newskadaba

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ […]

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದೆ.   ಬಂಧಿತ ಆರೋಪಿಗಳನ್ನು ಹೈದರಬಾದ್ ಮೂಲದ ಮಪಾಲ ಸರಳೇಬೆಟ್ಟು ನಿವಾಸಿ ತಿಪಿರ್ ನೇನಿ ಆದಿತ್ಯ(21) ಹಾಗೂ ತೆಲಂಗಾಣ ರಾಜ್ಯದ ಖಾನಪುರಂ ಮೂಲದ ಮಪಾಲ ಈಶ್ವರನಗರ ನಿವಾಸಿ ಮೊಗಿಲಿ ಹೇಮಂತ್ ರೆಡ್ಡಿ(20) ಎಂದು ಗುರುತಿಸಲಾಗಿದೆ. 2019ರ ಅ. 27ರಂದು ಉಡುಪಿ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ

(ನ್ಯೂಸ್ ಕಡಬ) newskadaba.com ಮಡಂತ್ಯಾರು, ಜೂ. 08. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಎಂಬವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕರವರು ಆದೇಶ ಹೊರಡಿಸಿದ್ದು, “ಪ್ರಸ್ತುತ ಬೆಂಗಳೂರಿನ ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿರುವ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದೆ.

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ Read More »

ಕರಾವಳಿ, ಕರ್ನಾಟಕ

11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 07. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್‌ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್‌ಎಸ್‌.ಆರ್‌. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್‌- ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ; ವಿ.ಅನುಕುಮಾರ್‌- ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್‌ ರಾಜ್‌ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ ಇಲಾಖೆ; ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು

11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಬಿಜೆಪಿಯು ಇದೀಗ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಕಾಂಗ್ರೆಸ್ ಸರಕಾರವು ಜನತೆಗೆ ಉಚಿತ ಆಮಿಷ ಕೊಟ್ಟು ಅಧಿಕಾರಕ್ಕೆ ಬಂದಿದೆ. ತೆರಿಗೆ ಹಣ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸದ ಕಾರಣ ಅವುಗಳನ್ನು ರದ್ದುಗೊಳಿಸಬೇಕು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ Read More »

ಕರ್ನಾಟಕ

ಬಂಟ್ವಾಳ: ಮಗುಚಿಬಿದ್ದು ರಿಕ್ಷಾ ಜಖಂ ➤ 50 ಲೀ. ಹಾಲು ರಸ್ತೆಪಾಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 07. ದನವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆ ಸೊಸೈಟಿಯ ಸಮೀಪ ನಡೆದಿದೆ. ಆಜೇರು ನಿವಾಸಿ ಶಾಂತಾರಾಮ ರಾವ್ ಎಂಬವರು ರಿಕ್ಷಾದಲ್ಲಿ ಮಂಗಳವಾರದಂದು ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50 ಲೀಟರ್ ಹಾಲು ರಸ್ತೆ ಪಾಲಾಗಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು

ಬಂಟ್ವಾಳ: ಮಗುಚಿಬಿದ್ದು ರಿಕ್ಷಾ ಜಖಂ ➤ 50 ಲೀ. ಹಾಲು ರಸ್ತೆಪಾಲು Read More »

ಕರಾವಳಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಮನೆ ರಿಪೇರಿ ಕಾರ್ಯ ➤ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ (ರಿ) ಪೆರ್ನೆ ವಲಯದ ಆಶ್ರಯ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಜೂ. 06. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಇದರ ವತಿಯಿಂದ ಕಲ್ಲಡ್ಕ ವಲಯದ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಕ್ಷೇತ್ರದಿಂದ ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಮಾತೃಶ್ರೀ ಅಮ್ಮನವರ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆ ರಿಪೇರಿ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಇವರು ಮನೆಯ ರಿಪೇರಿ ಕೆಲಸ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಮನೆ ರಿಪೇರಿ ಕಾರ್ಯ ➤ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ (ರಿ) ಪೆರ್ನೆ ವಲಯದ ಆಶ್ರಯ Read More »

ಕರಾವಳಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top