newskadaba

➤ 2025ರ ವೇಳೆಗೆ ತಂಬಾಕು ಮುಕ್ತ ಕರ್ನಾಟಕಕ್ಕೆ ಚಿಂತನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು .  ಫೆ.28.  2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು ರಚಿಸಲು ಚಿಂತನೆ ನಡೆಸಿದೆ. ನ್ಯೂಜಿಲೆಂಡ್ ಮಾದರಿಯನ್ನು ಅಳವಡಿಸಿಕೊಳ್ಳುವುದರ ಪರಿಣಾಮವಾಗಿ, ವರ್ಷಗಳು ಕಳೆದಂತೆ, ಕಡಿಮೆ ಜನರು ಮಾತ್ರ ತಂಬಾಕು ಖರೀದಿಸಲು ಸಾಧ್ಯವಾಗುತ್ತದೆ ಮತ್ತು ತಂಬಾಕು ಮುಕ್ತ ಪೀಳಿಗೆಗೆ ದಾರಿ ಮಾಡಿಕೊಡುತ್ತದೆ.

➤ 2025ರ ವೇಳೆಗೆ ತಂಬಾಕು ಮುಕ್ತ ಕರ್ನಾಟಕಕ್ಕೆ ಚಿಂತನೆ Read More »

ಕರ್ನಾಟಕ

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ದೆಹಲಿ .  ಫೆ.28. ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ  ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ..

(ನ್ಯೂಸ್ ಕಡಬ) newskadaba.com. ಬೆಳಗಾವಿ ಫೆ.27.  ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ  ಮೋದಿ  ರೋಡ್ ಶೋ ನಲ್ಲಿ ಪಾಲ್ಗೊಂಡರು. ರಸ್ತೆಯ ತುಂಬ ಸೇರಿದ್ದ ಜನಸಾಗರ ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಟ್ಟಡಗಳ ಮೇಲೇರಿದ ಜನರು, ಬಿಜೆಪಿ ಭಾವುಟ ಪ್ರದರ್ಶಿಸುತ್ತಾ, ಮೋದಿ ಪರ ಜೈಕಾರ ಹಾಕಿ ಹರ್ಷೋದ್ಗಾರ ಮಾಡಿದರು.

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ.. Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ!

(ನ್ಯೂಸ್ ಕಡಬ) newskadaba.com.ಕುಂದಾಪುರ. ಫೆ.27. ಪಿಕಪ್ ವಾಹನ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ  ಘಟನೆ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ. ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ. ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು, ಚಾಲಕನಿಗೆ  ಸಣ್ಣ ಪುಟ್ಟಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com. ಶಿವಮೊಗ್ಗ. ಫೆ.27.ಶಿವಮೊಗ್ಗದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.  ಹಾಗೂ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು. ಪ್ರಧಾನಿಯವರ ಕಾರ್ಯಕ್ರಮಕ್ಕೆ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 775 ಎಕರೆ

➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ Read More »

ಕರ್ನಾಟಕ

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಫೆ. 20ರಂದು ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋಮಾನದ ಬಾಲಕಿಯರ ವಿಭಾಗದ1500 ಮೀ. ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಶ್ಮಾ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತಂಟೆಪ್ಪಾಡಿ ಅವರು ತರಬೇತಿಯನ್ನು ನೀಡಿರುತ್ತಾರೆ. ಇವರು ಮರ್ಧಾಳ ಗ್ರಾಮದ

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ

(ನ್ಯೂಸ್ ಕಡಬ) newskadaba.com. ದೆಹಲಿ. ಫೆ.25.  ಭಾರತ್ ಜೋಡೊ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ತಿರುವು ನೀಡಲಿದೆ ಎಂದಿದ್ದಾರೆ.

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಂಧ್ರದ ರಾಜ್ಯಪಾಲರಾಗಿ ನಿವೃತ್ತ ನ್ಯಾ.ಅಬ್ದುಲ್‌ ನಜೀರ್‌ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.25. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದವರಾದ ಅಬ್ದುಲ್‌ ನಜೀರ್‌ ಅವರು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ನ್ಯಾ.ನಜೀರ್‌ ಅವರಿಗೆ ರಾಜ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.  

ಆಂಧ್ರದ ರಾಜ್ಯಪಾಲರಾಗಿ ನಿವೃತ್ತ ನ್ಯಾ.ಅಬ್ದುಲ್‌ ನಜೀರ್‌ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತ್ಯು…!

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.25. ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತಪಟ್ಟ ಘಟನೆ ಗುಜರಾತ್ ನ ಭಾವನಗರದ ಸುಭಾಷ್‌ನಗರ ಪ್ರದೇಶದಲ್ಲಿ ನಡೆದಿದೆ. ಭರವಾಡ ಕುಟುಂಬದ ಜಿನಾಭಾಯಿ ಭಾಕಾಭಾಯಿ ರಾಥೋಡ್ ಎಂಬವರ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರನ ವಿವಾಹ ನಿಗದಿಯಾಗಿತ್ತು. ಮದುವೆಯ ವೇಳೆ ಜಿನಾಭಾಯಿ ಅವರ ಮಗಳು ಹೇತಾಳ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.ತಕ್ಷಣವೇ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ತಪಾಸಣೆ ನಡೆಸಿದ ವೈದ್ಯರು ಯುವತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.  

ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತ್ಯು…! Read More »

ರಾಷ್ಟ್ರೀಯ ನ್ಯೂಸ್

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com. ಕಡಬ. ಫೆ.25.  ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ  ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ  ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ನಡೆದಿದೆ.  ಬಿಳಿನೆಲೆ ಗ್ರಾಮದ ವಾಲ್ತಾಜೆ ನಿವಾಸಿ ಬಾಲಕೃಷ್ಣ (49ವ.) ಗಾಯಗೊಂಡವರು.  ಬಾಲಕೃಷ್ಣ ಹಾಗೂ ಅವರ ಪತ್ನಿ ನೆಟ್ಟಣ ಪೇಟೆಗೆ ಬಂದವರು ದಿನಸಿ ಸಾಮಾನು ಖರೀದಿಸಿ ವಾಪಾಸು ವಾಲ್ತಾಜೆ ಮನೆಯ ಕಡೆಗೆ ಹೋಗಲೆಂದು ನೆಟ್ಟಣ ಪೇಟೆಯ ಗಾರ್ಮೆಂಟ್ ಶಾಪೊಂದರ ಎದುರುಗಡೆ ರಸ್ತೆ ದಾಟುತ್ತಿರುವ ಸಂದರ್ಭ ಕಡಬ ಕಡೆಯಿಂದ ಬಂದ ಟಾಟಾ

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top