newskadaba

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 06. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಉಚಿತವಾಗಿ ನೀಡುತ್ತಿರುವುದು ಒಂದು RR‌ ನಂಬರ್​ಗೆ ಮಾತ್ರ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಇದು ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪ್ರಯೋಜನ ದೊರೆಯವುದು ಡೌಟ್ ಎಂಬುದಾಗಿ ಹೇಳಲಾಗುತ್ತಿದೆ. ಇದು […]

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಕರ್ನಾಟಕ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್‌ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್‌ ಕ್ಯಾಶಿಯರ್‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಈತ ಬಾರ್‌ ಬಂದ್‌ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು,

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ. ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಇದರ ವತಿಯಿಂದ ವ್ಯಾಪ್ತಿಯ ಎಲ್ಲಾ ಯುನಿಟ್ ಗಳ ಕಾರ್ಯಕರ್ತರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಲು ಕರೆ ಕೊಡುವುದರೊಂದಿಗೆ ಶೇರಾ ಬುಡೋಳಿ ಖಿಳ್ರ್ ಜುಮ್ಮಾ ಮಸೀದಿಯ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ನಾಯಕರುಗಳಾದ ಶೇರಾ ಇಬ್ರಾಹಿಂ ಹಾಜಿ ಹಾಗೂ ಹಬೀಬ್ ಶೇರಾ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ವೈ‌ಎಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ ಗುಡ್ ನ್ಯೂಸ್‌  ➤ ಉಚಿತ ಪ್ರಯಾಣಕ್ಕೆ ‘ಗ್ರೀನ್‌ ಸಿಗ್ನಲ್‌’ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ,30. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು.  

ಮಹಿಳೆಯರಿಗೆ ಗುಡ್ ನ್ಯೂಸ್‌  ➤ ಉಚಿತ ಪ್ರಯಾಣಕ್ಕೆ ‘ಗ್ರೀನ್‌ ಸಿಗ್ನಲ್‌’ ನೀಡಿದ ರಾಜ್ಯ ಸರ್ಕಾರ Read More »

ಕರ್ನಾಟಕ
Scroll to Top