newskadaba

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪರಿಶಿಷ್ಟ ಜಾತಿ, ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ ಸಮಗಾರ, ಮೋಚಿ ಜನಾಂಗದವರಿಗೆ 2023- 24ನೇ ಸಾಲಿನ ವಿವಿಧ ಯೋಜನೆಗಳಾದ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ, ಮಾನವ ಸಂಪನ್ಮೂಲ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಮತ್ತು ವಸತಿ ಯೋಜನೆಗಳಿಗೆ ಅರ್ಜಿ […]

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ನವೆಂಬರ್ 27ರಂದು ಬೆಳಗ್ಗೆ 11.30 ರಿಂದ 1 ಗಂಟೆಯವರೆಗೆ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ ನಡೆಸುವರು. ಅಲ್ಪಸಂಖ್ಯಾತ ಸಮುದಾಯದವರು ಈ ಸಭೆಗೆ ಹಾಜರಾಗಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ Read More »

ಕರಾವಳಿ

ಡಿಸೆಂಬರ್ 2ರಂದು ವಿಶ್ವ ವಿಕಲಚೇತನರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಲಯನ್ಸ್ ಕ್ಲಬ್ ಮಂಗಳೂರು ಗಾಂಧಿನಗರ ಇವರ ಸಹಯೋಗದಲ್ಲಿ ಡಿಸೆಂಬರ್ 2 ರಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.15ಕ್ಕೆ ವಿಶೇಷ ಶಾಲೆಗಳ ವಿಕಲಚೇತನ ಮಕ್ಕಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳಿಂದ

ಡಿಸೆಂಬರ್ 2ರಂದು ವಿಶ್ವ ವಿಕಲಚೇತನರ ದಿನಾಚರಣೆ Read More »

ಕರಾವಳಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ನ. 23. ನಮ್ಮ ಬಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಯ ಹೆಬ್ಬಾಗಿಲು. ನಾವು ತಿನ್ನುವ ಆಹಾರ ಬಾಯಿಯ ಮುಖಾಂತರ ಪ್ರವೇಶಿಸಿ ಅನ್ನನಾಳದ ಮುಖಾಂತರ ಹೊಟ್ಟೆಯನ್ನು ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ನಮ್ಮ ದೇಹದ ಆರೋಗ್ಯ ಚೆನ್ನಾಗಿರಲು ಸಾಧ್ಯ. ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು. ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ ರೂ. 237.66 ಲಕ್ಷಗಳ ಪೈಕಿ ಪೂರ್ಣಗೊಂಡಿರುವ ರೂ. 96 ಲಕ್ಷಗಳ ವೆಚ್ಚದ ಕಾಮಗಾರಿಗಳ

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ನವೆಂಬರ್ 27ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೀಸ್ ನವೆಂಬರ್ 27ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ- ನವೆಂಬರ್ 27ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 11.30 – ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆ,  ಮಧ್ಯಾಹ್ನ 3.30ರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಶೀಲನಾ ಸಭೆ,

ನವೆಂಬರ್ 27ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ Read More »

ಕರಾವಳಿ, ಕರ್ನಾಟಕ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ನವೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ- ನವೆಂಬರ್ 24ರ ಶುಕ್ರವಾರದಂದು ಬೆಳಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ  ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಈಜುಕೊಳದ ಉದ್ಘಾಟನೆ ಹಾಗೂ ಈಜು ಸ್ಪರ್ಧೆಯನ್ನು ಉದ್ಘಾಟಿಸುವರು. 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ, 2.30ರಿಂದ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top