newskadaba

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಪಠ್ಯಪೂರಕ ಚಟುವಟಿಕೆಗಳ ಭಾಗವಾಗಿ ಇಕೋ ಕ್ಲಬ್ ವತಿಯಿಂದ ಸೈಂಟ್ ಜೋಕಿಮ್ಸ್ ಮತ್ತು ಸೈಂಟ್ ಆನ್ಸ್ ಪ್ರೌಢಶಾಲೆಯ ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಸುವರ್ಣ ನಿಲಯ ಕೋಡಿಬೈಲು ಶ್ರೀಮತಿ ದೇವಕಿ ಪೂಜಾರಿ ಇವರ ಮನೆಯ ಗದ್ದೆಯಲ್ಲಿ ಭತ್ತದ ಕೃಷಿ ಹಾಗೂ ನಾಟಿಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ನೇಜಿ ನಾಟಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್ ಡಿ ಸೋಜಾ ರವರು ವಿದ್ಯಾರ್ಥಿಗಳು ಭತ್ತದ […]

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ Read More »

ಕರಾವಳಿ

ಮಂಗಳೂರು ಮನೆ ಕುಸಿದುಬಿದ್ದು ಮೂವರು ಮೃತ್ಯು ಪರಿಹಾರ ಮೊತ್ತದ ಚೆಕ್ ವಿತರಿಸಿದ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಜು. 02. ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.   ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಪಂ ಸಿಇಒ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಸ್ಪಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ

ಮಂಗಳೂರು ಮನೆ ಕುಸಿದುಬಿದ್ದು ಮೂವರು ಮೃತ್ಯು ಪರಿಹಾರ ಮೊತ್ತದ ಚೆಕ್ ವಿತರಿಸಿದ ಯು.ಟಿ. ಖಾದರ್ Read More »

ಕರಾವಳಿ

ಕಾಣೆಯಾದವರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಜು. 02. ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿ ನಿವಾಸಿ ಭೂಷಣ್ ಸಿಂಗ್ (19 ವರ್ಷ) ಎಂಬವರು ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂನ್ 29 ರಂದು ಮನೆ ಬಿಟ್ಟು ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.4 ಅಡಿ, ಎಣ್ಣೆಕಪ್ಪು ಮೈಬಣ್ಣ, ಕಪ್ಪು ಕೂದಲು, ಸಪೂರ ಶರೀರ ಹೊಂದಿರುತ್ತಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ

ಕಾಣೆಯಾದವರ ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ

(ನ್ಯೂಸ್ ಕಡಬ) newskadaba.com ಜು. 02. ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Special Intensive Revision-SIR) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತ ಮತದಾರರು ಹಾಗೂ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತದಾರರ ಹೆಸರನ್ನು ಮತದಾರರ

ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ Read More »

ಕರಾವಳಿ

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 02. 9 ವರ್ಷಗಳಿಂದ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಧರ್ಮಸ್ಥಳ ಠಾಣಾ ಅ.ಕ್ರ:169/2016.  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಎಂಬವರು ಆಂಧ್ರಪ್ರದೇಶದ ಚಿತ್ತೂರು  ಎಂಬಲ್ಲಿಂದ ದಸ್ತಗಿರಿ ಮಾಡಿ  ಜುಲೈ 1ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು. 02. ರಸ್ತೆಯಂಚಿನಲ್ಲಿದ್ದ ಅಕೇಶಿಯ ಜಾತಿಯ ಮರವೊಂದು ಬುಡ ಸಮೇತ ಧರಶಾಯಿಯಾಗಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ  ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ಬುಧವಾರದಂದು ಸಂಜೆ ನಡೆದಿದೆ.   ಗಾಯಗೊಂಡವರನ್ನು ಆತೂರು ಪೇಟೆಯಲ್ಲಿರುವ ಡಿಲೈಟ್ ಹಾರ್ಡ್ ವೇರ್ ಅಂಗಡಿ ಮಾಲಕ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಕುಂಡಾಜೆಯಿಂದ ಅಂಗಡಿಯತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ. ಘಟನೆಯಿಂದ ಸ್ಕೂಟಿಗೆ

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 01. ಕಳೆದ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಸೌಮ್ಯ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಕಡಬ ತಾಲೂಕಿನ ನೆಲ್ಯಾಡಿಯ ಸುದೀಪ್ ರೈ ಆತ್ಮಹತ್ಯೆ ಗೆ ಪತ್ನಿ ಸೌಮ್ಯ ಶೆಟ್ಟಿ ನೀಡಿರುವ ಮಾನಸಿಕ ಕಿರುಕುಳ ಹಾಗೂ ಆತ್ಮಹತ್ಯೆ ಪ್ರಚೋದನೆಯೇ ಕಾರಣ ಎಂದು ಪ್ರಕರಣ ದಾಖಲಾಗಿತ್ತು. ಸುದೀಪ್ ರೈ ಅವರ ತಂದೆ ಬಿ.ದಾಮೋದರ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ”

(ನ್ಯೂಸ್ ಕಡಬ) newskadaba.com ಜೂ. 27. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ.

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ​ಕಡಬ, ಜು. 03. ಕಡಬದ ವಸ್ತ್ರ ಮಳಿಗೆಗಳಲ್ಲಿ ಒಂದಾದ ‘ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್’ ತನ್ನ ಗ್ರಾಹಕರಿಗಾಗಿ ಪ್ರತೀ ವರ್ಷದಂತೆ ಈ ವರ್ಷವೂ ಅತ್ಯಂತ ಆಕರ್ಷಕ ಬಹುಮಾನಗಳನ್ನು ಒಳಗೊಂಡಿರುವ ‘ಪಿಲ್ಯ ಮೇಗಾ ಆಫರ್ ಸೀಸನ್-3’ ಅನ್ನು ಪ್ರಸ್ತುತಪಡಿಸುತ್ತಿದೆ.   ಕಳೆದ ಎರಡು ಸೀಸನ್‌ಗಳಲ್ಲಿ ಸಾರ್ವಜನಿಕರಿಂದ ಪಡೆದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಈ ವರ್ಷದ ಆಫರ್‌ ನಲ್ಲಿ ಮಾರುತಿ K10 ಕಾರು, ನಾಲ್ಕು ದ್ವಿಚಕ್ರ ವಾಹನಗಳು ಸೇರಿದಂತೆ 101 ಬೃಹತ್ ಬಹುಮಾನಗಳನ್ನು

ಕಡಬ: ಪಿಲ್ಯ ಫ್ಯಾಶನ್‌ ವತಿಯಿಂದ ‘ಪಿಲ್ಯ ಮೆಗಾ ಆಫರ್ ಸೀಸನ್-3’ಗೆ ಚಾಲನೆ 50 ಆಕರ್ಷಕ ಬಹುಮಾನ ಸಹಿತ 101 ಬಹುಮಾನ ಗೆಲ್ಲುವ ಸುವರ್ಣಾವಕಾಶ Read More »

ಕರಾವಳಿ
Scroll to Top