newskadaba

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶೇಖ್ ಅಶಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನಿರಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ […]

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವು ಇಲ್ಲಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಟಗಾರ್ತಿಯರಾದ ಜಮೀಲತ್ ನೌಶೀನ, ಜೋಯ, ಝೈನಬ ವಫಿಯ್ಯ ತಂಡವನ್ನು ಪ್ರತಿನಿಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ, ಶ್ರೀಮತಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ, ಕ್ರೀಡಾ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಆ. 30ರಂದು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದರು.

ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 19. ಮೆಟ್ರೋ ರೈಲ್ವೇಯಲ್ಲಿ ವಿವಿಧ 86 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಆ. 31 ರೊಳಗೆ mpmetrorail.com ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 88 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 26 ಮೇಲ್ವಿಚಾರಕ, 12 ನಿರ್ವಹಣೆ, 9 ಮೇಲ್ವಿಚಾರಕ, 9 ನಿರ್ವಹಣೆ (ಎಳೆತ), 8 ಮೇಲ್ವಿಚಾರಕ (ಎಳೆತ), ಮೇಲ್ವಿಚಾರಕ (ಟ್ರ್ಯಾಕ್),

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಇಂದು ಡಿಪ್ಲೊಮಾ ಸೆಮಿಸ್ಟರ್ ಗಳ ರಿಸಲ್ಟ್ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023 ರ ಜೂನ್ / ಜುಲೈ ತಿಂಗಳಿನಲ್ಲಿ ನಡೆಸಿದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೊಮಾ ಸೆಮಿಸ್ಟರ್ ಗಳ ಫಲಿತಾಂಶವನ್ನು ಆಗಸ್ಟ್ 19 ರಂದು ರಾಜ್ಯದಲ್ಲಿನ ಎಲ್ಲಾ ಪಾಲಿಟೆಕ್ನಿಕ್‍ ಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಪರೀಕ್ಷಾ ಫಲಿತಾಂಶವು www.myexamresults.net ಜಾಲತಾಣದಲ್ಲಿ ಲಭ್ಯವಿರುತ್ತದೆ ಎಂದು ಬೆಂಗಳೂರಿನ ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಡಿಪ್ಲೊಮಾ ಸೆಮಿಸ್ಟರ್ ಗಳ ರಿಸಲ್ಟ್ ಪ್ರಕಟ Read More »

ಕರ್ನಾಟಕ

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 200 ಅಪ್ರೆಂಟೈಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್- 70 ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಜನರಲ್ ಸ್ಟೀಮ್ ಗ್ರಾಜುಯೇಟ್

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 19. ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು “ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ” ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಹಿರಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕವಾದಂತಹ ಜ್ಞಾನವನ್ನು ವೃಧ್ಧಿಸುವುದರ ಜೊತೆಗೆ ಶಿಕ್ಷಕರಾದವರು ಪ್ರತಿನಿತ್ಯ ಚಟುವಟಿಕೆಗಳ ಮೂಲಕ ಯೋಜನಾತ್ಮಕವಾಗಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್ ಕನ್ನಡ ಸೀಸನ್- 10 – ಸ್ಪರ್ಧಿಗಳ ಪಟ್ಟಿ ವೈರಲ್

(ನ್ಯೂಸ್ ಕಡಬ) newskadaba.com ಆ. 19. ಕಿರುತೆರೆಯ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡದ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬಾಸ್ ಕನ್ನಡ ಸೀಸನ್ 10 ರ ಬಗ್ಗೆ ಕೆಲವು ಅಪ್‌ಡೇಟ್‌ಗಳು ವೈರಲ್‌ ಆಗುತ್ತಿದ್ದು, ಕಳೆದ ಬಾರಿಯಂತೆ ಈ ಸಲವೂ ಬಿಗ್‌ಬಾಸ್‌ ಓಟಿಟಿ ನಡೆಯುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಬಿಗ್ ಬಾಸ್ ಶೋ ನೇರವಾಗಿ ಟಿವಿಯಲ್ಲಿ ನಡೆಯುವ ಸಾಧ್ಯತೆ ಇದೆ. ಎಂದಿನಂತೆ ಈ ವರ್ಷವೂ ಕನ್ನಡದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್‌ ಬಾಸ್‌

ಬಿಗ್ ಬಾಸ್ ಕನ್ನಡ ಸೀಸನ್- 10 – ಸ್ಪರ್ಧಿಗಳ ಪಟ್ಟಿ ವೈರಲ್ Read More »

ಕರ್ನಾಟಕ, ಲೈಫ್‍ಸ್ಟೈಲ್

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನರಿಮೊಗರು ಐಟಿಐ ಮೈದಾನದ ಪಕ್ಕದಲ್ಲಿ ಶನಿವಾರದಂದು ನಡೆದಿದೆ. ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ. ಮೃತಪಟ್ಟಿರುವ ಕಾಡುಕೋಣಕ್ಕೆ ಅಂದಾಜು 4 ರಿಂದ 5 ವರ್ಷ ಪ್ರಾಯವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಸುಬ್ಬಯ್ಯ ನಾಯ್ಕ,

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top