newskadaba

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ […]

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 20. ಶಾಲಾ ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೇ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬ್ಲ್ಯಾಕ್​ ಮೇಲ್ ಮಾಡಿರುವ ಆರೋಪಿಗಳು ಅಸೀಮ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ. ಅಸೀಮ್ ಹಾಗೂ ಮಯೂರ್ ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ. ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ.

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ Read More »

ಕರಾವಳಿ, ಕರ್ನಾಟಕ

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಿ.ಎಡ್ ಮತ್ತು ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆಯಡಿ ಸೆಪ್ಟೆಂಬರ್ 21 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಎಂ.ಫಿಲ್ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲ್ಲೋಶಿಪ್ ಯೋಜನೆಯಡಿ ಅಕ್ಟೋಬರ್ 03 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಅರಿವು

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಜನಪ್ರಿಯ ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ನ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆಯನ್ನು ಫಾಲೋ ಮಾಡಬಹುದಾಗಿದೆ. ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ. ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು, ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಸೆ. 20. ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಸಿಗರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು ಹಾಗೂ ತಿಮ್ಮೇಗೌಡ ಎಂಬವರು ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಕುಡಿಯುವುದಾಗಿ ಚಾಲೆಂಜ್‌ ಮಾಡಿದ್ದರು. ಅದರಂತೆ ತಿಮ್ಮೇಗೌಡರು 90 ಎಂಎಲ್‌ನ 10 ಪ್ಯಾಕೆಟ್‌ ಮದ್ಯ ಸೇವಿಸಿದ ಅರ್ಧ ಗಂಟೆ ಬಳಿಕ ರಕ್ತವಾಂತಿ ಮಾಡಿಕೊಂಡು

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಈ ಅಗ್ನಿ ಅನಹುತ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021 ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್‌ (ಹಿಂದಿನ ಟ್ವಿಟರ್​) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top