newskadaba

ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಮಾ. 09. ಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿರುವ ಘಟನೆ ನಡೆದಿದೆ.   ಸಾರಂಗದ ಮೇಲೆ ನಾಯಿಗಳ ದಾಳಿಯನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಸಾರಂಗವನ್ನು ರಕ್ಷಿಸಿದ್ದಾರೆ. ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾರಂಗ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು Read More »

ಕರ್ನಾಟಕ

ಮಂಗಳೂರು ವಿವಿ MBA ಪರೀಕ್ಷೆ    ➤ ಅವಿಷ್ಮಾ ಆಳ್ವಾರಿಗೆ ಪ್ರಥಮ ರ್ಯಾಂಕ್

(ನ್ಯೂಸ್ ಕಡಬ)newskadaba.com   ಮಂಗಳೂರು, ಮಾ.09. ಮಂಗಳೂರು ವಿಶ್ವವಿದ್ಯಾಲಯದ ಎಂಬಿಎ ಪರೀಕ್ಷೆಯಲ್ಲಿ ಮಂಗಳೂರು ಮನೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಆವಿಷ್ಮಾ ಆಳ್ವಾ ಬಿ. ಅವರು ಪ್ರಥಮ ರ್ಯಾಂಕ್  ಪಡೆದುಕೊಂಡಿದ್ದಾರೆ. ಆವಿಷ್ಮಾ ಆಳ್ವಾ ಬಿ. ಅವರು ಶಾಲಾ ಮತ್ತು ಪಿಯುಸಿ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಸಂಸ್ಥೆಯಲ್ಲಿ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.97% ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.

ಮಂಗಳೂರು ವಿವಿ MBA ಪರೀಕ್ಷೆ    ➤ ಅವಿಷ್ಮಾ ಆಳ್ವಾರಿಗೆ ಪ್ರಥಮ ರ್ಯಾಂಕ್ Read More »

ಕರಾವಳಿ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !          

(ನ್ಯೂಸ್ ಕಡಬ)newskadaba.com ಕಡಬ, ಮಾ. 07. 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್ಸ್ ನ ಬುಲ್ ಬುಲ್ ವಿಭಾಗದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಹಸ್ತಾ.ಪಿ.ಎ ಅವರಗೆ ಸುವರ್ಣ ಗರಿ ಪ್ರಶಸ್ತಿ ಲಭಿಸಿದೆ. ಮಾ.05 ರಂದು ದ.ಕ ಜಿಲ್ಲಾಧಿಕಾರಿಯವರ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್ , ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !           Read More »

ಕರಾವಳಿ

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 15, ಕೊನೆಯ ದಿನವಾಗಿರುತ್ತದೆ.  

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ Read More »

ಕರ್ನಾಟಕ

➤ ಅಮೆಜಾನ್‌ ಅರಣ್ಯದಲ್ಲಿ ತಿಂಗಳು ಕಳೆದ ಯುವಕ!

ನ್ಯೂಸ್ ಕಡಬ) newskadaba.com. ಬೊಲಿವಿಯಾ, ಮಾ 4. ಬರೋಬ್ಬರಿ ಒಂದು ತಿಂಗಳ ಕಾಲ ಅಮೆಜಾನ್ ಕಾಡಿನಲ್ಲಿ ಬಾಕಿಯಾಗಿದ್ದ, ವ್ಯಕ್ತಿಯೊಬ್ಬ ಎರೆ ಹುಳು ತಿಂದು, ತನ್ನದೇ ಮೂತ್ರ ಕುಡಿದು ಬದುಕಿದ ಹೃದಯ ವಿದ್ರಾವಕ ಘಟನೆ ನಡೆದಿದೆ.  ಜೊನಾಟನ್ ಅಕೋಸ್ಟಾ (30) ಎಂಬಾತ ಸ್ನೇಹಿತರೊಂದಿಗೆ ಜನವರಿ 25ರಂದು ಅಮೆಜಾನ್ ಕಾಡಿನಲ್ಲಿ ಭೇಟಿಯಾಡುವ ಪ್ರವಾಸ ಆರಂಭಿಸಿದ್ದರು. ಆದರೆ ಸ್ನೇಹಿತರ ಗುಂಪಿನಿಂದ ಅವರು ಅಚಾನಕ್‌ ಆಗಿ ಕಳೆದು ಹೋಗಿದ್ದರು. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದರೂ ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ನೇಹಿತರು ವಾಪಾಸ್ ಬಂದಿದ್ದರು.

➤ ಅಮೆಜಾನ್‌ ಅರಣ್ಯದಲ್ಲಿ ತಿಂಗಳು ಕಳೆದ ಯುವಕ! Read More »

ಕರಾವಳಿ

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.04. ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು

(ನ್ಯೂಸ್ ಕಡಬ) newskadaba.co.ಬೆಂಗಳೂರು, ಮಾ 4.  2022ರ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಅಲೆಸ್‌ ಬಿಯಾಲಿಯಾಟ್‌ಸ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಲಾರಸ್‌ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ವಿರುದ್ದ ಪ್ರತಿಭಟಿಸಲು ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹೋದ್ಯೋಗಿಗಳು ತಪ್ಪತಸ್ಥರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜೈಲು ಶಿಕ್ಷೆಯ ತೀರ್ಪು ನೀಡಿದೆ. ಸರ್ವಾಧಿಕಾರಿ ಅಲೆಕ್ಸಾಂಡರ್‌ ಲುಕಶೆಂಕೊ ಅವರು

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು Read More »

ರಾಷ್ಟ್ರೀಯ ನ್ಯೂಸ್

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.  ಹೈದರಾಬಾದ್, ಮಾ 04 ಕಾಲೇಜಿನಲ್ಲಿ ಊಟ ಮುಗಿಸಿ, ಮೊದಲ ತರಗತಿಯನ್ನು ಮುಗಿಸಿ ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತೆಲಂಗಾಣದ ಗುಂಡ್ಲಾ ಪೋಚಂಪಲ್ಲಿಯಲ್ಲಿರುವ ಎಂಆರ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರ್‌ ವಿದ್ಯಾರ್ಥಿ ಸಚಿನ್‌ (18) ಮೃತ ದುರ್ದೈವಿ. ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಚಿನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.   ಮಡಿಕೇರಿ ಕೊಡಗು ಜಿಲ್ಲೆಯ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಗೋಣಿಕೊಪ್ಪಲಿನಲ್ಲಿ ಇಂದು ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಿದರು.  ನಂತರ ಮಾತನಾಡಿದ  ಅವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನೇ ಬಳಕೆ  ಮಾಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ಸರ್ವಾಧ್ಯಕ್ಷೆ ಲೇಖಕಿ ಡಾ. ಎಂ.ಪಿ. ರೇಖಾ ಅವರನ್ನು ಪಾಲಿ ಬೆಟ್ಟದ ಕ್ರಾಸ್ ರಸ್ತೆಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು.

➤ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ Read More »

ಕರ್ನಾಟಕ

➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com.ಯಾದಗಿರಿ, ಮಾ 4.   ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ.  ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು. ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು

➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top