newskadaba

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು […]

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ

ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದೊಂದಿಗೆ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಆಗಸ್ಟ್ 20ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್

ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ರ್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ,

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿ ಕೊಡುವ ನಿಟ್ಟಿನಲ್ಲಿ 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯ ಅಡಿಕೆ,ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಾವಣಿಗೊಳಿಸಲು ಆಗಸ್ಟ್ 2 ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಳೆ ಸಾಲ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ Read More »

ಕರ್ನಾಟಕ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನೀಶ್ ಡಿ ಎಲ್ ಅವರು ಧ್ವಜಾರೋಹಣಗೈದರು. ಜಾತಿ ಮತ ಧರ್ಮ ಭೇದಗಳ ನೆಲೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಲು ಅವಕಾಶ ನೀಡದೇ ಸಂವಿಧಾನದ ಶ್ರೇಷ್ಠ ಅಂಶಗಳನ್ನು ಭಾರತೀಯರೆಲ್ಲರೂ ಅನುಸರಿಸಬೇಕು ಅಲ್ಲದೇ ರಾಷ್ಟ್ರೀಯ ಸಮಗ್ರತೆಗೆ ಐಕ್ಯತಾಭಾವನೆ ನಮ್ಮ ಮೂಲ ಮಂತ್ರವಾಗಬೇಕು ಎಂದು ಅವರು ಅತಿಥಿ ಭಾಷಣದಲ್ಲಿ ಹೇಳಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 16. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಿಂದ ವರದಿಯಾಗಿದೆ.   ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 16. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಒಟ್ಟು 819 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಯ್ಕೆ ಆದವರು ತಿಂಗಳಿಗೆ 69,100 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »

ಕರಾವಳಿ, ಕರ್ನಾಟಕ

ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ

(ನ್ಯೂಸ್ ಕಡಬ) newskadaba.com ಶ್ರೀಹರಿಕೋಟಾ, ಆ. 16. ಇಸ್ರೋ ಇಂದು ತನ್ನ ಭೂ ವೀಕ್ಷಣಾ ಮತ್ತು ಎಸ್‌ಆರ್-ಒ ಡೆಮೋಸ್ಯಾಟ್‌ ಉಪಗ್ರಹಗಳನ್ನು ಯಶಸ್ವಿಯಾಗಿ ತನ್ನ ಉದ್ದೇಶಿತ ಕಕ್ಷೆಯಲ್ಲಿ ಇರಿಸಿದೆ. ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಹೊತ್ತ ತನ್ನ ಮೂರನೇ ಮತ್ತು ಅಂತಿಮ ಡೆವಲೆಪ್‌ಮೆಂಟಲ್‌ ಫ್ಲೈಟ್‌, ಸ್ಮಾಲ್‌ ಸ್ಯಾಟಿಲೈಟ್‌ ಲಾಂಚ್‌ ವೆಹಿಕಲ್-‌ಡಿ3 ಅನ್ನು ಇಸ್ರೋ ಇಂದು ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಸ್ಥಳದಿಂದ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಮೈಕ್ರೊಸ್ಯಾಟಿಲೈಟ್ ವಿನ್ಯಾಸ ಮತ್ತು ಅಭಿವೃದ್ಧಿ,

ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top