newskadaba

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕೇಂದ್ರ ವಲಯ ಪೊಲೀಸರು 21 ಜನರನ್ನು ಬಂಧಿಸಿ, 25.15 ಲಕ್ಷ ನಗದು ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಇಸುವನಹಳ್ಳಿ ಎಂಬಲ್ಲಿ ನಡೆದಿದೆ. ಕೆಂದ್ರ ವಲಯದ ಐ.ಜಿ.ಪಿ ರವಿಕಾಂತೇಗೌಡ ಆದೇಶದ ಮೇರೆಗೆ ಕೇಂದ್ರ ವಲಯ ಅಪರಾಧ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ .ಪಾಟೀಲ್ ಅವರ ತಂಡ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಮಾವಿನ ತೋಟದಲ್ಲಿ ಸುಮಾರು 20 ರಿಂದ 30 ಮಂದಿ ಹಣವನ್ನು ಪಣವಾಗಿಟ್ಟು […]

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್       Read More »

ಕರ್ನಾಟಕ

ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಕಳೆದ ತಿಂಗಳು ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಬಳಿಕವೂ ಕಾಡಾನೆಗಳ ಉಪಟಳ ಜನರನ್ನು ತಲ್ಲಣಗೊಳಿಸಿದ್ದು, ಆನೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೂಡಲೇ ಪುನರಾರಂಭಿಸಬೇಕು ಎಂದು ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ. ಅವರು ಆಗ್ರಹಿಸಿದ್ದಾರೆ. ಈ ಕುರಿತಂತೆ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜೀವಭಯ ಹುಟ್ಟಿಸಿರುವ ಎಲ್ಲ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಲಾಗುವುದು ಎಂದು ಹೇಳಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆಯು, ಒಂದು ಸಾಧು

ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ Read More »

ಕರಾವಳಿ, ಕರ್ನಾಟಕ

ಸುಳ್ಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ ರಮೇಶ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ‌, ಮಾ. 17. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಬಿ.ಇ. ರಮೇಶ್ ರವರು ಅಧಿಕಾರ ಸ್ವೀಕರಿಸಿದರು. ಪ್ರಭಾರ ಬಿಇಒ ಶ್ರೀಮತಿ ವೀಣಾ ಎಂಟಿ ಅವರು ಅಧಿಕಾರ ಹಸ್ತಾಂತರಿಸಿದರು. ಬಿಇಒ ಕಚೇರಿ ಸಿಬ್ಬಂದಿಗಳು ನೂತನ ಶಿಕ್ಷಣಾಧಿಕಾರಿಗಳನ್ನು ಸ್ವಾಗತಿಸಿದರು.

ಸುಳ್ಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ ರಮೇಶ್ ಅಧಿಕಾರ ಸ್ವೀಕಾರ Read More »

ಕರಾವಳಿ

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 17. ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಿನ್ಸ್ ದೀಕ್ಷಿತ್ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು, ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದೀಕ್ಷೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ Read More »

ಕರ್ನಾಟಕ

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಮಾ. 17. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಮೃತಪಟ್ಟು, 11 ಮಂದಿಯನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕನ್ನಡ ಚಲನಚಿತ್ರ ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಹಾಕಿರುವ ಕುರಿತು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿಯವರ ಪಕ್ಕದಲ್ಲಿ ಯಶೋಧಮ್ಮ ಹಾಗೂ ರಾಜಣ್ಣ ಎಂಬವರ ಮನೆಯೂ ಇದ್ದು ಅವರು, ರಸ್ತೆಗೆ ಅಡ್ಡಲಾಗಿ ಕಾರುಗಳನ್ನು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದರೆ ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾನಿ ದೂರು ನೀಡಿದ್ದಲ್ಲದೇ, ಅವರ ವಿರುದ್ದ

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರಿನ ತುರಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚು ➤ 20 ಎಕರೆ ಭಸ್ಮ,

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16.  ಬೇಸಿಗೆಯ ದಿನಗಳು ಆಗಮಿಸುತ್ತಿದ್ದಂತೆ ಅಗ್ನಿ ಅನಾಹುತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಈಗಾಗಲೇ ಕರ್ನಾಟಕದ ಹಲವು ಕಡೆಗಳಲ್ಲಿ ಕಾಡ್ಗಿಚ್ಚಿನಿಂದ ಅರಣ್ಯಗಳು ಹೊತ್ತಿ ಉರಿಯುತ್ತಿವೆ. ಇದೀಗ ಬೆಂಗಳೂರಿನ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಗಿಡ, ಮರಗಳು ಬೆಂಕಿಗಾಹುತಿಯಾಗಿವೆ. ಬೇಸಿಗೆಯ ದಿನಗಳು ಆಗಮಿಸುತ್ತಿದ್ದಂತೆ ಅಗ್ನಿ ಅನಾಹುತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಕೆಲವೆಡೆ ಕಾಡ್ಗಿಚ್ಚಿನಿಂದ ಅರಣ್ಯಗಳು ಹೊತ್ತಿ ಉರಿಯುತ್ತಿವೆ. ಅದರಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ಹೊಂದಿಕೊಂಡಿರುವ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಬೆಂಗಳೂರಿನ ತುರಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚು ➤ 20 ಎಕರೆ ಭಸ್ಮ, Read More »

ಕರ್ನಾಟಕ

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ’ ➤ಡಿಸಿ

(ನ್ಯೂಸ್ ಕಡಬ) newskadaba.com.ಉಡುಪಿ..ಮಾ 16.  ಬೇಸಿಗೆಯಲ್ಲಿ ಜಿಲ್ಲೆಯನಗರ ಹಾಗೂ ಗ್ರಾಮೀಣ ಭಾಗದ ಜನರಿಗೆಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತವೆ. ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್‌ ಇದುವರೆಗೆ

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ’ ➤ಡಿಸಿ Read More »

ಕರಾವಳಿ, ಕರ್ನಾಟಕ
Death, deadbody, Waterfall

ವಿಷ ಸೇವಿಸಿ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 15. ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಈತನ ತಂದೆ ತಾಯಿ ಹಾಗೂ ಸಹೋದರ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಈ ಕುರಿತು ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಎಂಬಾತ ಪ್ರಜ್ವಲ್ ಅಣ್ಣ ಉಜ್ವಲ್‌ಗೆ ಕರೆಮಾಡಿ ವಿಷಯ ತಿಳಿಸಿದ್ದನು. ತಕ್ಷಣವೇ ಪ್ರಜ್ವಲ್‌ ನನ್ನು ಮಣಿಪಾಲದ ಆಸ್ಪತ್ರೆಗೆ

ವಿಷ ಸೇವಿಸಿ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top