newskadaba

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ […]

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕೊಡಗು, ಆ. 18. ಬಾಣಂತಿಯನ್ನು ವಿಚಾರಿಸಲು ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಪಾರಾಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಹೆರಿಗೆಯಾಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆಗೆ ಪಾರಾಣೆ ಕಮ್ಯುನಿಟಿ ಹೆಲ್ತ್ ಆಫೀಸರ್ ಕೆ‌.ಕೆ ಭವ್ಯ ಅವರು ತೆರಳಿದ್ದರು. ಬಾಣಂತಿಯ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದ ಸಂದರ್ಭ ಭವ್ಯ ಅವರ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿದ್ದು, ಭವ್ಯ ಅವರ ದೇಹದ ಹಲವು

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು  ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ದುಬೈ ಮಾರ್ಕೆಟ್‌ ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಗ್ರಾಹಕನೋರ್ವ ಪವರ್ ಬ್ಯಾಂಕ್‌ ರಿಪೇರಿಗೆಂದು ಬಂದಿದ್ದು, ಅಂಗಡಿ ಮಾಲಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದು ಹೇಳಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಗ್ರಾಹಕ ಅಂಗಡಿ ಮಾಲಕನಿಗೆ ಹಲ್ಲೆ ಮಾಡಿದ ಆರೋಪ ಕೇಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ (Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈೆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎನ್ನಲಾಗಿದೆ. PMEGP ವೆಬ್ಸೈ್ಟ್ ನಲ್ಲಿ ಆನ್ಲೈಧನ್ ಮೂಲಕ ಅರ್ಜಿ ಸಲ್ಲಿಸಲು ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ಸಂಬಂಧಿತ ಬ್ಯಾಂಕುಗಳಿಗೆ ಕಳುಹಿಸಲಾಗುವುದು. ಅರ್ಜಿ ಸಲ್ಲಿಕೆಯ ನಂತರದಲ್ಲಿನ ವಿವಿಧ ಹಂತಗಳ ಪ್ರಗತಿಯನ್ನು ಆನ್ಲೈಲನ್ ಸ್ಟೇಟಸ್ ನೋಡಬಹುದು. ಏಜೆನ್ಸಿ ಹೆಸರು ಡಿಐಸಿ

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top