newskadaba

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಕಾವೇರಿ ನದಿ ನೀರು ಹಂಚಿಕೆಯ ವಿವಾದ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿ ಆದೇಶಿಸಿದೆ. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್ […]

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ Read More »

ಕರ್ನಾಟಕ

ಪಡಿತರ ಚೀಟಿ ತಿದ್ದುಪಡಿಗೆ ಸೆ. 01ರಿಂದ 10ರ ವರೆಗೆ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನಾಂಕ ನೀಡಲಾಗಿತ್ತು. ಆದರೆ ಹಲವೆಡೆ ಸರ್ವರ್ ಸಮಸ್ಯೆ ಕಾಣಿಸಿಕೊಂಡ ಕಾರಣ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೇ ಮನೆಗೆ ತೆರಳಿದ್ದರು. ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್‌ 01 ರಿಂದ 10 ರವರೆಗೆ

ಪಡಿತರ ಚೀಟಿ ತಿದ್ದುಪಡಿಗೆ ಸೆ. 01ರಿಂದ 10ರ ವರೆಗೆ ಕಾಲಾವಕಾಶ Read More »

ಕರ್ನಾಟಕ

ಬೇಕರಿ ಮಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 22. ಬೇಕರಿ ಅಂಗಡಿ ಮಾಲೀಕ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಹಾಸನ ಜಿಲ್ಲೆಯ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್‌ ಎಂದು ಗುರುತಿಸಲಾಗಿದೆ. ಮಾಡಿಕೊಂಡವರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶಾಂತಿಬಾಗ್‌ ಬಳಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಹಾಸನದಿಂದ 12 ವರ್ಷಗಳ ಹಿಂದೆ ಬಂದಿದ್ದ ರುದ್ರೇಶ್‌ ಕುತ್ತಾರು

ಬೇಕರಿ ಮಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಮೊದಲು ಆ. 21ರ ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಇದೀಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ ಮತ್ತು ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಸಾರ್ವಜನಿಕರು ಆನ್‌ಲೈನ್

ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ Read More »

ಕರ್ನಾಟಕ

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಂಜೆ ವಾಪಾಸ್ಸು ಬಂದಿರಲಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲೂ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಹಾಸ್ಟೆಲ್ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.   ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ Read More »

ಕರಾವಳಿ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ 5 ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ ಆರ್ ಅವರು ಕುಕ್ಕೇ ಶ್ರೀ ದೇವಳಕ್ಕೆ ಸುಮಾರು 1 ಲಕ್ಷದ 25 ಸಾವಿರ ರೂ. ಮೌಲ್ಯದ 5 ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದರು. ಅದರಂತೆ ಸೋಮವಾರದಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ Read More »

ಕರಾವಳಿ

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 22. ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಜನ್ ಎಂದು ಗುರುತಿಸಲಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಸ್ವತಃ ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top