newskadaba

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಯ […]

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರಾವಳಿ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದ ಯುವತಿಯೋರ್ವಳು ಅಪಾರ್ಟ್‌‌ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತ ಯುವತಿಯನ್ನು ವಿಜಯಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಖಿನ್ನತೆಗೊಳಗಾಗಿದ್ದ ವಿಜಯಲಕ್ಷ್ಮೀ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೂ ಮೊದಲು ಧರ್ಮಸ್ಥಳಕ್ಕೆ ಹೋಗಿದ್ದ ಆಕೆ ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರಿಬ್ಬರು ರಕ್ಷಣೆ ಮಾಡಿ ಬುದ್ಧಿ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ

(ನ್ಯೂಸ್ ಕಡಬ) newskadaba.com ಸೆ. 22. ಆಹಾರದಲ್ಲಿ ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆಯು ವರದಿಯೊಂದನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಹಲವು ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ಮಾನವನ ದೇಹಕ್ಕೆ ತೀರಾ ಅಗತ್ಯ ಪೌಷ್ಟಿಕಾಂಶವೆಂದೆನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾರ್ಶ್ವ ವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು.ಅಧಿಕ ಉಪ್ಪಿನ ಸೇವನೆ ರಕ್ತದ ಒತ್ತಡ ಹೆಚ್ಚಲು ಹಾಗೂ ಹೃದಯಾಘಾತ ಸಾಧ್ಯತೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ ಅಧಿಕ ಉಪ್ಪು

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ Read More »

ಆರೋಗ್ಯ ಮಾಹಿತಿ

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 22. ಕಾವೇರಿ ನದಿ ನೀರು ವಿವಾದದ ಹಿನ್ನಲೆ ಕರ್ನಾಟಕ-ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರದಂದು ನಡೆಯಿತು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿನಿತ್ಯ ವಿನೂತನ ಚಳವಳಿ ನಡೆಸುತ್ತಿದ್ದು, ಇಂದು ಕೇಂದ್ರ ಸರ್ಕಾರ ಸ್ವಾಮ್ಯದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನಾ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಸುಪ್ರಿಂ

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ Read More »

ಕರ್ನಾಟಕ

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ಮೊಹಾಲಿ, ಸೆ. 22. ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ. ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್‌ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ -ಸಚಿವ ಕೆ.ವೆಂಕಟೇಶ್

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಕುಡಿಯುವ ನೀರಿ‌ನ ಕೊರತೆ ಉಂಟಾಗಿಲ್ಲ‌. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು. ಇನ್ನು ಕಾವೇರಿ ಜಲವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ

ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ -ಸಚಿವ ಕೆ.ವೆಂಕಟೇಶ್ Read More »

ಕರ್ನಾಟಕ

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top