newskadaba

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 19ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ […]

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ Read More »

ಕರಾವಳಿ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು.   ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ Read More »

ಕರಾವಳಿ

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕ ಇಲಾಖೆಯಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. 23ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಎಜುಕೇಶನ್ ಸೊಸೈಟಿ ಕೆಸೆಸ್ ಕಾಂಪೌಂಡ್ ಬಲ್ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಳು ಇಂತಿವೆ: 60ರಿಂದ 69 ವರ್ಷ ವಯೋಮಿತಿಯ ಪುರುಷರಿಗೆ 200 ಮೀ. ನಡಿಗೆ ಮತ್ತು ರಿಂಗ್ ಬಗೆಟ್‍ನಲ್ಲಿ ಎಸೆಯುವುದು ಮತ್ತು ಮ್ಯೂಸಿಕಲ್ ಚೇರ್. 70ರಿಂದ 79 ವರ್ಷ ವಯೋಮಿತಿಯವರಿಗೆ 100

ಸೆ. 23ರಂದು ಹಿರಿಯ ನಾಗರಿಕರಿಗೆ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಮ್ಯಾನೇಜ್‍ ಮೆಂಟ್ ಕೋಟಾದ ಕೋರ್ಸ್‍ಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಅಡ್ವಾನ್ಸ್‍ಡ್ ಸಿ.ಎನ್.ಸಿ ಮ್ಯಾಚಿಂಗ್ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಕದ್ರಿಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಅದೇ ದಿನದಂದು

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಮುಟ್ಟತ್ತೋಡಿಯ ಖಮರುನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ ಆರೋಪಿಗಳ ಸಹಿತ 3.99 ಗ್ರಾಂ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಸ್ವಾಮಿ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಬುಧವಾರದಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಉಪಸ್ಥಿತರಿದ್ದರು.

ಕುಮಾರಸ್ವಾಮಿ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ Read More »

ಕರ್ನಾಟಕ

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 13. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರದಂದು ಸಂಭವಿಸಿದೆ. ಆಟೋ ರಿಕ್ಷಾವೊಂದು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಮುಂದಿನಿಂದ ತೆರಳುತ್ತಿದ್ದ ಲಾರಿಯೊಂದು ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 13. ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ‌ ವಾಹನ ಸವಾರ ಮೃತಪಟ್ಟ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದ ಅಶ್ವಿತ್ ಶೆಟ್ಟಿ ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆಂದು ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ ಅಶ್ವಿತ್ ತಾಯಿ,

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ ಎಂದು ಗುರುತಿಸಲಾಗಿದೆ. ಗೋಪಿನಾಥ್ ಅವರು ಚಿಕ್ಕಪ್ಪನ ‌ಜೊತೆ ಬೈಕ್ ನಲ್ಲಿ ಬಂಟ್ವಾಳದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಓವರ್ ಟೇಕ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top