newskadaba

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 15. ಪ್ರಖ್ಯಾತ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಅವರು ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಗಳನ್ನು ಏಕಕಾಲದಲ್ಲಿ ಬಳಸುವುದಾಗಿ ಹೇಳಿಕೊಂಡಿದ್ದಾರೆ.

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ Read More »

ಕರ್ನಾಟಕ

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ISRO ದಲ್ಲಿ ಉದ್ಯೋಗಾವಕಾಶ- 224 ಹುದ್ದೆಗಳಿಗೆ ಅರ್ಜಿ ಆಹ್ವಾನ- ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ISRO ದಲ್ಲಿ ಉದ್ಯೋಗಾವಕಾಶ- 224 ಹುದ್ದೆಗಳಿಗೆ ಅರ್ಜಿ ಆಹ್ವಾನ- ಇಂದೇ ಅಪ್ಲೈ ಮಾಡಿ Read More »

ಉದ್ಯೋಗ

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರವಾಸ ಮಾಡಿದ್ದ ಮಾದರಿಯಲ್ಲೇ ಇದೇ ಫೆ. 23ರ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.   ಕಳೆದಬಾರಿ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16,

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ Read More »

ಕರ್ನಾಟಕ

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದ್ದು, ಇದರಿಂದ ತೆರವಾಗಿರುವ ಸ್ಥಾನಕ್ಕೆ ಕಲಬುರ್ಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಫೆಬ್ರವರಿ 27 ಮತ್ತು 28ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವು ನಡೆಯಲಿದ್ದು ಈ ಸಮ್ಮೇಳದಲ್ಲಿ ಭಾಗವಹಿಸಲಿರುವ ನೌಕರರಿಗೆ 2 ದಿನ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ಸಂಘಗಳ ವತಿಯಿಂದ ಫೆ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ನಡೆಯಲಿದ್ದು ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..! Read More »

ಕರ್ನಾಟಕ
Scroll to Top