಸಿಟಿಸಿ ವಾಹನ ಚಾಲಕರ ಒಂದು ಹುದ್ದೆಯ ನೇಮಕಾತಿಗಾಗಿ ಅಗಸ್ಟ್ 31ರಂದು ಬೆಳಿಗ್ಗೆ 11:30 ಗಂಟೆಗೆ ಮಂಗಳೂರಿನ ನೆಹರು ಮೈದಾನ ಎದುರು ಇರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗಿದ್ದು, 2025 ಮಾರ್ಚ್ 31ರ ಅವಧಿಯವರೆಗೆ ಮಾಸಿಕ ವೇತನ ರೂ. 18000/- ನಿಗದಿಪಡಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ, ಕರ್ನಾಟಕ
Scroll to Top