newskadaba

Death, deadbody, Waterfall

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21.  ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ,

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 20.  ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನವನ್ನ ಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಅಡ್ಡಿಪಡಿಸಲು ಸಿಸೋಡಿಯಾ ‘ದೊಡ್ಡ ಪ್ರಮಾಣದ ಡಿಜಿಟಲ್ ಪುರಾವೆಗಳನ್ನ ನಾಶಪಡಿಸುವಲ್ಲಿ’ ಭಾಗಿಯಾಗಿದ್ದಾರೆ ಮತ್ತು 14 ಫೋನ್‌‌ಗಳನ್ನ ಬದಲಿಸಿ ನಾಶಪಡಿಸಿದ್ದಾರೆ ಎಂದು ಹಿಂದಿನ ವಾರ ಇಡಿ ಹೇಳಿಕೊಂಡಿತ್ತು. ಇನ್ನು ಭ್ರಷ್ಟಾಚಾರದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ Read More »

ಕ್ರೈಮ್ ನ್ಯೂಸ್

➤ ಶಾಸಕ ರಿಜ್ವಾನ್ ಅರ್ಷದ್ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಬೆಂಕಿ ಹಚ್ಚಿದ ಮಹಿಳೆಯರು!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.   ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು, ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದಾರೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಫರೀದಾ ಅಹಮದ್ ಒಡೆತನದ ಗೋದಾಮಿನ ಮೇಲೆ ದಾಳಿ ನಡೆಸಿ ಸಾವಿರಾರು ಪಡಿತರ ಕಿಟ್‌ಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಶಿವಾಜಿನಗರದಲ್ಲಿ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದರು. ಚುನಾವಣಾ ಕಾರಣಕ್ಕಾಗಿ ಮಾಜಿ ಕಾರ್ಪೊರೇಟರ್ ರಂಜಾನ್ ಸಮಯದಲ್ಲಿ ವಿತರಿಸುವ ಪಡಿತರ ಕಿಟ್‌ಗಳನ್ನು ತಡೆಯುವ ಮಾರ್ಗವಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

➤ ಶಾಸಕ ರಿಜ್ವಾನ್ ಅರ್ಷದ್ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಬೆಂಕಿ ಹಚ್ಚಿದ ಮಹಿಳೆಯರು! Read More »

ಕರ್ನಾಟಕ

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ವರದರಾಜು ನೀಡಿದ ದೂರಿನಂತೆ 36 ಮಂದಿ ಕಾಂಗ್ರೆಸ್

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು Read More »

ಕರ್ನಾಟಕ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕರ್ ಕಂಪನಿ ಮೇಲೆ ತಹಶೀಲ್ದಾರ್ ದಾಳಿ ➤ ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್ ಗಳು ವಶ

(ನ್ಯೂಸ್ ಕಡಬ) newskadaba.com ರಾಮನಗರ, ಮಾ. 18. ಕುಕ್ಕರ್ ತಯಾರಿಕಾ ಕಂಪೆನಿ ಮೇಲೆ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದ ತಂಡವು ದಾಳಿ ನಡೆಸಿ, 2900 ಕುಕ್ಕರ್ ಗಳನ್ನು ವಶಕ್ಕೆ ಪಡೆದ ಘಟನೆ ಕರಿಕಲ್ ದೊಡ್ಡಿ ಎಂಬಲ್ಲಿ ನಡೆದಿದೆ. ವಿಶ್ವಾಸ್ ವೈದ್ಯ ಎಂಬವರಿಗೆ ಸೇರಿದ ಕಂಪೆನಿಗೆ ದಾಳಿ ನಡೆಸಿದ ತಹಶೀಲ್ದಾರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದ್ದ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕುಕ್ಕರ್ ಕಂಪನಿ ಮೇಲೆ ತಹಶೀಲ್ದಾರ್ ದಾಳಿ ➤ ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್ ಗಳು ವಶ Read More »

ಕರ್ನಾಟಕ

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಮಾ. 17. 60 ವರ್ಷದ ವೃದ್ದನೋರ್ವ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಬಳಿಕ ವಿಚಾರವನ್ನು ಯಾರೊಂದಿಗೂ ಹೇಳದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ವಿಚಿತ್ರ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.   ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿ, ಮೊಮ್ಮಗಳನ್ನು ಕೊಡಲಿ ತರಲು

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 17. ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಆರೋಪಿ ಸಹಿತ ಬೈಂದೂರು ಠಾಣಾ ಪೊಲೀಸರು ವಶಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆ ಹಿಡಿದು,

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top