newskadaba

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 09. ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿಸೋಜಾ ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಡ್ಡಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿಸೋಜಾ ರವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು, 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »

ಕರಾವಳಿ

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್‍ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್‍ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್‌ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ. ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 09. ಹಳೆ ಸಾಮಗ್ರಿಗಳನ್ನು ಕಳವುಗೈದು ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ವ್ಯಾನ್ ಚಾಲಕನೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಲಪಾಡಿ ಕೆ .ಸಿ ರೋಡ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಂದ್ಯೋಡು ಪೇಟೆಯಲ್ಲಿನ ಅಂಗಡಿಯೊಂದನ್ನು ತೆರವುಗೊಳಿಸಲಾಗಿದ್ದು, ಈ ಅಂಗಡಿಯ ಶಟರ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಪಿಕಪ್ ವ್ಯಾನ್ ನಲ್ಲಿ ತುಂಬಿಸಿ ಸಾಗಾಟ ಮಾಡಿದ್ದು, ಇದರಿಂದ ಸಂಶಯಗೊಂಡ ಪರಿಸರದವರು ಮಾಲಕನಿಗೆ

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.   ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು ಎಂಬವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆದರೆ ಅಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ Read More »

ಕರಾವಳಿ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »

ಕ್ರೈಮ್ ನ್ಯೂಸ್

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top