newskadaba

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು […]

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

(ನ್ಯೂಸ್ ಕಡಬ) newskadaba.com ಕುಣಿಗಲ್, ಸೆ. 16. ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಹೇರೂರು ಸೇತುವೆ ಬಳಿ ಶುಕ್ರವಾರದಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ನಾಗಮಂಗಲ ತಾಲೂಕು ಸೀಗೇಹಳ್ಳಿ ಗ್ರಾಮ ಹಾಲಿ ಬೆಂಗಳೂರು ಮಾದನಾಯಕಹಳ್ಳಿ ನಿವಾಸಿ ಶೋಭಾ ಮತ್ತು ಮಗ ನಿಖಿಲ್ ಗೌಡ(12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪತಿ ಗಂಗೇಶ್ ಹಾಗೂ ಮಗಳು ಭುವನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲು ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ Read More »

ಕರಾವಳಿ

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ದುಬೈ, ಸೆ. 16. ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಹಲವು ನಟರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ವಿಭಾಗದಲ್ಲಿ ಬಂದಿರುವ ಪ್ರಶಸ್ತಿಗಳು ಹೀಗಿವೆ- ಕೆಜಿಎಫ್ 2 – ಯಶ್ ರಿಷಬ್ ಶೆಟ್ಟಿ – ಅತ್ಯುತ್ತಮ ನಟ (ಕ್ರಿಟಿಕ್ಸ್) ಭುವನ್ ಗೌಡ – ಅತ್ಯುತ್ತಮ ಛಾಯಾಗ್ರಾಹಕ (ಕೆಜಿಎಫ್ 2) ಚಾರ್ಲಿ 777- ಅತ್ಯುತ್ತಮ ಸಿನಿಮಾ, ಪೃಥ್ವಿ ಶಾಮನೂರು – ಅತ್ಯುತ್ತಮ ಉದಯೋನ್ಮುಖ ನಟ (ಪದವಿ ಪೂರ್ವ), ಪವನ್ ಒಡೆಯರ್ –

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 16. ನಿಲ್ಲಿಸಿದ ಲಾರಿಯೊಂದು ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಜರಾ (20) ಹಾಗೂ ಖತೀಜಾತುಲ್ ಆಫಿಯಾ (18) ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ನಲ್ಲಿ ‌ಸರ್ವೀಸ್ ರಸ್ತೆಯಲ್ಲಿ ಚಾಲಕನೋರ್ವ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 16. ಹೋಟೆಲ್‌ ರೂಮ್‌ ಒಂದರಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನ ನಯನಾ ಹಾಗೂ ಕಿರಣ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಸೇರಿಕೊಂಡು ಹೋಟೆಲ್‌ ಪ್ರಾರಂಭಿಸಿದ್ದರು. ಈ ಹೋಟೆಲ್ ಎಂಬಿಎ ವಿದ್ಯಾರ್ಥಿನಿಯೋರ್ವಳು ತನ್ನ ಪ್ರಿಯಕರನ ಜತೆಗೆ ಆಗಾಗ ಬಂದು ರೂಮ್‌ ಪಡೆಯುತ್ತಿದ್ದಳು. ಇದನ್ನೇ ಉಪಯೋಗಿಸಿಕೊಂಡ ನಯನಾ ಹಾಗೂ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಸೆ. 15) ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನವಾದ ಯಾವುದೇ ಮಾಹಿತಿ ಇಲ್ಲದ ಕಾರಣ ಸಫರ್ 30 ಪೂರ್ತಿಗೊಳಿಸಿ ಇಂದು ಸೆ. 16ರ ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ರಬೀವುಲ್ ಅವ್ವಲ್ 1 ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಸೆ. 28ರಂದು ರಬೀವುಲ್ ಅವ್ವಲ್ 12 ಮೀಲಾದುನ್ನಬೀ ದಿನವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ Read More »

ಕರಾವಳಿ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ

(ನ್ಯೂಸ್ ಕಡಬ) newskadaba.com  ಚೆನ್ನೈ, ಸೆ. 15. ದ್ರಾವಿಡ ಮಾದರಿಯ ಆಡಳಿತದ ನೀತಿಯಂತೆ, ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮಹಿಳೆಯರು ದೇವಾಲಯದಲ್ಲಿ ಆರ್ಚಕರಾಗಿ ಕಾರ್ಯನಿರ್ವಹಿಸಲಿದ್ದಾರೆಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಮಹಿಳೆಯರು ಪೈಲಟ್ ಗಳು ಹಾಗೂ ಬಾಹ್ಯಾಕಾಶಯಾತ್ರಿಗಳಾಗಿ ಸಾಧನೆ ಮಾಡಿರುವ ಹೊರತಾಗಿಯೂ ಅವರನ್ನು ಅಪವಿತ್ರವೆಂದು ಪರಿಗಣಿಸಿ ದೇವಾಲಯಲ್ಲಿ ಪೌರೋಹಿತ್ಯದಂತಹ ಪವಿತ್ರವಾದ ಪಾತ್ರಗಳನ್ನು ನಿರ್ವಹಿಸುವುದರಿಂದ ದೂರವಿಡಲಾಗಿದೆ. ಸ್ತ್ರೀದೇವತೆಗಳ ದೇವಾಲಯದಲ್ಲೂ ಅವರನ್ನು ದೂರವಿಡಲಾಗಿದೆ. ಆದರೆ ಕೊನೆಗೂ ಇಲ್ಲಿ ಬದಲಾವಣೆಯಾಗಿದೆ ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ‘x’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಕೆಲ ತಿಂಗಳಿಂದ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ನೇಮಿಸಿ ಸರಕಾರ ಆದೇಶಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ ರವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ Read More »

ಕರ್ನಾಟಕ
Scroll to Top