newskadaba

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮುಂಬೈ, ಜ. 12. ಭಾರತದ ಅತೀ ಉದ್ದನೆಯ ಸಾಗರ ಸೇತುವೆಯನ್ನು ಪ್ರದಾನಿ ನರೇಂದ್ರ ಮೋದಿ ಅವರು ಜನವರಿ 12ರಂದು ಉದ್ಘಾಟಿಸಲಿದ್ದಾರೆ. ಈ ಸೇತುವೆಯನ್ನು ದಕ್ಷಿಣ ಮುಂಬೈನಿಂದ ನವ ಮುಂಬೈವರೆಗೆ ಸಮುದ್ರದಲ್ಲಿ ನಿರ್ಮಿಸಲಾಗಿದ್ದು, ಇದು ಬರೋಬ್ಬರಿ 21.8 ಕಿಲೋ ಮೀಟರ್‌ ಉದ್ದದ ಸೇತುವೆಯಾಗಿದೆ. ಇದರಿಂದಾಗಿ ದಕ್ಷಿಣ ಮುಂಬೈನಿಂದ ನವ ಮುಂಬೈವರೆಗಿನ ಎರಡು ಗಂಟೆಗಳ ಪ್ರಯಾಣವನ್ನು ಇನ್ನು ಕೇವಲ 15-20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹೊಸ ಸೇತುವೆ ನಿರ್ಮಾಣದಿಂದಾಗಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ […]

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 12. ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಎಂದು ಗುರುತಿಸಲಾಗಿದೆ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದ ಈತನಿಗೆ, ಪ್ರಸ್ತುತ ಪ್ರಥಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಗುರುವಾರದಂದು ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಈತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಮಾದಕ ವಸ್ತು ಎಂಡಿಎಂಎನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನೋರ್ವನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್‌ ಹಾಗೂ ಸುಮಾರು 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಡಿಎಂಎ ಸಾಗಾಟ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಇಡೀ ದೇಶವೇ ಬೆಚ್ಚಿಬೀಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದರಿಂದಾಗಿ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ

ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 11. ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮೂಲಕ ಭಾರತೀಯರ ಅನೇಕ ವರ್ಷದ ಕನಸು ಹಾಗೂ ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ದಿನ ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಅವಿಸ್ಮರಣೀಯವಾಗಿದೆ. ಮಹತ್ಕಾರ್ಯದ ನೇತೃತ್ವ ವಹಿಸಿದ ದೇಶದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 11. ಕಾಂಗ್ರೆಸ್ ಪಕ್ಷವು ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದಾಗಿ ಬುಧವಾರದಂದು ತಿಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ಮಂದಿರದ ಉದ್ಘಾಟನೆಯನ್ನು ಮಾಡಲಾಗುತ್ತಿದೆ. 2019ರ ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಆರಾಧಿಸುವ ಕೋಟ್ಯಂತರ ಜನರ ಭಾವನೆಗಳನ್ನು ಗೌರವಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ,

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತದೇಹವನ್ನು ಗಮನಿಸಿದ ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಾರಿಸುದಾರರು ಇದ್ದಲ್ಲಿ. ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು,ಜ 11.  ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಜ.12ರಂದು ಕೆಎ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿರುತ್ತದೆ. ಗುರುವಾರ ಬಸ್‍ಗಳ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಕಾಧಿರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಅವಿವಾಹಿತ ಕಾರ್ಮಿಕರೋರ್ವರು ಸ್ಥಳೀಯ ಅಂಗಡಿಯೊಂದರ ಹೊರಗಡೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಡಗನ್ನೂರು ಗ್ರಾಮದ ಪೆರಿಗೇರಿ ನಿವಾಸಿ ಪೆರಿಗೇರಿ ದಿ.ಅಪ್ಪಯ್ಯ ನಾಯ್ಕ ಅವರ ಪುತ್ರ ಜಾನು ನಾಯ್ಕ (45) ಎಂದು ಗುರುತಿಸಲಾಗಿದೆ. ಅವರು ಮನೆಯ ಸಮೀಪದಲ್ಲಿನ ದುರ್ಗಾಸ್ಟೋರ್ ಎಂಬ ಅಂಗಡಿಯ ಎದುರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top