newskadaba

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ನ. 23. ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯಾದ ಆರೋಗ್ಯ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲ್ ಹಾಗೂ ಪಿಯು ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ಸಮೇತ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕಡಿದು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.   ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ನ. 23. ಮುಕ್ಕ ಚೆಕ್‌ಪೋಸ್ಟ್‌ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.    

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..! Read More »

ಕರ್ನಾಟಕ

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top