newskadaba

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ರಾಜ್ಯ ಸರ್ಕಾರವು ಒಂದಲ್ಲೊಂದು ಎಡವಟ್ಟು ಮಾಡುತ್ತಲೇ ಇದ್ದು, ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಇನ್ನು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಿಲ್ಲ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ […]

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ Read More »

ಕರ್ನಾಟಕ

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 21. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ಬಟಪ್ಪಾಡಿಯಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಗಬ್ಬಲಡ್ಕದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ನಡೆಯುತ್ತಿದ್ದ ವೇಳೆ ಚಂದ್ರಶೇಖರ ಅವರು ಪಟಾಕಿಯನ್ನು ಸಿಡಿಸುವ ವೇಳೆ ಪಟಾಕಿ ಕೈಯಲ್ಲೇ ಸ್ಫೋಟಗೊಂಡ ಪರಿಣಾಮ ಕೈ ಬೆರಳುಗಳಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸೇರಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 21. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ  ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ನಾರಿಮನ್​ ಅವರು ಕರ್ನಾಟಕ  ಪರ ವಾದ ಮಂಡಿಸಿದ್ದರು. ಎಸ್. ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದು, ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಎಸ್. ನಾರಿಮನ್ ಅವರಿಗೆ 1991

ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ..! Read More »

ಕರ್ನಾಟಕ

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದೆ.   ಆರೋಪಿಯನ್ನು ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ. ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ  100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕ್ರಮವನ್ನು

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಭಾರತೀಯ ಕೇಂದ್ರ ರೈಲ್ವೆ ಇಲಾಖೆಯು  622 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಖಾಲಿ ಇರುವ ಹುದ್ದೆಗಳಲ್ಲಿ ಕ್ಲರ್ಕ್, ಹೆಲ್ಪರ್ ಹುದ್ದೆಗಳು ಸೇರಿವೆ. ಕೇಂದ್ರ ರೈಲ್ವೇ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಜನವರಿ 25ರಿಂದ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top