newskadaba

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.  

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ಉಡುಪಿ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಖಾಸಗಿ ವಿಡಿಯೋ ಸೆರೆ ಪ್ರಕರಣದಲ್ಲಿ ಈವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್‌ ತಿಳಿಸಿದರು. ಪ್ರಕರಣದ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದ್ದು, ಅದರ ಭಾಗವಾಗಿ ನಟಿ ಹಾಗೂ ಆಯೋಗದ ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬೂ ಸುಂದರ್‌ ಉಡುಪಿಗೆ ಭೇಟಿ ನೀಡಿ ಅಲ್ಲಿನ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌ Read More »

ಕರಾವಳಿ

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜು. 27. ಪ್ರೀತಿ ಮಾಡಲು ಜಾತಿ-ಧರ್ಮ ಮತ್ತು ವಯಸ್ಸಿನ ಅಂತರವಿಲ್ಲವೆಂದು ಭಾವಿಸಿ ಅನೇಕರು ಲವ್ ಮಾಡಿ ಮದುವೆಯಾಗುತ್ತಾರೆ. ಪ್ರೀತಿಗೆ ಕಣ್ಣಿಲ್ಲ ಆದರೆ ಪ್ರೀತಿ ಕುರುಡಲ್ಲ ಎಂಬ ಮಾತಿನಂತೆ ಇಲ್ಲೋರ್ವಳು ತನ್ನ ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ವಿಚಿತ್ರ ಘಟನೆ ಉತ್ತರಪ್ರದೇಶದ ಜೌನ್‍ಪುರ ಜಿಲ್ಲೆಯ ತಾಜುದ್ದೀನ್‌ ಪುರ ಗ್ರಾಮದಲ್ಲಿ ನಡೆದಿದೆ. ಶುಭಂ ಎನ್ನುವ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ. ಈ ವಿವಾಹಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಆದರೆ ಇಬ್ಬರೂ ತಮ್ಮ ಕುಟುಂಬಗಳ

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್  ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40

ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ,

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್​ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್​ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್​ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು,

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಜುಲೈ 14 ರಂದು ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಮಾಡಿದ ನಂತರ, ಇಸ್ರೋ ಸಂಸ್ಥೆಯು ಪಿಎಸ್‌ಎಲ್‌ವಿ-ಸಿ 56 ಉಡಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. DS-SAR ಉಪಗ್ರಹವನ್ನು ಜುಲೈ 30 ರಂದು ಬೆಳಿಗ್ಗೆ 6:30 ಕ್ಕೆ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ಮೊದಲು, ಉಡಾವಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಹಲವು ಕಾರಣಗಳಿಂದಾಗಿ ಅದನ್ನು ಜುಲೈ 30ಕ್ಕೆ ಮರು ನಿಗದಿಪಡಿಸಲಾಗಿದೆ.

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸೇನಾಶಾಲೆಗೆ ತಲೆನೋವಾಗಿ ಪರಿಣಮಿಸಿದ ಪಾಕ್ ಗುಪ್ತಚರ ಸಂಸ್ಥೆ

(ನ್ಯೂಸ್ ಕಡಬ) newskadaba.com  ಜಮ್ಮು- ಕಾಶ್ಮೀರ, ಜು. 26. ಪಾಕಿಸ್ತಾನಿ ಗುಪ್ತಚರ ಸಂಸ್ಥೆಯ ಕಾರ್ಯಕರ್ತರು ಸೇನಾ ಶಾಲೆಯ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರ ವೈಯಕ್ತಿಕ ವಿವರಗಳನ್ನು ಹುಡುಕುತ್ತಿದ್ದು, ಜಮ್ಮು- ಕಾಶ್ಮೀರ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ತಲೆನೋವಾಗಿ ಪರಿಣಮಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಸೇನಾ ಶಾಲೆಗಳನ್ನು ನಿರ್ವಹಿಸುವ ಅಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮತ್ತು ಅಸ್ತಿತ್ವದಲ್ಲಿರುವ ಶಾಲಾ ಗುಂಪುಗಳನ್ನು ವಾಟ್ಸಾಪ್‌ನಲ್ಲಿ ರಾಜಿ ಮಾಡಿಕೊಂಡಿದ್ದಲ್ಲಿ ಅದನ್ನು ಅಳಿಸಲು ಬೋಧಕ ಸಿಬ್ಬಂದಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರ್ಮಿ

ಸೇನಾಶಾಲೆಗೆ ತಲೆನೋವಾಗಿ ಪರಿಣಮಿಸಿದ ಪಾಕ್ ಗುಪ್ತಚರ ಸಂಸ್ಥೆ Read More »

ರಾಷ್ಟ್ರೀಯ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವೆ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವೆ ಹೆಬ್ಬಾಳ್ಕರ್ Read More »

ಕರ್ನಾಟಕ
Scroll to Top