newskadaba

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20.  ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ […]

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 20. ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲ ಹಾಗೂ ಸರಳೇಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರು ಬೋನು ಇಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಪರ್ಕಳದ ಸಣ್ಣಕ್ಕೀಬೆಟ್ಟುವಿನಲ್ಲಿ ಸೋಮವಾರ ಹಗಲು ಹೊತ್ತಿನಲ್ಲಿಯೇ ಚಿರತೆಯೊಂದು ನವಿಲನ್ನು ಹಿಡಿದು ತಿನ್ನುವ ದೃಶ್ಯ ಕಂಡುಬಂದಿದೆ ಎಂದು ಸಣ್ಣಕ್ಕಿಬೆಟ್ಟುವಿನ ಆಟೋ ಚಾಲಕರೋರ್ವರು ತಿಳಿಸಿದ್ದಾರೆ. ಮಣಿಪಾಲದ ಎಂಡ್ ಪಾಯಿಂಟ್ ಸಮೀಪದ ವಿಜಯನಗರ ಪರಿಸರದಲ್ಲಿ ಚಿರತೆಯ ಆರ್ಭಟ ಕೇಳಿಸುತ್ತಿದ್ದು, ಇಲ್ಲಿ ಬೋನು ತಂದು ಇಡುವಂತೆ ಸ್ಥಳೀಯರು

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ Read More »

ಕರ್ನಾಟಕ

ಚಿರತೆ ದಾಳಿ- ಜೋಡಿಕರುಗಳು ಬಲಿ

(ನ್ಯೂಸ್ ಕಡಬ) newskadaba.com ಗುಂಡ್ಲುಪೇಟೆ, ಫೆ. 19. ಚಿರತೆ ದಾಳಿಗೆ ಜೋಡಿಕರುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ನಾಗೇಶ್ ಎಂಬವರು ತನ್ನ ಜಮೀನಿನಲ್ಲಿ ಕರುಗಳನ್ನು ಮೇಯಲು ಬಿಟ್ಟಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಎರಡು ಕರುಗಳನ್ನ ಬಲಿ ಪಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಪರಿಸರದಲ್ಲಿ ಚಿರತೆ ಕಾಟ ಮಿತಿಮೀರಿದ್ದು, ಅರಣ್ಯ ಇಲಾಖೆಯ ನಿರ್ಲಕ್ಸ್ಯಕ್ಕೆ ಆಕ್ರೋಶಗೊಂಡಿರುವ ರೈತರು ಚಿರತೆಯನ್ನ ಸೆರೆಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಚಿರತೆ ದಾಳಿ- ಜೋಡಿಕರುಗಳು ಬಲಿ Read More »

ಕ್ರೈಮ್ ನ್ಯೂಸ್

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 20. ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ಗುಂಪು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ನಾಲ್ಕು ವರ್ಷದ ಉಮರ್ ಯಾಸಿನ್ ಎಂದು ಗುರುತಿಸಲಾಗಿದೆ. ಬೀದಿ ನಾಯಿಗಳು ಬಾಲಕನ ಮೂಗು, ಬಾಯಿ, ತೊಡೆಗೆ ಕಚ್ಚಿದ್ದರಿಂದ ಗಂಭೀರ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಆಗ್ರಹಿಸಿದ್ದಾರೆ.

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 20. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ತಡೆಯುವುದಕ್ಕಾಗಿ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು, ಶಾಲಾ ತರಗತಿ ಕೊಠಡಿಗಳಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸಲು, ಮೊಬೈಲ್ ಫೋನ್‌ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಈ ಕುರಿತಾದ ವಿಡಿಯೋ ವೈರಲ್‌ ಆಗಿದೆ. ಈ ಕುರಿತಾದ ವಿಡಿಯೋ ಸಂದೇಶವೊಂದನ್ನು ಯುಕೆ ಪ್ರಧಾನಿ ರಿಷಿ ಸುನಕ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿರಾಮದ ಸಮಯ ಸೇರಿದಂತೆ ಇಂಗ್ಲೆಂಡ್‌ ನಾದ್ಯಂತ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲು ಸೋಮವಾರದಂದು ಸರ್ಕಾರವು ಹೊಸ

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ,  ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ Read More »

ಉದ್ಯೋಗ, ಕರಾವಳಿ

ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಗಮಿಸಿತು. ದಲಿತ ಸಂಘರ್ಷ ಸಮಿತಿ ಸದಸ್ಯರು, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿವರ್ಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು

ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ Read More »

ಕರಾವಳಿ

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಇನ್ನುಮುಂದೆ KSRTC ನೌಕರರ ಮಾದರಿಯಲ್ಲಿಯೇ  ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಪರಿಹಾರ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವಿಮಾ ಸೌಲಭ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಇಂದಿನಿಂದಲೇ ಜಾರಿಗೆ ಬರಲಿದ್ದು, 28 ಸಾವಿರ ನೌಕರರ ಕುಟುಂಬಗಳಿಗೆ ಹೊಸ ವಿಮಾ ಸೌಲಭ್ಯ ಸಿಗಲಿದೆ. ಇಲ್ಲಿಯವರೆಗೆ ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ಪರಿಹಾರ ನೀಡಿದರೆ,

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ Read More »

ಕರ್ನಾಟಕ

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವ ಬಗ್ಗೆ ಶಾಸಕರೇ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ Read More »

ಕರ್ನಾಟಕ
Scroll to Top