newskadaba

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೋರ್ವನನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯ ವಿರುದ್ದ ಕೆಂಗೇರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.   ಖಾಸಗಿ ಕಾಲೇಜೊಂದರಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬಾತ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಇವೆಂಟ್ ವಿಚಾರವಾಗಿ ಮೂರು ಲಕ್ಷ ಸಾಲ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್ […]

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಮನವಿ ಮಾಡಲಾಗಿದೆ.   ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ದೂರಿನಲ್ಲಿ ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..! Read More »

ಕರ್ನಾಟಕ

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ

ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ರಹ್ಮಾನಿಯ ಜುಮ್ಮಾ ಮಸೀದಿ ಕೋಡಿಂಬಾಳ ಇದರ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿಯ ವಠಾರದಲ್ಲಿ  ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಫಝಲ್ ಕೋಡಿಂಬಾಳರವರು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಬಾಷಣವನ್ನು ಜಮಾತ್ ಖತೀಬರಾದ ಅಬೂಬಕ್ಕರ್ ಮದನಿ ಉಸ್ತಾದ್ ರವರು ಸವಿಸ್ತಾರವಾಗಿ ನುಡಿದರು.  ಈ ಸಂದರ್ಭದಲ್ಲಿ ಮದ್ರಾಸ ಅಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ SSF, SYS, KJM ಕೋಡಿಂಬಾಳ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ಮತ್ತು ಓಂತ್ರಡ್ಕ

ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಎಲ್ಲಾ ರೀತಿಯ ರಾಜಿ ಆಗಬಲ್ಲ MACT ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಮುಂತಾದ ಪ್ರಕರಣಗಳನ್ನು ಅದಾಲತ್ ಮುಂದಿಟ್ಟು ಶೀಘ್ರವಾಗಿ ಇತ್ಯರ್ಥ ಪಡಿಸಲು ಕ್ರಮ ವಹಿಸಬಹುದಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳು ತಮ್ಮ ಕಚೇರಿಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯು ಆ. 20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಘನ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು

ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ Read More »

ಕರಾವಳಿ

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮಂಜನಾಡಿ ಗ್ರಾಮ ಪಂಚಾಯತ್‍ನ ಜಮಾಬಂದಿ ಕಾರ್ಯಕ್ರಮ ಆ. 23ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮಂಜನಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಮಾಬಂದಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೆ. ಜಯರಾಂ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ Read More »

ಕರಾವಳಿ, ಕರ್ನಾಟಕ

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಜಿ ಸಲ್ಲಿಸಬಹುದು. ಅರ್ಹರು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ  ಅಧ್ಯಕ್ಷತೆಯಲ್ಲಿ  ವಿಡಿಯೋ ಕಾನ್ಫೆರೆನ್ಸ್  ಸಭೆಯ ನಡೆಯಿತು.  ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ   ಭಾರಿ ಮಳೆಯಿಂದ  ಹಲವಾರು ಹಾನಿಗಳು  ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ  ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು.  ಗ್ರಾಮ ಪಂಚಾಯತ್ ಮಟ್ಟದಲ್ಲಿ  ಟಾಸ್ಕ್ ಫೋರ್ಸ್ ಕಮಿಟಿಯನ್ನು ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು ಅಂಗನವಾಡಿಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಬೇಕು ಹಾಗೂ

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ Read More »

ಕರಾವಳಿ, ಕರ್ನಾಟಕ
Scroll to Top