newskadaba

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.22. ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೆಹಲಿ ನಗರಾದ್ಯಂತ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 100ಕ್ಕೂ ಎಫ್‌ಐಆರ್ ದಾಖಲಾಗಿದೆ. ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್‌ನಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವ್ಯಾನ್‌ವೊಂದು ಆಮ್ ಆದ್ಮಿ ಪಕ್ಷದ ಕಚೇರಿಯಿಂದ ಹೊರಟಿದ್ದು, ಕೂಡಲೇ ಆ ವ್ಯಾನ್‌ನ್ನು ಅಡ್ಡಗಟ್ಟಿ ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. […]

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ.22 ಸಿಲಿಕಾನ್​ ಸಿಟಿಯಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಿಂದ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ. ಬೇರೆ ಬೇರೆ ರೀತಿಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ.    

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಖಃ ದುಖಃ ಸಮನಾವಾಗಿ ಸ್ವಿಕರಿಸಲು ಕಲಿಸುವ ಹಬ್ಬ ಯುಗಾದಿ ➤ಎಚ್.ಮಲ್ಲಿಕಾರ್ಜುನ ಹರಪನಹಳ್ಳಿ

(ನ್ಯೂಸ್ ಕಡಬ)newskadaba.com ಮಾ.22. ಯುಗಾದಿ ಚೈತ್ರ ಮಾಸದ ಮೊದಲ ದಿನವಾಗಿದೆ. ಯುಗಾದಿಯ ಎಂದರೆ ಯುಗದ ಆದಿ ಎಂದರ್ಥ. ಯುಗಾದಿಯನ್ನು ಬಡವ-ಬಲ್ಲಿದರೆಂಬ ತಾರತಮ್ಯವಿಲ್ಲದೆ ಎಲ್ಲಾ ಹಿಂದೂಗಳೂ ಆಚರಿಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರೆ, ವ್ಯಾಪಾರಿಗಳು ಅಂದಿನ ದಿನವೇ ಶುಭ ಕಾರ್ಯವನ್ನು ಮಾಡುತ್ತಾರೆ. ವರ್ಷದ ಆರಂಭದ ಶುಭ ದಿನವಾದ ಯುಗಾದಿ ಹಿಂದೂ ಪಂಚಾಂಗದ ಪ್ರಥಮ ದಿವಸ. ಹಸಿರು ತೋರಣಗಳ ಅಲಂಕಾರ, ಬೇವು ಬೆಲ್ಲ ಮಿಶ್ರಣವನ್ನು ಹಂಚಿ ಸವಿಯುವ ಸಂಪ್ರದಾಯವಿದೆ.    

ಸುಖಃ ದುಖಃ ಸಮನಾವಾಗಿ ಸ್ವಿಕರಿಸಲು ಕಲಿಸುವ ಹಬ್ಬ ಯುಗಾದಿ ➤ಎಚ್.ಮಲ್ಲಿಕಾರ್ಜುನ ಹರಪನಹಳ್ಳಿ Read More »

ಕರಾವಳಿ

ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ  ಪ್ರತಿಭೋತ್ಸವ 2K23

(ನ್ಯೂಸ್ ಕಡಬ)newskadaba.com ದೋಹಾ, ಮಾ.22. ಅರಳುವ ಕನಸು ಉತ್ಸಾಹದ ಬೆಳಕು ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಖತ್ತರ್ ಸಮಿತಿ ವತಿಯಿಂ ಪ್ರತಿಭೋತ್ಸವ 2k23  ದಿನಾಂಕ 17-03-2023 ರಂದು ದೋಹಾದ ಐಐಸಿಸಿ  ಸಭಾಂಗಣದಲ್ಲಿ ನಡೆಯಿತು. ಕೆ.ಸಿ.ಎಫ್  ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಹನೀಫ್ ಪಾತೂರು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು,  ಐಸಿಎಫ್ ನಾಯಕರಾದ ಸಲಾಂ ಹಾಜಿ ಪಾಪಿನಶ್ಯೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಸಿಎಫ್ ನಡೆಸುವ ಕಾರ್ಯಚಟುವಟಿಕೆಗಳು ಶ್ಲಾಘನೀಯವಾಗಿದ್ದು ಅನಿವಾಸಿ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಕೊಲ್ಲಿ

ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ  ಪ್ರತಿಭೋತ್ಸವ 2K23 Read More »

ರಾಷ್ಟ್ರೀಯ ನ್ಯೂಸ್

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಬಗ್ಗೆ ರಾಜ್ಯ ಸರಕಾರವು ಶಿಫಾರಸ್ಸು ಮಾಡದಂತೆ ಕಂದಾಯ ಸಚಿವ ಆರ್. ಅಶೋಕ್ ತಡೆದಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟವು ಆರೋಪಿಸಿದೆ. ಈ ಕುರಿತು ಮಂಗಳವಾರದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಹೊನ್ನಯ್ಯಗೌಡ ಎಚ್, ಸಚಿವ ಆರ್. ಅಶೋಕ ಅವರ ಒತ್ತಡದಿಂದಾಗಿ ಮುಖ್ಯಮಂತ್ರಿಗಳು ನಟ ಪುನೀತ್ ರಾಜ್‍ಕುಮಾರ್

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ Read More »

ಕರ್ನಾಟಕ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರವರ ಕೊಲೆ ಪ್ರಕರಣವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಅವರ ಮನೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮನೋವೈದ್ಯ ಡಾ| ಪಿ.ವಿ.ಭಂಡಾರಿ, ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಏಳು ವರ್ಷಗಳು ಕಳೆದರೂ ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಗರಿಕ ಸೇವಾ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ Read More »

ಕರಾವಳಿ

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಸಂಸತ್ತಿನಲ್ಲಿ ಮಾತನಾಡುವುದನ್ನು ತಡೆಯುವುದು ಅಸಾಧ್ಯ. ವಾಕ್ ಸ್ವಾತಂತ್ರ್ಯ ಎಂಬುವುದು ಎಲ್ಲರಿಗೂ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಸುದ್ದಿಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರ ಮಾತುಕತೆಗೆ ಸಿದ್ದವಿದ್ದರೂ, ಪ್ರತಿಪಕ್ಷಗಳು ಬರುತ್ತಿಲ್ಲ. ಸರ್ಕಾರ ಯಾರೊಂದಿಗೆ ಮಾತನಾಡಬೇಕೆಂದಿದೆಯೋ ಅವರು ಮಾಧ್ಯಮಗಳ ಮುಂದೆ ಕುಳಿತು ಮಾತನಾಡುತ್ತಿದ್ದಾರೆ. ಬಳಿಕ ವಾಕ್ ಸ್ವಾತಂತ್ರ್ಯ ಬೇಕೆಂದು ಸಂಸತ್ತಿನಲ್ಲಿ ಘೋಷಣೆ ಕೂಗುತ್ತಾರೆ. ಆದರೆ ಸಂಸತ್ತಿನಲ್ಲಿ ಮಾತನಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ ಎಂದರು.

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 21. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭಿಸಿರುವ ಮೂಲಕ ಸಿಹಿ ಸುದ್ದಿ ನೀಡಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹೆಬ್ಬಾಳ, ಯಲಹಂಕ, ರಾಣಿಕ್ರಾಸ್/ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಬಸ್ ನಿಲ್ದಾಣಕ್ಕೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಪರಿಚಯಿಸಿದೆ. ಈ ಬಸ್ ಗಳು ಈಗಾಗಲೇ ಕಾರ್ಯಾಚರಣೆ ಆರಂಭಿಸಿವೆ.

ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸೇವೆ ಆರಂಭ Read More »

ಕರ್ನಾಟಕ
Theft, crime, Robbery

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಮಾ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ಮನೆಗಳಿಗೆ ಬೆಳಗ್ಗಿನ ಜಾವ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಗಳಾಗಿರುವ ರತ್ನಾಕರ ಜೈನ್ ಮತ್ತು ಪಕ್ಕದ ಮನೆಯ ಧೀರೇಂದ್ರ ಹೆಗ್ಡೆ ಎಂಬವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆ ಪೂಜೆ ಸಲ್ಲಿಸಲೆಂದು ಬಸದಿಗಳಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಕಳ್ಳರು ರತ್ನಾಕರ ಜೈನ್ ಅವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ಒಳ

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top