newskadaba

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು

(ನ್ಯೂಸ್ ಕಡಬ)Newskadaba.com  ಉಡುಪಿ, ಮೇ.13. ಉಡುಪಿ ಜಿಲ್ಲೆಯಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಭ್ಯರ್ಥಿಗಳೆಲ್ಲರೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಸಾದರಾಜ್ ಕಾಂಚನ್, ವಿನಯ್ ಕುಮಾರ್ ಸೊರಕೆ, ಮುನಿಯ ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು Read More »

ಕರಾವಳಿ

ಆಟವಾಡುವಾಗ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೊಡಗು, ಮೇ.11. ತೆರೆದ ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.  

ಆಟವಾಡುವಾಗ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮೇ 04. ಚುನಾವಣೆಗೆ ಇನ್ನು ಕೇವಲ 6 ದಿನಗಳಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲಲು ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬಲು ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಬೂತ್ ನನ್ನ ಹೊಣೆ” ಎಂದು ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಮೂಲಕ ಪ್ರಚಾರಮಾಡಲು ತಯಾರಿ ಮಾಡಿಕೊಂಡಿದ್ದು, ಈ ವಿನೂತನ ಶೈಲಿಯ ಪ್ರಚಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಚಾಲನೆ ನೀಡಿದ್ದಾರೆ.

ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1, ಮೀನು ಹಿಡಿಯಲೆಂದು ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತರು ಎಂದು ತಿಳಿದು ಬಂದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಬಡ್ಡಿ ಆಟಗಾರನಾಗಿಯೂ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ. ಈತ ಈ

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಬಂಧ ಬೆಳೆಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ➤ ಕೊಡಲಿಯಿಂದ ಹತ್ಯೆ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.24. ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಕೊಡಲಿಯಿಂದ ದಂಪತಿ ಹತ್ಯೆ ಮಾಡಿರುವ ಘಟನೆ ಸುಲ್ತಾನ್‌ಪುರ ಜಿಲ್ಲೆಯ ಗೋಸೈಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಪುರ್ ಚಪರ್ಹ್ವಾ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿ ಗಂಗಾ ಪ್ರಸಾದ್ ಚೌಬೆ ವಾರಾಣಸಿಯ ಚೋಲಾಪುರದ ಬಂಟರಿ ಪ್ರದೇಶದ ನಿವಾಸಿ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ. ಇನ್ನು ಆರೋಪಿ ದಂಪತಿಯಾದ ಪ್ರದೀಪ್ ನಿಶಾದ್ ಮತ್ತು ಪದ್ಮಾವತಿಯಾಗಿದ್ದಾರೆ. ದಂಪತಿಯನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ

ಸಂಬಂಧ ಬೆಳೆಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ➤ ಕೊಡಲಿಯಿಂದ ಹತ್ಯೆ ಮಾಡಿದ ದಂಪತಿ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಟಿಪ್ಪರ್ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.20. ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್‌ ಲಾರಿಯೊಂದು ಬೆದ್ರಾಳ ರೈಲ್ವೇ ಸೇತುವೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಬಸಕ್ಕೆ ವಿದ್ಯತ್‌ ಕಂಬ ಧರೆಗೆ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿ ಬಿದ್ದಿದೆ. ಇನ್ನು ಟಿಪ್ಪರ್‌ ಚಾಲಕನ ಕೈಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್‌ ನ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ವರದಿಯಾಗಿದೆ.

ಪುತ್ತೂರು: ಟಿಪ್ಪರ್ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿ Read More »

ಕರಾವಳಿ

ಮದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ ಸಾಧ್ಯತೆ

 (ನ್ಯೂಸ್ ಕಡಬ)newskadaba.com ಚೆನ್ನೈ, ಏ.05. ಹುಲಿ ಸಂರಕ್ಷಿತ ಪ್ರದೇಶದ (ಎಂಟಿಆರ್) ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಾರಣದಿಂದ ಏಪ್ರಿಲ್‌ 06ರಿಂದ 09ರವರೆಗೆ ಶಿಬಿರಕ್ಕೆ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶವಿರುವುದಿಲ್ಲ. ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ, ಆಸ್ಕರ್ ವಿಜೇತ ಸಾಕ್ಷ್ಯಚಿತ್ರ – ದಿ ಎಲಿಫೆಂಟ್ ವಿಸ್ಪರರ್ಸ್‌ನ ತಾರೆಗಳಾದ ಬೊಮ್ಮನ್ ಮತ್ತು ಅವರ ಪತ್ನಿ ಬೆಲ್ಲಿ ಅವರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.   ಈ ಅವಧಿಯಲ್ಲಿ ಎಲ್ಲಾ ವಿಶ್ರಾಂತಿ ಗೃಹಗಳು, ಅತಿಥಿ ಗೃಹಗಳು ಮತ್ತು ರೆಸ್ಟೋರೆಂಟ್‌ಗಳನ್ನು

ಮದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೊಗಳನ್ನು ಕ್ಲಿಕ್ಕಿಸಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ‘ಆಂಧ್ರಪ್ರದೇಶದ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ಶಾರ್ಟ್‌ ಧರಿಸಿದ್ದ ಅವರ ಫೋಟೊವನ್ನು ಆರೋಪಿ ತನ್ನ ಮೊಬೈಲ್‌ ನಲ್ಲಿ ಕ್ಲಿಕ್ಕಿಸಿದ್ದ. ಅದನ್ನು ನೋಡಿದ್ದ ಮಹಿಳೆ, ಆತನನ್ನು ಪ್ರಶ್ನಿಸಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು.’  

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್‌, ಮಾ.28. ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಮೃತಪಟ್ಟಿದೆ. ಮೃತ ಚೀತಾ ‘ಸಾಶಾ’ ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಕುನೊ ರಾಷ್ಟ್ರೀಯ ಅಭಯಾರಣ್ಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top